ದರ್ಶನ್, ಪವಿತ್ರಾಗೌಡ ಪರ ವಕೀಲರಿಂದ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ, ಪೂಜೆ ಸಲ್ಲಿಕೆ

Public TV
1 Min Read

ಮಂಗಳೂರು: ನಟ ದರ್ಶನ್ (Darshan) ಮತ್ತು ಪವಿತ್ರಾ ಗೌಡ (Pavithra Gowda) ಪರ ವಕೀಲರ ತಂಡ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ (DharmaSthala) ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದೆ.

ಬೆಂಗಳೂರು ವಕೀಲ ನಾರಾಯಣ ಸ್ವಾಮಿ ಮತ್ತು ತಂಡ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭಾನುವಾರ ಭೇಟಿ ನೀಡಿತು. ವಕೀಲರಾದ ರಾಕೇಶ್, ಶಶಾಂಕ್, ಮಂಜುನಾಥ್, ಶಿವಕುಮಾರ್, ಶೇಷಣ್ಣ, ಸೋಮಶೇಖರ್ ಇದ್ದರು. ಇದನ್ನೂ ಓದಿ: ನಟ ದರ್ಶನ್‌ ಬಂಧನವಾಗಿ ಒಂದು ತಿಂಗಳು ಪೂರ್ಣ – ಅರೆಸ್ಟ್‌ ದಿನದಿಂದ ಇಲ್ಲಿವರೆಗೆ ಏನೇನಾಯ್ತು? ಇಲ್ಲಿದೆ ಟೈಮ್‌ಲೈನ್‌!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 10 ಕ್ಕೂ ಹೆಚ್ಚು ಮಂದಿ ಜೈಲು ಸೇರಿದ್ದಾರೆ. ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್‌ಐಟಿ ತಂಡ ಮಹತ್ವದ ಸಾಕ್ಷ್ಯಗಳನ್ನು ಸಂಗ್ರಹಿಸಿದೆ.

ದರ್ಶನ್ ಜೈಲು ಸೇರಿ ಒಂದು ತಿಂಗಳು ಪೂರ್ಣಗೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳು ಒಂದೊಂದಾಗಿ ಹೊರಬರುತ್ತಿವೆ. ಇದು ಪೂರ್ವನಿಯೋಜಿತ ಕೊಲೆ ಎಂಬುದು ತನಿಖೆಯಿಂದ ಬಹಿರಂಗೊಂಡಿದೆ. ಇದನ್ನೂ ಓದಿ: ದರ್ಶನ್‌ ಪ್ರಕರಣ: ಆರೋಪಿ ಸ್ಥಾನದಲ್ಲಿರುವವರಿಗೆ ನಾವು ಸಪೋರ್ಟ್ ಮಾಡಿಲ್ಲ- ಡಾಲಿ

ದರ್ಶನ್ ಜೈಲಿನಿಂದ ಹೊರಬರಲೆಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಅನೇಕರು ದರ್ಶನ್ ನೋಡಲೇಬೇಕು ಎಂದು ಜೈಲಿನ ಬಳಿ ಬಂದಿದ್ದ ಪ್ರಸಂಗಗಳು ನಡೆದಿವೆ. ಇನ್ನೂ ಕೆಲವರು ದೇವಸ್ಥಾನಗಳಿಗೆ ತೆರಳಿ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿದ್ದಾರೆ.

Share This Article