ಯುವತಿಯರ ಅಶ್ಲೀಲ ವೀಡಿಯೋ ಮಾಡಿ ಬ್ಲ್ಯಾಕ್‍ಮೇಲ್ ಮಾಡ್ತಿದ್ದ ಎಬಿವಿಪಿ ಮುಖಂಡ ಅರೆಸ್ಟ್

Public TV
1 Min Read

ಶಿವಮೊಗ್ಗ: ಯುವತಿಯರ ಅಶ್ಲೀಲ ದೃಶ್ಯ ಚಿತ್ರೀಕರಿಸಿ ಬ್ಲ್ಯಾಕ್‍ಮೇಲ್ (Blackmail) ಮಾಡುತ್ತಿದ್ದ ಎಬಿವಿಪಿ (ABVP) ಮುಖಂಡನನ್ನು ತೀರ್ಥಹಳ್ಳಿ (Thirthahalli) ಪೊಲೀಸರು ಬಂಧಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ವೀಡಿಯೋಗಳು ವೈರಲ್ ಆಗುತ್ತಿದ್ದು, ಕ್ರಮ ಕೈಗೊಳ್ಳುವಂತೆ ಸಂಘಟನೆಗಳು ಆಗ್ರಹಿಸಿ ಡಿವೈಎಸ್‍ಪಿಗೆ ಮನವಿ ಸಲ್ಲಿಸಿದ್ದವು. ಇದರ ಬೆನ್ನಲ್ಲೇ ಯುವತಿಯರ ರಕ್ಷಣೆಗೆ ಮುಂದಾಗಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿ ಹಾಗೂ ಎಬಿವಿಪಿ ಮುಖಂಡ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯರ ಅಧಿಕಾರವಧಿ ಅರ್ಧಕ್ಕೆ ಅಂತ ಯಾರೂ ಹೇಳಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಆರೋಪಿ ವಿರುದ್ಧ ಸುಮೋಟೊ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದನ್ನೂ ಓದಿ: ಫಾದರ್ಸ್ ಡೇ ದಿನವೇ ಕಲಬುರಗಿಯಲ್ಲಿ ಮನಕಲಕುವ ಘಟನೆ – ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿದ ತಂದೆ

Share This Article