ಬೀದರ್ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಕ್ರಮ: ಶಿವಾನಂದ ಪಾಟೀಲ್

1 Min Read

ಬೆಳಗಾವಿ: ಹುಮನಾಬಾದ್ ತಾಲೂಕಿನ ಹಳ್ಳಿಖೇಡ್ ಹತ್ತಿರದಲ್ಲಿರುವ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯ ಪುನಶ್ವೇತನಕ್ಕೆ ಸರ್ಕಾರವು ಕ್ರಮವಹಿಸಲಿದೆ ಎಂದು ಸಚಿವ ಶಿವಾನಂದ ಪಾಟೀಲ್ (Shivanand Patil) ತಿಳಿಸಿದರು.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಭೀಮರಾಯ ಬಸವರಾಜ ಪಾಟೀಲ ಪ್ರಶ್ನೆಗೆ ಉತ್ತರ ನೀಡಿದ ಅವರು, ಈ ಕಾರ್ಖಾನೆಯ ಪುನಶ್ಚೇತನದ ಪ್ರಕ್ರಿಯೆಯು 2022ರಿಂದಲೇ ಆರಂಭವಾಗಿದೆ. 2022-23ನೇ ಹಂಗಾಮಿನಿಂದ 40 ವರ್ಷಗಳ ಅವಧಿಗೆ ಎಲ್.ಆರ್.ಓ.ಟಿ. ಆಧಾರದ ಮೇಲೆ ಇದ್ದಲ್ಲಿ, ಯಥಾಸ್ಥಿತಿಯಲ್ಲಿ ಖಾಸಗಿ ಅವರಿಗೆ ಗುತ್ತಿಗೆ ನೀಡಲು 2023ರಲ್ಲಿ ದಿನಪತ್ರಿಕೆಯಲ್ಲಿ ಟೆಂಡರ್ ಕರೆದರೂ ಸಹ ಬಿಡ್ಡುದಾರರು ಆಸಕ್ತಿ ತೋರಲಿಲ್ಲ ಎಂದರು.ಇದನ್ನೂ ಓದಿ: ವಿಧಾನ ಪರಿಷತ್‌ನಲ್ಲಿ ಹಳದಿ ಪೇಟ ಗಲಾಟೆ – ಕಲಾಪ ಮುಂದೂಡಿಕೆ

ಎರಡನೇ ಬಾರಿಗೆ ಟೆಂಡರ್ ಕರೆದರೂ ಸಹ ಯಾರೊಬ್ಬ ಬಿಡ್ಡುದಾರರು ಟೆಂಡರ್ ಪ್ರಕ್ರಿಯೆಯಲ್ಲಿ ಭಾಗಿಯಾಗಲಿಲ್ಲ. ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಪ್ರಸ್ತಾವನೆಯನ್ನು ಒಳಗೊಂಡಂತೆ ಒಟ್ಟು 6 ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಎನ್.ಸಿ.ಡಿ.ಸಿ.ಯಿಂದ ನೆರವನ್ನು ಪಡೆಯುವ ಕುರಿತು ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚನೆಯನ್ನು ನಡೆಸಲಾಗುವುದು. ಎನ್.ಸಿ.ಡಿ.ಸಿ.ಯಿಂದ ಆರ್ಥಿಕ ನೆರವು ಲಭ್ಯವಾಗದಿದ್ದಲ್ಲಿ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಎಲ್.ಆರ್.ಓ.ಟಿ. ಆಧಾರದ ಮೇಲೆ ಇದ್ದಲ್ಲಿ ಯಥಾಸ್ಥಿತಿಯಲ್ಲಿ ಖಾಸಗಿಯವರಿಗೆ ದೀರ್ಘಾವಧಿಗೆ ಗುತ್ತಿಗೆ ನೀಡಲು ಮತ್ತೊಮ್ಮೆ ಟೆಂಡರ್ ಪ್ರಕಟಣೆಯನ್ನು ಹೊರಡಿಸಲು ಪರಿಶೀಲಿಸಲಾಗುವುದು ಎಂದು ಹೇಳಿದರು.

Share This Article