ಜೊತೆಯಾದ ರಮೇಶ್ ಅರವಿಂದ್ – ಗೋಲ್ಡನ್ ಸ್ಟಾರ್ ಗಣೇಶ್

Public TV
1 Min Read

ನ್ನಡದಲ್ಲಿ ಮಲ್ಟಿಸ್ಟಾರ್ ಸಿನಿಮಾಗಳು ಹೆಚ್ಚಾಗುತ್ತಿವೆ. ಅದಕ್ಕೆ ಹೊಸ ಸೇರ್ಪಡೆ ಎನ್ನುವಂತೆ ಮತ್ತೊಂದು ಜೋಡಿ ತೆರೆಯ ಮೇಲೆ ಕಾಣಲು ಸಜ್ಜಾಗಿದೆ. ಈ ಜೋಡಿಯನ್ನು ಒಂದಾಗಿಸಲು ಈಗಾಗಲೇ ಹಲವರು ಪ್ರಯತ್ನ ಪಟ್ಟರೂ ಆಗಿರಲಿಲ್ಲ. ಇದೀಗ ಅದು ಸಾಧ್ಯವಾಗಿದೆ. ಹೀಗಾಗಿ ಇಬ್ಬರೂ ಅಭಿಮಾನಿಗಳಿಗೆ ಸಂಭ್ರಮ ಮನೆ ಮಾಡಿದೆ.

ಕನ್ನಡ ಚಿತ್ರರಂಗಕ್ಕೆ ವಿಖ್ಯಾತ್ ಚಿತ್ರ  ಪ್ರೊಡಕ್ಷನ್ಸ್ ಮೂಲಕ ಪುಷ್ಪಕ ವಿಮಾನ, ಇನ್ಸ್ ಪೆಕ್ಟರ್ ವಿಕ್ರಂ, ಮಾನ್ಸೂನ್ ರಾಗದಂಥ ವಿಭಿನ್ನ ಶೈಲಿಯ ಚಿತ್ರಗಳನ್ನು  ಕೊಡುಗೆಯಾಗಿ ನೀಡಿದ ನಿರ್ಮಾಪಕ ವಿಖ್ಯಾತ್ (Vikyata) ತಮ್ಮ ಸಂಸ್ಥೆಯ ನಿರ್ಮಾಣದ  ಆರನೇ ಚಿತ್ರದ ಮೂಲಕ ನಿರ್ದೇಶಕರಾಗುತ್ತಿದ್ದಾರೆ. ತಮ್ಮ ಪ್ರಥಮ ಪ್ರಯತ್ನದಲ್ಲೇ ಮಲ್ಟಿ ಸ್ಟಾರ್ ‌ಚಿತ್ರ ನಿರ್ದೇಶನಕ್ಕೆ ಕೈಹಾಕಿದ್ದಾರೆ.  ಇದನ್ನೂ ಓದಿ: ಇಂದು ಮಧ್ಯರಾತ್ರಿಯಿಂದ್ಲೇ ಬಂದ್ ಬಿಸಿ- ಸೋಮವಾರ ಆಟೋ, ಟ್ಯಾಕ್ಸಿ ಸಿಗೋದು ಅನುಮಾನ

ಸ್ಟಾರ್ ನಟರಾದ ರಮೇಶ್ ಅರವಿಂದ್ (Ramesh Aravind) ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ (Ganesh) ಇಬ್ಬರನ್ನೂ ನಾಯಕರನ್ನಾಗಿಟ್ಟುಕೊಂಡು ದೇಶ ಕಾಯುವ ವೀರಯೋಧರ ಕುರಿತಾಗಿ ಒಂದಷ್ಟು ಮಹತ್ವದ ವಿಚಾರಗಳನ್ನು ಹೇಳಲು ಹೊರಟಿದ್ದಾರೆ. ನಟ ರಮೇಶ್ ಅರವಿಂದ್ ಅವರ ಹುಟ್ಟುಹಬ್ಬದ ಪ್ರಯುಕ್ತ ಚಿತ್ರದ ಹೊಸ ಪೋಸ್ಟರನ್ನು ಬಿಡುಗಡೆ ಮಾಡಲಾಗಿದ್ದು, ಈ ಪೋಸ್ಟರ್ ಸಾಕಷ್ಟು  ಕುತೂಹಲಗಳನ್ನು ಹುಟ್ಟುಹಾಕಿದೆ.

 

ಈ ಸಿನಿಮಾದಲ್ಲಿ ವೀರ ಸೇನಾನಿಗಳ ನಡುವೆ ನಾಯಕರಿಬ್ಬರೂ  ವಿದೂಷಕರ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ, ಈಗ ಉದ್ಭವಿಸಿರುವ ಎಲ್ಲಾ ಕುತೂಹಲಗಳಿಗೆ ನಿರ್ದೇಶಕನ ಕ್ಯಾಪ್ ತೊಟ್ಟಿರುವ ವಿಖ್ಯಾತ್ ಅವರೇ ಉತ್ತರ ನೀಡಬೇಕಿದೆ. ಇಬ್ಬರ ಕಲಾವಿದರ ಪಾತ್ರಗಳ ಬಗ್ಗೆ ಮುಂದಿನ ದಿನಗಳಲ್ಲಿ ಅವರೇ ಹೇಳಬೇಕು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್