‘ಅಭಿರಾಮಚಂದ್ರ’ನಿಗೆ ಕರುನಾಡ ಚಕ್ರವರ್ತಿ ಶಿವಣ್ಣ ಸಾಥ್

Public TV
2 Min Read

ಥ ಕಿರಣ್, ಸಿದ್ದು ಮೂಲಿಮನಿ, ಮತ್ತು ನಾಟ್ಯ ರಂಗ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ಅಭಿರಾಮಚಂದ್ರ’ (Abhiramachandra) ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಚಿತ್ರದ ಟೀಸರ್ ರಿಲೀಸ್ ಮಾಡಿಕೊಡುವ ಮೂಲಕ ಶಿವಣ್ಣ ಸಿನಿಮಾ ತಂಡಕ್ಕೆ ಸಾಥ್ ನೀಡಿದ್ದಾರೆ.  ಟೀಸರ್ ನೋಡಿ ಚಿತ್ರತಂಡಕ್ಕೆ ಭೇಷ್ ಎಂದಿದ್ದಾರೆ.

‘ಅಭಿರಾಮಚಂದ್ರ’ ಟೀಸರ್ ರಿಲೀಸ್ ಮಾಡಿದ್ದು, ಬಹಳ ಖುಷಿಯಾಯ್ತು. ನಾಗೇಂದ್ರ ಗಾಣಿಗ ಡೈರೆಕ್ಷನ್ ಮಾಡಿದ್ದಾರೆ. ತುಂಬಾ ಬ್ಯೂಟಿಫುಲ್ ವಿಷ್ಯೂವಲ್ಸ್ ಇತ್ತು. ಬರೀ ಮಕ್ಕಳ ಕಥೆ ಇದೆ. ಸ್ಟೋರಿಯಲ್ಲಿ ಬೇರೆ ಬೇರೆ ತಿರುವು ಕಾಣುತ್ತಿದೆ. ಅದನ್ನು ನಾವು ಹೇಳೋದಕ್ಕಿಂತ ಡೈರೆಕ್ಟರ್ ಹೇಳಿದರೆ ಒಳ್ಳೆಯದು. ಟೀಸರ್ ನೋಡ್ತಿದ್ರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನೆನಪಾಯ್ತು. ಆ ಸಿನಿಮಾ ಥರ ಹಿಟ್ ಆಗಲಿ, ಟೈಟಲ್ ತುಂಬಾ ಪಾಸಿಟಿವ್ ಆಗಿದೆ. ಸಿನಿಮಾ ಮೇ ನಲ್ಲಿ ರಿಲೀಸ್ ಆಗ್ತಿದ್ದು, ನಾನು ನೋಡ್ತೇನೆ. ನೀವು ನೋಡಿ, ರವಿಬಸ್ರೂರ್ ಮ್ಯೂಸಿಕ್ ಮಾಡಿದ್ದಾರೆ. ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದು ಶಿವಣ್ಣ (Shivanna) ಹಾರೈಸಿದ್ದಾರೆ.

ಶಾಲಾ ದಿನಗಳ ಪ್ರೀತಿ, ತುಂಟಾಟ, ಮುಗ್ದ ಸ್ನೇಹ, ಸುಂದರ ನೋಟ ಅಭಿರಾಮಚಂದ್ರ ಟೀಸರ್‌ಗೆ ಮೆಚ್ಚುಗೆ ವ್ಯಕ್ತವಾಗ್ತಿದೆ. ‘ಕಿರಿಕ್ ಪಾರ್ಟಿ’ ಚಿತ್ರಕ್ಕೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ನಾಗೇಂದ್ರ ಗಾಣಿಗ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾ. ರಥ ಕಿರಣ, ಸಿದ್ದು ಮೂಲಿಮನಿ, ನಾಟ್ಯರಂಗ ಚಿತ್ರದ ಮುಖ್ಯ ಭೂಮಿಕೆಯಲ್ಲಿದ್ದಾರೆ. ಶಿವಾನಿ ರೈ ನಾಯಕಿ ಆಗಿ ನಟಿಸಿದ್ದಾರೆ.

 

View this post on Instagram

 

A post shared by Siddu Moolimani (@sidmoolimani)

ಕುಂದಾಪುರ, ಬೆಂಗಳೂರು, ಮೈಸೂರು ಭಾಗದಲ್ಲಿ ಶೂಟಿಂಗ್ ನಡೆಸಲಾಗಿದ್ದು, ರವಿ ಬಸ್ರೂರು (Ravi basrur) ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ರವಿ ಬಸ್ರೂರು ಮೂವೀಸ್ ನಡಿ ಸಿನಿಮಾವನ್ನು ಪ್ರಸ್ತುತ ಪಡಿಸಲಾಗುತ್ತಿದೆ. ರವಿ ಬಸ್ರೂರು ಪುತ್ರ ಪವನ್ ಕೂಡ ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದು, ವೀಣಾ ಸುಂದರ್, ಸುಂದರ್, ಎಸ್.ನಾರಾಯಣ್, ಪ್ರಕಾಶ್ ತೂಮಿನಾಡು ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

AGS Entertainment ಹಾಗೂ ರವಿ ಬಸ್ರೂರು ಮ್ಯೂಸಿಕ್ ಮತ್ತು ಮೂವೀಸ್ ಬ್ಯಾನರ್‌ನಲ್ಲಿ ಎ.ಜಿ.ಸುರೇಶ್ ಹಾಗೂ ಮಲ್ಲೇಶ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರವಿ ಬಸ್ರೂರು ಸಂಗೀತ ನಿರ್ದೇಶನ, ಸಂದೀಪ್ ವಲ್ಲೂರಿ ಛಾಯಾಗ್ರಹಣ, ಸುರೇಶ್ ಆರುಮುಗಂ ಸಂಕಲನ ಚಿತ್ರಕ್ಕಿದೆ. ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೊನೆ ಹಂತದಲ್ಲಿರುವ ‘ಅಭಿರಾಮಚಂದ್ರ’ ಸಿನಿಮಾ ಮೇ ತಿಂಗಳಲ್ಲಿ ತೆರೆಗೆ ಬರಲಿದೆ.

Share This Article