ಸೈನಿಕರ ವಿರುದ್ಧ ಕಾರ್ಯಕ್ರಮ – ಅಜೀಂ ಪ್ರೇಮ್‌ಜಿ ವಿವಿ ವಿರುದ್ಧ ಎಬಿವಿಪಿ ಪ್ರತಿಭಟನೆ

1 Min Read

ಬೆಂಗಳೂರು: ಸರ್ಜಾಪುರದಲ್ಲಿರುವ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ (Azim Premji University) ವಿರುದ್ಧ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ (ABVP) ಪ್ರತಿಭಟನೆ ನಡೆಸಿದೆ.

ಸಂಜೆ ವಿವಿ ಆವರಣಕ್ಕೆ ನುಗ್ಗಿದ ಎಬಿವಿಪಿ ವಿದ್ಯಾರ್ಥಿಗಳು ತ್ರಿವರ್ಣ ಧ್ವಜ ಹಿಡಿದು ಪ್ರತಿಭಟನೆ ನಡೆಸಿದರು. ವಿವಿಯ ನಾಮಫಲಕಕ್ಕೆ ಕಪ್ಪುಮಸಿ ಬಳಿದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ಸರ್ಜಾಪುರ ಪೊಲೀಸರು ತೆರಳಿ ಎಬಿವಿಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಇದೇ ವೇಳೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೂ ಪತ್ರ ಬರೆದಿರುವ ಎಬಿವಿಪಿ, ಅಜೀಂ ಪ್ರೇಮ್‌ಜಿ ವಿವಿಯ ಮಾನ್ಯತೆ ರದ್ದುಪಡಿಸಬೇಕೆಂದು ಒತ್ತಾಯಿಸಿದೆ. ಇದನ್ನೂ ಓದಿ: ಉದ್ಯೋಗ ಭರ್ತಿಯಾಗದ್ದಕ್ಕೆ ಬಿಜೆಪಿ ಕಾರಣ – ನಾವು 40 ಸಾವಿರ ನೇಮಕಾತಿ ಮಾಡಿದ್ದೇವೆ: ಸಿಎಂ

ಎಬಿವಿಪಿ ಆರೋಪ ಏನು?
ಅಖಿಲ ಭಾರತೀಯ ವಿದ್ಯಾರ್ಥಿ ಸಂಘ AISA ಪ್ರಾಯೋಜಿತ SPARK ಎನ್ನುವ ಸಂಸ್ಥೆಯ ಮೂಲಕ ಅಜೀಮ್ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ದೇಶವಿರೋಧಿ ಚಿಂತನೆಗಳ ಕೂಟಗಳನ್ನು ನಡೆಸಿದೆ.

ದೇಶದ ಗಡಿ ಕಾಯುವ ಸೈನಿಕರನ್ನು(Indian Army) ಅತ್ಯಾಚಾರಿಗಳು, ಹಿಂಸಾಚಾರಿಗಳು ಎನ್ನುವಂತೆ ಬಿಂಬಿಸುವ ಕಾರ್ಯಕ್ರಮ ಮಾಡಿದ್ದಾರೆ. ಭಾರತದ ಮುಕುಟಮಣಿ ಕಾಶ್ಮೀರ ಭಾರತದ ಭಾಗವಲ್ಲ,ಕಾಶ್ಮೀರವನ್ನು ಸ್ವತಂತ್ರಗೊಳಿಸಿ ಎನ್ನುವ ದೇಶವಿರೋಧಿ ಕಾರ್ಯಕ್ರಮಗಳ ಮೂಲಕ ಭಾರತದ ಸಮಗ್ರತೆಗೆ ಧಕ್ಕೆ ತರುವ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ.ಇದನ್ನೂ ಓದಿ: ಮುರುಡೇಶ್ವರದಲ್ಲಿ ಗಾಂಜಾ ಸೇವಿಸಿ ಹಿಂದೂಗಳ ಮನೆಗೆ ಕಲ್ಲು- ಏಳು ಬಾಲಕರು ಅರೆಸ್ಟ್‌

ಅಪರೇಷನ್ ಸಿಂಧೂರ ಸೈನಿಕ ಕಾರ್ಯಾಚರಣೆಯನ್ನು ಖಂಡಿಸುವ ಚಟುವಟಿಕೆಗಳು ನಡೆಸುತ್ತಿದ್ದರು. ನಕ್ಸಲ್‌ವಾದ ಹಾಗೂ ಮಾವೋವಾದಿಗಳನ್ನು ಬೆಂಬಲಿಸಿ ಕಾರ್ಯಕ್ರಮಗಳನ್ನು ನಡೆಸುತ್ತಾ ಇದ್ದರು.
Share This Article