ನವದೆಹಲಿ: ದೆಹಲಿ ನೂತನ ಸಿಎಂ ಸ್ಥಾನಕ್ಕೆ ಸಚಿವೆ ಅತಿಶಿ (Atishi) ಅವರ ಹೆಸರನ್ನು ಅರವಿಂದ್ ಕೇಜ್ರಿವಾಲ್ (Arvind Kejriwal) ಪ್ರಸ್ತಾಪಿಸಿದ್ದಾರೆ. ಅತಿಶಿ ಅವರು ದೆಹಲಿ ಎಎಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂದು ಎಎಪಿ ಮೂಲಗಳು ತಿಳಿಸಿವೆ.
ಇಂದು ಮಧ್ಯಾಹ್ನ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರನ್ನು ಭೇಟಿಯಾದ ನಂತರ ಅರವಿಂದ್ ಕೇಜ್ರಿವಾಲ್ ಅವರು ಉನ್ನತ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ದೆಹಲಿ ಸಚಿವ ಅತಿಶಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇಂದು ನಡೆದ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಇಂದು ಮಧ್ಯಾಹ್ನ ದೆಹಲಿಗೆ ನೂತನ ಮುಖ್ಯಮಂತ್ರಿ ಘೋಷಣೆ
ಇಂದಿನ ಎಎಪಿ ಸಭೆಯಲ್ಲಿ, ಪಕ್ಷದ ನಾಯಕ ದಿಲೀಪ್ ಪಾಂಡೆ ಅವರು, ಸಿಎಂ ಯಾರೆಂದು ಕೇಜ್ರಿವಾಲ್ ನಿರ್ಧರಿಸಬೇಕೆಂದು ಪ್ರಸ್ತಾಪಿಸಿದರು. ಎಎಪಿ ರಾಷ್ಟ್ರೀಯ ಸಂಚಾಲಕರು ಅತಿಶಿ ಅವರ ಹೆಸರನ್ನು ಪ್ರಸ್ತಾಪಿಸಿದಾಗ, ಎಲ್ಲಾ ಎಎಪಿ ಶಾಸಕರು ಎದ್ದುನಿಂತು ಅದನ್ನು ಒಪ್ಪಿಕೊಂಡರು. ಎಂಎಸ್ ಅತಿಶಿ ಅವರು ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿದ್ದಾರೆಂದು ಮೂಲಗಳು ಹೇಳಿವೆ.
ಅತಿಶಿ ಪ್ರಸ್ತುತ ದೆಹಲಿ ಸರ್ಕಾರದಲ್ಲಿ ಶಿಕ್ಷಣ ಮತ್ತು PWD ಪ್ರಮುಖ ಖಾತೆಗಳನ್ನು ಹೊಂದಿದ್ದಾರೆ. ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದ ಹಳೆಯ ವಿದ್ಯಾರ್ಥಿ ಅತಿಶಿ ಅವರು ದೆಹಲಿಯ ಶಾಲೆಗಳಲ್ಲಿ ಶಿಕ್ಷಣವನ್ನು ಕೂಲಂಕಷವಾಗಿ ಪರಿಶೀಲಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಕೇಸ್- ಇಂದು ಸುಪ್ರೀಂನಲ್ಲಿ ವಿಚಾರಣೆ
ಕಲ್ಕಾಜಿ ಕ್ಷೇತ್ರದ ಶಾಸಕಿಯಾಗಿರುವ ಅತಿಶಿ ಅವರು, ಮದ್ಯ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಸೋಡಿಯಾ ಮತ್ತು ಸಿಎಂ ಅರವಿಂದ್ ಕೇಜ್ರಿವಾಲ್ ಜೈಲುಪಾಲಾದಾಗ ಪಕ್ಷವನ್ನು ಮುನ್ನಡೆಸಿದ್ದರು.