ರಣಬೀರ್ ಜೊತೆ ಹಸಿಬಿಸಿ ದೃಶ್ಯಗಳಲ್ಲಿ ನಟನೆ: ಫಾಲೋವರ್ಸ್ ಹೆಚ್ಚಿಸಿಕೊಂಡ ನಟಿ

Public TV
2 Min Read

ಬಾಲಿವುಡ್ ನ ಸೂಪರ್ ಹಿಟ್ ಸಿನಿಮಾಗಳ ಸಾಲಿಗೆ ಸೇರ್ಪಡೆ ಆಗುತ್ತಿರುವ ಅನಿಮಲ್ ಸಿನಿಮಾ ಪುಟ್ಟದೊಂದು ಪಾತ್ರ ಮಾಡಿದ್ದ ನಟಿಗೆ, ದೊಡ್ಡ ಮಟ್ಟದಲ್ಲಿ ಹೆಸರು ತಂದು ಕೊಡುತ್ತಿದೆ. ರಣಬೀರ್ ಜೊತೆ ಕೆಲವೇ ಕೆಲವು ದೃಶ್ಯಗಳಲ್ಲಿ ಹಾಟ್ ಹಾಟ್ ಆಗಿ ಕಾಣಿಸಿಕೊಂಡಿದ್ದ, ಅಪೂರ್ಣ ಬೆತ್ತಲಾಗಿದ್ದ ನಟಿ ತೃಪ್ತಿ ದಿಮ್ರಿಗೆ (Tripti Dimri) ಫಾಲೋವರ್ಸ್ ಸಂಖ್ಯೆ ಜಾಸ್ತಿ ಆಗಿದ್ದಾರೆ. ಸಿನಿಮಾ ರಿಲೀಸ್ ಆಗಿ ಮೂರು ದಿನಗಳಷ್ಟೇ ಕಳೆದಿದ್ದು, ಮೂರು ದಿನದಲ್ಲಿ ಅವರ ಇನ್ಸ್ಟಾ ಫಾಲೋವರ್ಸ್ ಸಂಖ್ಯೆ ದ್ವಿಗುಣವಾಗಿದೆ. ಸದ್ಯ 1.5 ಮಿಲಿಯನ್ ಫಾಲೋವರ್ಸ್ ಅನ್ನು ತೃಪ್ತಿ ಹೊಂದಿದ್ದಾರೆ.

ಬಾಕ್ಸ್ ಆಫೀಸ್ ಧೂಳ್

ಅನಿಮಲ್ ಸಿನಿಮಾ ರಿಲೀಸ್ ಆದ ಒಂದೇ ದಿನಕ್ಕೆ ನೂರು ಕೋಟಿ ಕ್ಲಬ್ ಸೇರಿದೆ. ಜೊತೆಗೆ ರಿಲೀಸ್ ದಿನದಿಂದ ಈವರೆಗೂ ಬಾಕ್ಸ್ ಆಫೀಸ್ (Box Office) ಕಲೆಕ್ಷನ್ ಏರುತ್ತಲೇ ಇದೆ. ಮೂರು ದಿನದ ಒಟ್ಟು ಕಲೆಕ್ಷನ್ ಮುನ್ನೂರು ಕೋಟಿಗೂ ಅಧಿಕ ಎಂದು ಅಂದಾಜಿಸಲಾಗಿದೆ. ಈ ಮೂಲಕ ಜವಾನ್ ನಂತರ ಬಾಲಿವುಡ್ ನ ಮತ್ತೊಂದು ಚಿತ್ರ ಕೋಟಿ ಕೋಟಿ ಲೆಕ್ಕದಲ್ಲಿ ಕಲೆಕ್ಷನ್ ಮಾಡುತ್ತಿದೆ.

 

ಸಂದೀಪ್ ರೆಡ್ಡಿ ವಂಗ ನಿರ್ದೇಶನದ  ಹಾಗೂ ರಣ್ ಬೀರ್ ಕಪೂರ್ (Ranbir Kapoor) , ಕನ್ನಡತಿ ರಶ್ಮಿಕಾ ಮಂದಣ್ಣ (Rashmika Mandanna),  ಪ್ರಮುಖಪಾತ್ರದಲ್ಲಿ ನಟಿಸಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಅನಿಮಲ್ (Animal) ಡಿಸೆಂಬರ್ 1 ರಂದು ತೆರೆಗೆ ಬಂದಿದೆ. ಚಿತ್ರಕ್ಕೆ ಸೆನ್ಸಾರ್ (Censor) ಮಂಡಳಿಯು ‘ಎ’ ಪ್ರಮಾಣ ಪತ್ರ ನೀಡಿದ್ದರೂ, ಜೊತೆಗೆ ರಶ್ಮಿಕಾ ಮತ್ತು ರಣಬೀರ್ ಜೋಡಿಯ ಹಸಿಬಿಸಿ ದೃಶ್ಯಗಳನ್ನು ಸಿನಿಮಾ ಒಳಗೊಂಡಿದ್ದರೂ ಪ್ರೇಕ್ಷಕನಿಗೆ ಚಿತ್ರ ಹಿಡಿಸಿದೆ.

 

ಈ ಚಿತ್ರದ ಬಗ್ಗೆ ಚಿತ್ರತಂಡಕ್ಕೆ ಸಾಕಷ್ಟು ನಿರೀಕ್ಷೆ ಇತ್ತು. ನಟ ರಣಬೀರ್ ಕಪೂರ್ ಸಿನಿಮಾದ ಬಗ್ಗೆ ಮಾತನಾಡುತ್ತಾ, ‘ಇದು ವಿಭಿನ್ನವಾದ ಸಿನಿಮಾ. ತಂದೆ – ಮಗನ ಬಾಂಧವ್ಯದ ಜೊತೆ ಜೊತೆಗೆ ಹಿಂಸೆ ಮತ್ತು ಕ್ರೌರ್ಯಕ್ಕೆ ಒತ್ತು ನೀಡಿದ್ದಾರೆ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ. ಸೆಂಟೆಮೆಂಟ್ ಅಥವಾ ಹಿಂಸೆಗೆ ಎಷ್ಟು ಪ್ರಾಧಾನ್ಯತೆ ನೀಡಲಾಗಿದೆ ಎನ್ನುವುದನ್ನು ಚಿತ್ರದಲ್ಲಿ ನೋಡಬೇಕು. ಹಿರಿಯ ನಟರಾದ ಅನಿಲ್ ಕಪೂರ್ ಮತ್ತು ಬಾಬಿ ಡಿಯೋಲ್ ಅವರ ಜೊತೆ ನಟನೆ ಮಾಡಿದ್ದು ಒಳ್ಳೆಯ ಅನುಭವ. ಜೊತೆಗೆ ರಶ್ಮಿಕಾ ಮಂದಣ್ಣ ಪಾತ್ರಕ್ಕೆ ಜೀವ  ತುಂಬಿದ್ದಾರೆ’ ಎಂದಿದ್ದರು.

Share This Article