ದರ್ಶನ್ ದಾಂಪತ್ಯಕ್ಕೆ 22 ವರ್ಷ- ಹೊಸ ಪೋಸ್ಟ್ ಹಂಚಿಕೊಂಡ ವಿಜಯಲಕ್ಷ್ಮಿ

Public TV
1 Min Read

ಸ್ಯಾಂಡಲ್‌ವುಡ್ ನಟ ದರ್ಶನ್ (Darshan) ಮತ್ತು ವಿಜಯಲಕ್ಷ್ಮಿ (Vijayalakshmi) ದಾಂಪತ್ಯಕ್ಕೆ (Wedding) ಇಂದಿಗೆ 22 ವರ್ಷಗಳಾಗಿವೆ. ಇದೇ ಖುಷಿಯಲ್ಲಿ ಪತಿಯೊಂದಿಗಿನ ಫೋಟೋವನ್ನು ವಿಜಯಲಕ್ಷ್ಮಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಮುಂಬೈನಲ್ಲಿ ಐಷಾರಾಮಿ ಅಪಾರ್ಟ್‌ಮೆಂಟ್ ಖರೀದಿಸಿದ ತಾಪ್ಸಿ ಪನ್ನು- ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!

2003ರಲ್ಲಿ ಮೇ 19ರಂದು ಧರ್ಮಸ್ಥಳದಲ್ಲಿ ವಿಜಯಲಕ್ಷ್ಮಿಯೊಂದಿಗೆ ದರ್ಶನ್ ದಾಂಪತ್ಯ ಬದುಕಿಗೆ ಕಾಲಿಟ್ಟರು. ಸಾಕಷ್ಟು ಏಳು- ಬೀಳುಗಳನ್ನು ಕಂಡಿರುವ ಈ ಜೋಡಿ ಇದೀಗ ಮದುವೆ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಸದ್ಯ ಪತಿಯೊಂದಿಗೆ ಮುದ್ದಾಗಿ ಪೋಸ್ ನೀಡಿರುವ ಫೋಟೋ ಶೇರ್ ಮಾಡಿ, ‘ಶಾಶ್ವತವಾಗಿ’ ಎಂದು ವಿಜಯಲಕ್ಷ್ಮಿ ಇನ್ಸ್ಟಾಗ್ರಾಂ ಬರೆದುಕೊಂಡಿದ್ದಾರೆ. ಮದುವೆ ಆ್ಯನಿವರ್ಸರಿ ಖುಷಿಯಲ್ಲಿರುವ ಈ ಜೋಡಿಗೆ ಫ್ಯಾನ್ಸ್ ಶುಭಕೋರುತ್ತಿದ್ದಾರೆ. ಇದನ್ನೂ ಓದಿ:ರೇಸ್ ವೇಳೆ ನಟ ಅಜಿತ್ ಕಾರ್ ಟಯರ್ ಸ್ಫೋಟ!

 

View this post on Instagram

 

A post shared by Vijayalakshmi darshan (@viji.darshan)

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೇಲ್ ಮೇಲೆ ದರ್ಶನ್ ಹೊರಬಂದ್ಮೇಲೆ ಪತಿಯ ವ್ಯವಹಾರವನ್ನು ವಿಜಯಲಕ್ಷ್ಮಿ ಅವರೇ ನೋಡಿಕೊಳ್ತಿದ್ದಾರೆ. ದರ್ಶನ್‌ಗೆ ಎಲ್ಲೇ ಶೂಟಿಂಗ್ ಇದ್ರೂ ಅಥವಾ ಯಾವುದೇ ಕಾರ್ಯಕ್ರಮ ಆಗಿದ್ರೂ ಪತ್ನಿ ಜೊತೆಯಾಗಿರುತ್ತಾರೆ. ಇದು ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ. ಈ ಜೋಡಿ ಮೇಲೆ ಕೆಟ್ಟ ದೃಷ್ಟಿ ಬೀಳದಿರಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.

‘ಡೆವಿಲ್’ ಸಿನಿಮಾದ ಚಿತ್ರೀಕರಣವು ಭರದಿಂದ ನಡೆಯುತ್ತಿದೆ. ದರ್ಶನ್ ಜೊತೆ ರಚನಾ ರೈ, ವಿನಯ್ ಗೌಡ, ಶರ್ಮಿಳಾ ಮಾಂಡ್ರೆ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ‘ತಾರಕ್’ ಡೈರೆಕ್ಟರ್ ಮಿಲನಾ ಪ್ರಕಾಶ್ `ಡೆವಿಲ್’ಗೆ ನಿರ್ದೇಶನ ಮಾಡುತ್ತಿದ್ದಾರೆ.

Share This Article