ಪ್ರಿಯಕರನಿಂದ ವಂಚನೆ, ಕೊಲೆ ಬೆದರಿಕೆ ಆರೋಪ- ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

Public TV
2 Min Read

ಹಾಸನ: ಪ್ರೀತಿಸುವುದಾಗಿ (Love) ನಂಬಿಸಿ ಮೋಸ ಮಾಡಿದ್ದಲ್ಲದೇ, ಆತನೊಂದಿಗೆ ಇದ್ದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಡುವುದಾಗಿ ಹೆದರಿಸಿದ್ದರಿಂದ ಮನನೊಂದ ವಿದ್ಯಾರ್ಥಿನಿ (Student) ಕಾಲೇಜು ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ (Suicide) ಯತ್ನಿಸಿದ್ದು, ಚಿಕಿತ್ಸೆಗೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಹಾಸನ (Hassan) ಜಿಲ್ಲೆ ಬೇಲೂರು (Beluru) ತಾಲೂಕಿನ ಬೆಳ್ಳೊಟ್ಟೆ ಗ್ರಾಮದಲ್ಲಿ ನಡೆದಿದೆ.

ಆಶಾ (20) ಮೃತ ಯುವತಿ. ಬೇಲೂರು ಪಟ್ಟಣದ ಕಾಲೇಜುವೊಂದರಲ್ಲಿ ದ್ವಿತೀಯ ಬಿಕಾಂ ಓದುತ್ತಿದ್ದ ಆಶಾಳನ್ನು ಅದೇ ಕಾಲೇಜಿನಲ್ಲಿ ದ್ವಿತೀಯ ಬಿಎ ಓದುತ್ತಿದ್ದ ಆಲೂರು ತಾಲೂಕು ಕಾಟೀಹಳ್ಳಿ ಗ್ರಾಮದ ಮಂಜುನಾಥ ಎಂಬಾತ ಪ್ರೀತಿಸುತ್ತಿದ್ದ. ಪ್ರತಿದಿನ ಆಶಾಳೊಂದಿಗೆ ಸುತ್ತಾಡುತ್ತಿದ್ದ. ಇತ್ತೀಚೆಗೆ ಇದೇ ಮಂಜುನಾಥ ಬೇರೊಂದು ಹುಡುಗಿ ಜೊತೆ ಸುತ್ತಾಡುತ್ತಿದ್ದ. ಇದನ್ನು ಗಮನಿಸಿದ ಆಶಾ ಮಂಜುನಾಥನನ್ನು ಹೀಗೇಕೆ ಮಾಡುತ್ತಿದ್ದೀಯಾ ಎಂದು ಪ್ರಶ್ನೆ ಮಾಡಿದ್ದಳು. ನೀನು ನನ್ನನ್ನು ಹೀಗೆಲ್ಲಾ ಪ್ರಶ್ನೆ ಮಾಡಬೇಡ. ಪ್ರಶ್ನಿಸಿದರೆ ಕೊಲೆ ಮಾಡುತ್ತೇನೆ. ಅಷ್ಟೇ ಅಲ್ಲ, ನೀನು ನನ್ನೊಂದಿಗೆ ಸುತ್ತಾಡಿರುವ ಫೋಟೋ, ಮೆಸೇಜ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಸಿ, ನಿಂದಿಸಿದ್ದ ಎಂದ ಆರೋಪಿಸಲಾಗಿದೆ. ಇದನ್ನೂ ಓದಿ: 15 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ – ಹಾಸ್ಟೆಲ್ ಅಡುಗೆಯಾತ, ನಿರ್ವಾಹಕ ಅರೆಸ್ಟ್

ಇದರಿಂದ ಮನನೊಂದ ಆಶಾ ಅ.6ರಂದು ಬೆಳಗ್ಗೆ 11:30ರ ಸಮಯದಲ್ಲಿ ಕಾಲೇಜಿನ ಬಳಿ ವಿಷ ಕುಡಿದಿದ್ದಳು. ಇದನ್ನು ಗಮನಿಸಿದ ಮಂಜುನಾಥ ಆಶಾಳನ್ನು ಬೇಲೂರು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದ. ಆದರೆ ಆಶಾ ಪರಿಸ್ಥಿತಿ ಗಂಭೀರವಾಗಿದ್ದರಿಂದ ಹಾಸನ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಅಲ್ಲಿಂದ ಪರಾರಿಯಾಗಿದ್ದ. ಒಂದು ವಾರಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ನಡೆಸಿದ ಆಶಾ ಚಿಕಿತ್ಸೆ ಫಲಕಾರಿಯಾಗದೆ ಮುಂಜಾನೆ 3:45ರ ಸಮಯದಲ್ಲಿ ಮೃತಪಟ್ಟಿದ್ದಾಳೆ. ಮಗಳು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದನೆ ನೀಡಿದ ಮಂಜುನಾಥನ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ತಂದೆ ರಾಮಯ್ಯ ಬೇಲೂರು ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ- ನಾಲ್ವರು ಸ್ಥಳದಲ್ಲೇ ಸಾವು

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್