ಮೈಸೂರು: ಲಾರಿ ಮತ್ತು ಟಾಟಾ ಏಸ್ ನಡುವೆ ಭೀಕರ ಅಪಘಾತವಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.
ಜಿಲ್ಲೆಯ ಟಿ. ನರಸೀಪುರ ಮುಖ್ಯ ರಸ್ತೆಯ ಕೆಂಪಯ್ಯನಹುಂಡಿ ಬಳಿ ಅಪಘಾತ ಸಂಭವಿಸಿದೆ. ಟಿ. ನರಸೀಪುರ ಪಟ್ಟಣದ ನಿವಾಸಿ ರಘು(25), ಮಹದೇವಮ್ಮ(45), ಬಸಮ್ಮ(36) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು. ಉಳಿದಂತೆ ನಾಲ್ವರಿಗೆ ಗಂಭೀರ ಗಾಯಾಗಳಾಗಿದ್ದು, ಗಾಯಾಳುಗಳನ್ನು ಕೆ.ಆರ್.ಅಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರೆಲ್ಲರೂ ತರಕಾರಿ ತರುವುದಕ್ಕಾಗಿ ಮೈಸೂರಿಗೆ ಹೊರಟಿದ್ದರು. ಈ ವೇಳೆ ನಿದ್ರೆ ಮಂಪರಿನಲ್ಲಿ ಟಾಟಾ ಏಸ್ ಚಾಲಕ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.
ಈ ಸಂಬಂಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.