ಕಾರು, ಟಾಟಾ ಏಸ್ ನಡುವೆ ಅಪಘಾತ – ಓರ್ವ ಸಾವು, ಮತ್ತೋರ್ವ ಗಂಭೀರ

By
1 Min Read

ಚಿಕ್ಕಬಳ್ಳಾಪುರ: ಕಾರು (Car) ಮತ್ತು ಟಾಟಾ ಏಸ್‌ನ (Tata Ace) ನಡುವೆ ಭೀಕರ ಅಪಘಾತ (Accident) ಸಂಭವಿಸಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ದೊಡ್ಡಬಳ್ಳಾಪುರದಲ್ಲಿ (Doddaballapura) ನಡೆದಿದೆ.

- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿ ತಾಂಡಾ ಬಳಿ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಬೆಂಗಳೂರಿನ (Bengaluru) ಬಗಲಗುಂಟೆ ನಿವಾಸಿ ಶಿವಕುಮಾರ್ (32) ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮತ್ತೋರ್ವ ಅನಂತರಾಮ್ (37) ಗಂಭೀರ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಕೊಪ್ಪಳದಲ್ಲಿ ಧಗಧಗನೆ ಹೊತ್ತಿ ಉರಿದ ಜ್ಯುವೆಲ್ಲರಿ ಶಾಪ್‌ – ಚಿನ್ನಾಭರಣ ಬೆಂಕಿಗಾಹುತಿ

- Advertisement -

- Advertisement -

ಗಾಯಾಳುವಿಗೆ ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ 112 ಪೊಲೀಸರು ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಟಾಟಾ ಏಸ್‌ನ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಚಾಲಕನ ಮಾಹಿತಿಯನ್ನು ಪೋಲೀಸರು ಕಲೆ ಹಾಕುತ್ತಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ವೈದ್ಯ ನೇಣು ಬಿಗಿದು ಆತ್ಮಹತ್ಯೆ

- Advertisement -

Share This Article