ಕಾಲ್ತುಳಿತ ಪ್ರಕರಣ: ಮೃತ ಮಹಿಳೆ ಕುಟುಂಬಕ್ಕೆ 2 ಕೋಟಿ ಪರಿಹಾರ ಘೋಷಿಸಿದ ಅಲ್ಲು ಅರ್ಜುನ್ ತಂದೆ

Public TV
1 Min Read

ಲ್ಲು ಅರ್ಜುನ್ (Allu Arjun) ನಟನೆಯ ‘ಪುಷ್ಪ 2’ (Pushpa 2) ಪ್ರೀಮಿಯರ್ ಶೋ ವೇಳೆ ಕಾಲ್ತುಳಿತದಲ್ಲಿ ಮೃತಪಟ್ಟ ಮಹಿಳೆ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರವನ್ನು ಅಲ್ಲು ಅರವಿಂದ್ ಘೋಷಿಸಿದ್ದಾರೆ. ಇದನ್ನೂ ಓದಿ:ಪೂಜಾ ಹೆಗ್ಡೆ ಜೊತೆ ‘ರೆಟ್ರೋ’ ಕಥೆ ಹೇಳಲು ಹೊರಟ ಸೂರ್ಯ

ಡಿ.4ರಂದು ‘ಪುಷ್ಪ 2’ ಪ್ರೀಮಿಯರ್ ವೇಳೆ ನಡೆದ ಕಾಲ್ತುಳಿತದಲ್ಲಿ ಮೃತ ರೇವತಿ ಪುತ್ರ ಶ್ರೀಜಾ ಕೂಡ ತೀವ್ರ ಗಂಭೀರ ಸ್ಥಿತಿಯಲ್ಲಿದ್ದು, ಈಗಾಗಲೇ ಅಲ್ಲು ಅರ್ಜುನ್ ತಂದೆ ಕುಟುಂಬಸ್ಥರನ್ನು ಭೇಟಿಯಾಗಿ ಧೈರ್ಯ ತುಂಬಿದ್ದಾರೆ. ಈ ಹಿಂದೆ 25 ಲಕ್ಷ ರೂ. ಕೊಡೋದಾಗಿ ತಿಳಿಸಿದ್ದರು. ಆದರೆ ಈಗ ಮೃತಪಟ್ಟ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ ನೀಡೋದಾಗಿ ಅಲ್ಲು ಅರವಿಂದ್ (Allu Arvind) ತಿಳಿಸಿದ್ದಾರೆ.

ಅಲ್ಲು ಅರ್ಜುನ್ ಕಡೆಯಿಂದ 1 ಕೋಟಿ ರೂ. ಜೊತೆಗೆ ‘ಪುಷ್ಪ 2’ ನಿರ್ಮಾಪಕರು ಮತ್ತು ನಿರ್ದೇಶಕ ಸುಕುಮಾರ್ ಕಡೆಯಿಂದ 1 ಕೋಟಿ ರೂ.ವನ್ನು ಮೃತ ಮಹಿಳೆ ಕುಟುಂಬಕ್ಕೆ ಕೊಡಲು ನಿರ್ಧರಿಸಿದ್ದಾರೆ.

ಅಂದಹಾಗೆ, ಡಿ.13ರಂದು ಕಾಲ್ತುಳಿತ ಪ್ರಕರಣ ಸಂಬಂಧ ಅಲ್ಲು ಅರ್ಜುನ್‌ರನ್ನು ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದರು. ಬೇಲ್ ಸಿಕ್ಕ ಹಿನ್ನೆಲೆ ನಟ ರಿಲೀಸ್ ಆಗಿದ್ದರು. ನಿನ್ನೆಯಷ್ಟೇ (ಡಿ.24) ಹೈದರಾಬಾದ್‌ನ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ನಟ ಸತತ 4 ಗಂಟೆಗಳ ಕಾಲ ವಿಚಾರಣೆ ಎದುರಿಸಿ ಬಂದಿದ್ದರು.

Share This Article