ನಾಯಿ ಬೊಗಳಿದ್ದಕ್ಕೆ ಮಾಲೀಕನ ಮೇಲೆ ಆಸಿಡ್ ದಾಳಿ!

Public TV
1 Min Read

ಚಿಕ್ಕಮಗಳೂರು: ನಾಯಿ (Dog) ಬೊಗಳಿದ್ದಕ್ಕೆ ಮನೆ ಮಾಲೀಕನ ಮೇಲೆ ಆಸಿಡ್ ದಾಳಿ (Acid Attack) ನಡೆಸಿರುವ ಘಟನೆ ಜಿಲ್ಲೆಯ ಎನ್‌ಆರ್ ಪುರ (NR Pura) ತಾಲೂಕಿನ ಹಾಳ್ ಕರಗುಂದ ಗ್ರಾಮದಲ್ಲಿ ನಡೆದಿದೆ.

ಜೇಮ್ಸ್ ಆಸಿಡ್ ದಾಳಿ ಮಾಡಿದ ಆರೋಪಿಯಾದರೆ, ಸುಂದರ್ ರಾಜ್ ಆಸಿಡ್ ದಾಳಿಗೊಳಗಾದ ವ್ಯಕ್ತಿ. ಜೇಮ್ಸ್ ಹಾಗೂ ಸುಂದರ್ ರಾಜ್ ಅಕ್ಕಪಕ್ಕದ ಮನೆಯವರು. ಹಲವು ದಿನಗಳಿಂದ ಇಬ್ಬರ ನಡುವೆ ಗಲಾಟೆಯಾಗಿ, ಮನಸ್ಥಾಪವಿತ್ತು.

dog

ನಿನ್ನೆ ಸುಂದರ್ ರಾಜ್ ಮನೆಯ ಸಾಕು ನಾಯಿ ಬೊಗಳುತ್ತಿತ್ತು. ಈ ವೇಳೆ ಮನೆ ಮಾಲೀಕ ಸುಂದರ್ ರಾಜ್ ನಾಯಿಗೆ ಬೈದಿದ್ದಾರೆ. ಆಗ ಜೇಮ್ಸ್ ನಾಯಿಗೆ ಬೈದಂತೆ ನನಗೆ ಬೈಯುತ್ತಿದ್ದಾನೆ ಎಂದು ಜಗಳವಾಡಿದ್ದಾನೆ. ಇಬ್ಬರು ಜಗಳವಾಡುವಾಗ ಜೇಮ್ಸ್ ಏಕಾಏಕಿ ಸುಂದರ್ ರಾಜ್ ಮೇಲೆ ಆಸಿಡ್ ದಾಳಿ ನಡೆಸಿದ್ದಾನೆ. ಇದನ್ನೂ ಓದಿ: ನಡೆದು ಹೋಯ್ತಾ ಮಹಾ ಪ್ರಮಾದ – ಗುರಿ ತಪ್ಪಿ ಬಿದ್ದ ಗುಂಡೇಟಿನಿಂದ ಅರ್ಜುನ ಸಾವು?

ಆಸಿಡ್ ದಾಳಿಗೆ ಸುಂದರ್ ರಾಜ್ ಮುಖ ಬಹುತೇಕ ಸುಟ್ಟಿದ್ದು ಎಡಗಣ್ಣಿಗೆ ಗಂಭೀರ ಗಾಯವಾಗಿದೆ. ಅರ್ಧ ಮುಖ ಸಂಪೂರ್ಣ ಸುಟ್ಟುಹೋಗಿದೆ. ಕೂಡಲೇ ಅವರನ್ನು ಎನ್‌ಆರ್ ಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿವಮೊಗ್ಗದಲ್ಲಿ ವೈದ್ಯರು ಸುಂದರ್ ರಾಜ್ ಅವರ ಎಡಗಣ್ಣಿನ ಪದರ ಸಂಪೂರ್ಣ ಡ್ಯಾಮೇಜ್ ಆಗಿದೆ, ಕಣ್ಣಿನ ಪದರವನ್ನು ಬದಲಾಯಿಸಬೇಕೆಂದು ತಿಳಿಸಿದ್ದಾರೆ. ಕೂಲಿ ಮಾಡಿಕೊಂಡು ಬದುಕುತ್ತಿದ್ದ ಸುಂದರ್ ರಾಜ್ ಕುಟುಂಬ ಇದೀಗ ಚಿಕಿತ್ಸೆಯ ಹಣಕ್ಕಾಗಿ ಕಂಗಾಲಾಗಿದ್ದಾರೆ. ಆಸಿಡ್ ದಾಳಿ ಬಳಿಕ ಜೇಮ್ಸ್ ದಂಪತಿ ನಾಪತ್ತೆಯಾಗಿದ್ದಾರೆ. ಎನ್‌ಆರ್ ಪುರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: Rain Alert: ಮುಂದಿನ 24 ಗಂಟೆಯಲ್ಲಿ ರಾಜ್ಯದಲ್ಲೂ ಭಾರೀ ಮಳೆ ಸಾಧ್ಯತೆ

Share This Article