ಮೋದಿಜೀ ನಿಮ್ಮ ಗುರಿ ಕೊನೆತನಕ ಇರಲಿ ಅಂದ್ರು ಜಗ್ಗೇಶ್

Public TV
1 Min Read

ಬೆಂಗಳೂರು: ವಿಶ್ವಸಂಸ್ಥೆಯ ಅತಿದೊಡ್ಡ ಪ್ರಶಸ್ತಿ ಎನಿಸಿಕೊಂಡಿರುವ ಚಾಂಪಿಯನ್ಸ್ ಆಫ್ ಅರ್ತ್ ಪ್ರಶಸ್ತಿಯ ಗೌರವಕ್ಕೆ ಪಾತ್ರರಾಗಿರೋ ಪ್ರಧಾನಿ ನರೇಂದ್ರ ಮೋದಿಯವರಿಗೆ ನಟ ಹಾಗೂ ಬಿಜೆಪಿ ನಾಯಕ ಜಗ್ಗೇಶ್ ಶುಭಾಶಯ ತಿಳಿಸಿದ್ದಾರೆ. ಅಲ್ಲದೇ ಮೋದಿಜೀ ನಿಮ್ಮ ಗುರು ಕೊನೆತೆಕ ಇರಲಿ ಅಂತ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಜಗ್ಗೇಶ್, “2018ರ ಚಾಂಪಿಯನ್ಸ್ ಆಫ್ ಅರ್ತ್ ಗೌರವಕ್ಕೆ ಪಾತ್ರರಾಗಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಶುಭಾಶಯಗಳು. ನೀವು ದೇಶದ ಅಭಿವೃದ್ಧಿಗೆ ನೀಡುವ ಕೊಡುಗೆಗಳಿಂದಾಗಿ ಸ್ವಾಭಿಮಾನಿ ಭಾರತೀಯರು ನಿಮ್ಮ ಜೊತೆ ಎಂದಿಗೂ ಇರುತ್ತಾರೆ. ನೀವು ಹೀಗೆಯೇ ಮುಂದುವರಿಯುತ್ತಾ ಇರಿ. ಈ ಮೂಲಕ ನಿಮ್ಮ ಗುರಿ ಕೊನೆತನಕ ಇರಲಿ” ಅಂತ ಶುಭಹಾರೈಸಿದ್ದಾರೆ.

1018ರ ಚಾಂಪಿಯನ್ಸ್ ಆಫ್ ಅರ್ತ್ ಗೌರವವನ್ನು ಪ್ರಧಾನಿಯವರು ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರಾನ್ ಅವರ ಜೊತೆ ಹಂಚಿಕೊಳ್ಳಲಿದ್ದಾರೆ. ಮೋದಿಯವರಿಗೆ ಪಾಲಿಸಿ ಆಫ್ ಲೀಡರ್ ಶಿಪ್ ವಿಭಾಗದಲ್ಲಿ ಪ್ರಶಸ್ತಿ ದೊರೆತಿದೆ. ಸೌರಶಕ್ತಿ ಬಳಕೆಗೆ ಉತ್ತೇಜನ ನೀಡುವ ಅಂತಾರಾಷ್ಟ್ರೀಯ ಸೌರ ಮೈತ್ರಿಕೂಟ ಸ್ಥಾಪನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದಕ್ಕಾಗಿ ಮೋದಿಗೆ ಈ ಗೌರವ ನೀಡಲಾಗಿದೆ. ಇದೇ ವೇಳೆ 2022ಕ್ಕೆ ಸಂಪೂರ್ಣ ಪ್ಲಾಸ್ಟಿಕ್ ಬಳಕೆ ನಿರ್ಮೂಲನೆ ವಾಗ್ದಾನವನ್ನು ಕೂಡ ಗೌರವವನ್ನು ಘೋಷಿಸುವಾಗ ವಿಶೇಷವಾಗಿ ಉಲ್ಲೇಖಿಸಲಾಗಿದೆ.

ಏನಿದು ಸೌರ ಒಕ್ಕೂಟ?
ಅತಿ ಹೆಚ್ಚು ಸೂರ್ಯನ ಬೆಳಕನ್ನು ಪಡೆಯುವ ದೇಶಗಳ ಒಕ್ಕೂಟವನ್ನು ಸ್ಥಾಪಿಸಿ, ಸೌರ ವಿದ್ಯುತ್ ಬಳಕೆಯ ತಂತ್ರಜ್ಞಾನ, ಸಂಪನ್ಮೂಲಗಳನ್ನು ಹಂಚಿಕೊಳ್ಳುವ ಬಗ್ಗೆ 2015ರಲ್ಲಿ ಮೊದಲ ಬಾರಿಗೆ ಇಂಗ್ಲೆಂಡಿನ ಲಂಡನ್ ನಲ್ಲಿರುವ ವೆಂಬ್ಲೆ ಸ್ಟೇಡಿಯಂನಲ್ಲಿ ಪ್ರಧಾನಿ ಮೋದಿ ಪ್ರಸ್ತಾಪಿಸಿದ್ದರು. ಈ ದೇಶಗಳನ್ನು ಸೂರ್ಯನ ಮಕ್ಕಳು ಎಂದು ಮೋದಿ ಉಲ್ಲೇಖಿಸಿದ್ದರು. 2016ರಲ್ಲಿ ಈ ಬಗ್ಗೆ ರೂಪುರೇಷೆ ಸಿದ್ಧವಾಗಿದ್ದು, ಈ ಒಪ್ಪಂದಕ್ಕೆ ಒಳಪಡಲು ಅಂದಿನಿಂದ 121 ದೇಶಗಳು ಸಹಿ ಹಾಕಿವೆ. 2018ರ ಮಾರ್ಚ್ ನಲ್ಲಿ ನವದೆಹಲಿಯಲ್ಲಿ ಮೊದಲ ಸಮ್ಮೇಳನ ಆಯೋಜನೆಗೊಂಡಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *