‘ಡಿ’ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಕೇಸ್‌ – ಇಂದೇ ಚಾರ್ಜ್‌ಶೀಟ್‌ ಸಲ್ಲಿಕೆ ಫಿಕ್ಸ್‌

Public TV
0 Min Read

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಟ ದರ್ಶನ್‌ & ಟೀಂ ವಿರುದ್ಧ ಕೋರ್ಟ್‌ಗೆ ಇಂದೇ ಚಾರ್ಜ್‌ಶೀಟ್‌ ಸಲ್ಲಿಕೆ ಫಿಕ್ಸ್‌ ಆಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಮಧ್ಯಾಹ್ನದ ನಂತರ ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಕೆಗೆ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಕಾಮಾಕ್ಷಿಪಾಳ್ಯ ಇನ್‌ಸ್ಪೆಕ್ಟರ್‌, ಬಸವೇಶ್ವರ ನಗರ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ ತನಿಖಾಧಿಕಾರಿಯಾಗಿರುವ ಎಸಿಪಿ ಭೇಟಿಗೆ ಆಗಮಿಸಿದ್ದಾರೆ.

ಈಗಾಗಲೇ ಚಾರ್ಜ್‌ಶೀಟ್ ಸಲ್ಲಿಕೆಗೆ ತನಿಖಾಧಿಕಾರಿಗಳು ಡಿಸಿಪಿ ಅನುಮತಿ ಪಡೆದಿದ್ದಾರೆ. ತನಿಖಾಧಿಕಾರಿ, ಎಸ್‌ಪಿಪಿ ಮೂಲಕ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಿದ್ದಾರೆ ಎನ್ನಲಾಗಿದೆ.

Share This Article