Kolar | ಶೆಡ್‌ಗೆ ಆಕಸ್ಮಿಕ ಬೆಂಕಿ – 4 ಲಕ್ಷ ಮೌಲ್ಯದ ಗೃಹಪಯೋಗಿ ವಸ್ತುಗಳು ಭಸ್ಮ

Public TV
1 Min Read

ಕೋಲಾರ: ಸೆಕೆಂಡ್ ಹ್ಯಾಂಡ್ ಗೃಹಪಯೋಗಿ ವಸ್ತುಗಳಿದ್ದ (Household Items) ಶೆಡ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಸುಮಾರು 4 ಲಕ್ಷ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಕೋಲಾರದ (Kolar) ಕಾರಂಜಿಕಟ್ಟೆಯ ರಾಜಾನಗರದಲ್ಲಿ (Rajanagar) ನಡೆದಿದೆ.

ಅತಾವುಲ್ಲಾ ಎಂಬವರಿಗೆ ಸೇರಿದ ಶೆಡ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಆಕಸ್ಮಿಕ ಬೆಂಕಿಗೆ ಗೃಹಪಯೋಗಿ ವಸ್ತುಗಳು ಸುಟ್ಟು ಭಸ್ಮವಾಗಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ರಾಜಕಾರಣ ಗಬ್ಬೆದ್ದು ಹೋಗಿದೆ: ಕೆ.ಎಸ್ ಈಶ್ವರಪ್ಪ

ಸ್ಥಳಕ್ಕೆ ನಗರಸಭೆ ಅಧ್ಯಕ್ಷೆ ಲಕ್ಷ್ಮೀ ದೇವಮ್ಮ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ಮುಂದುವರಿದಿದೆ. ಇದನ್ನೂ ಓದಿ: U19 Women’s T20 World Cup: ಸತತ 2ನೇ ಬಾರಿಗೆ ಟೀಂ ಇಂಡಿಯಾ ಚಾಂಪಿಯನ್‌

Share This Article