ರೆಬೆಲ್ ಸ್ಟಾರ್ ಸೊಸೆ ಅವಿವಗೆ ಸೀಮಂತ ಸಂಭ್ರಮ

Public TV
1 Min Read

ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ (Abhishek Ambareesh) ಮತ್ತು ಸೊಸೆ ಅವಿವ ಬಿಡಪ (Aviva Bidapa) ಪೋಷಕರಾಗುತ್ತಿರುವ ಖುಷಿಯಲ್ಲಿದ್ದಾರೆ. ಇನ್ನೂ ಕೆಲವೇ ದಿನಗಳಲ್ಲಿ ಮನೆಗೆ ಪುಟ್ಟ ಕಂದಮ್ಮನ ಆಗಮನವಾಗಲಿದೆ. ಇದೇ ಸಂಭ್ರಮದಲ್ಲಿ ಅವಿವಗೆ ಸರಳವಾಗಿ ಸೀಮಂತ  ಮಾಡಿದ್ದಾರೆ.

ಸೆ.15ರಂದು ತುಂಬು ಗರ್ಭಿಣಿಯಾಗಿರುವ ಅವಿವಗೆ ಸೀಮಂತ ಶಾಸ್ತ್ರ ಮಾಡಲಾಯಿತು. ಹಸಿರು ಬಣ್ಣದ ಸೀರೆಯುಟ್ಟು ಅಭಿಷೇಕ್ ಪತ್ನಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಅವಿವ ಮುಖದಲ್ಲಿ ತಾಯ್ತನದ ಕಳೆ ಎದ್ದು ಕಾಣುತ್ತಿದೆ. ಇದನ್ನೂ ಓದಿ:ಸೆ.16ರಂದು ಫಿಲ್ಮ್ ಚೇಂಬರ್‌ನಲ್ಲಿ ಸಭೆ- ಹೇಮಾ ಕಮಿಟಿಯಂತೆ ಸ್ಯಾಂಡಲ್‌ವುಡ್‌ನಲ್ಲಿಯೂ ರಚಿಸಲು ಒತ್ತಾಯ

ಬೆಂಗಳೂರಿನ ಸುಮಲತಾ (Sumalatha) ನಿವಾಸದಲ್ಲಿಯೇ ನಡೆದ ಈ ಸೀಮಂತ ಸಂಭ್ರಮದಲ್ಲಿ ಪ್ರಿಯಾಂಕಾ ಉಪೇಂದ್ರ ಸೇರಿದಂತೆ ಅನೇಕರು ಭಾಗಿಯಾಗಿದ್ದರು. ಸರಳವಾಗಿ ಜರುಗಿದ ಈ ಸಮಾರಂಭದಲ್ಲಿ ಕುಟುಂಬಸ್ಥರು ಆಪ್ತರಿಗಷ್ಟೇ ಆಹ್ವಾನ ನೀಡಲಾಗಿತ್ತು.

ಅಂದಹಾಗೆ, ಹಲವು ವರ್ಷಗಳಿಂದ ಅವಿವ ಮತ್ತು ಅಭಿಷೇಕ್ ಪ್ರೀತಿಸುತ್ತಿದ್ದರು. ಕಳೆದ ವರ್ಷ ಜೂನ್ 5ರಂದು ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

Share This Article