ಜೈಲಲ್ಲಿ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗದ ದರ್ಶನ್‌, ಪ್ರಜ್ವಲ್‌ ರೇವಣ್ಣ

Public TV
1 Min Read

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಗಿದ್ದು, ನಟ ದರ್ಶನ್‌ ಮತ್ತು ಪ್ರಜ್ವಲ್‌ ರೇವಣ್ಣ ಗೈರಾಗಿದ್ದಾರೆ.

ಪ್ರತಿ ವರ್ಷ ಜೈಲಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಮಾಡಲಾಗುತ್ತದೆ. ವಿಚಾರಣಾಧೀನ ಆರೋಪಿಗಳು, ಸಜಾ ಬಂಧಿಗಳು ಎಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಅಂತೆಯೇ ಈ ಬಾರಿಗೂ ಸಮಾರಂಭ ಮಾಡಲಾಯಿತು. ಆದರೆ, ದರ್ಶನ್‌ ಮತ್ತು ಪ್ರಜ್ವಲ್‌ ರೇವಣ್ಣ ಭಾಗಿಯಾಗಿಲ್ಲ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಮತ್ತೆ ಜೈಲು ಪಾಲಾಗಿದ್ದಾರೆ. ಪವಿತ್ರಾ ಗೌಡ ಕೂಡ ಜೈಲು ಸೇರಿದ್ದಾರೆ. ಇಬ್ಬರನ್ನೂ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ. ನಟ ದರ್ಶನ್‌ ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಹೀಗಾಗಿ, ಸ್ವಾತಂತ್ರ್ಯೋತ್ಸವಕ್ಕೆ ಗೈರಾಗಿದ್ದಾರೆ.

ಮನೆ ಕೆಲಸದಾಕೆ ಮೇಲೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಕೂಡ ಜೈಲಲ್ಲಿದ್ದಾರೆ. ಅವರು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ.

Share This Article