ಬಳ್ಳಾರಿ: ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Actor Darshan) ಜಾಮೀನು ರದ್ದಾದ ಬೆನ್ನಲ್ಲೇ ನ್ಯಾಯಾಲಯಕ್ಕೆ ಇಂದು (ಆ.14) ಸಂಜೆ ಶರಣಾಗುವ ಸಾಧ್ಯತೆ ಇದೆ. ನ್ಯಾಯಾಲಯಕ್ಕೆ ಶರಣಾದರೆ ಮತ್ತೆ ದರ್ಶನ್ ಬಳ್ಳಾರಿ ಜೈಲಿಗೆ (Ballari Jail) ಶಿಫ್ಟ್ ಆಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಬಳ್ಳಾರಿ ಜೈಲಿನಲ್ಲಿ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ಈ ಹಿಂದೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‍ಗೆ ರಾಜಾತಿಥ್ಯ ನೀಡಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಇದಾದ ಬಳಿಕ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಬಳಿಕ ಜಾಮೀನು ಮಂಜೂರಾಗುವ ತನಕ 63 ದಿನಗಳ ಕಾಲ ಬಳ್ಳಾರಿ ಜೈಲಿನಲ್ಲಿ ಕಳೆದಿದ್ದರು. ಅಕ್ಟೋಬರ್ 30 ರಂದು ಬಳ್ಳಾರಿ ಜೈಲಿನಿಂದ ರಿಲೀಸ್ ಆಗಿದ್ದರು. ಇದೀಗ ಮತ್ತೆ ಅದೇ ಜೈಲಿಗೆ ಅವರು ಶಿಫ್ಟ್ ಆಗುವ ಸಾಧ್ಯತೆ ಇದೆ. ಇದನ್ನೂ ಓದಿ: ರಾಜ್ಯ ತೊರೆದಿದ್ದಾರಾ ಕೊಲೆ ಆರೋಪಿ ದರ್ಶನ್?
ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿದ್ದಾಗ ತೀವ್ರ ಬೆನ್ನುನೋವಿನಿಂದ ಬಳಲುತ್ತಿದ್ದ ದರ್ಶನ್‍ಗೆ ವಿಮ್ಸ್ ಆಸ್ಪತ್ರೆಯಲ್ಲಿ ಸ್ಕ್ಯಾನ್ ಸಹ ಮಾಡಿಸಲಾಗಿತ್ತು. ಸ್ಕ್ಯಾನ್ ಬಳಿಕ ತುರ್ತು ಸರ್ಜರಿಗೆ ಸೂಚಿಸಲಾಗಿತ್ತು. ಅದೇ ಆಧಾರದ ಮೇಲೆ ಜಾಮೀನು ದರ್ಶನ್ ಪಡೆದಿದ್ದರು. ಜಾಮೀನು ಪಡೆದ ಬಳಿಕ ದರ್ಶನ್ ಶಸ್ತ್ರಚಿಕಿತ್ಸೆ ಮಾಡಿಸಿರಲಿಲ್ಲ.
ಇನ್ನೂ ಬಳ್ಳಾರಿ ಜೈಲಿನಲ್ಲಿ ದರ್ಶನ್‍ಗೆ ಯಾವುದೇ ವಿಶೇಷ ಸೌಲಭ್ಯ ಕೊಟ್ಟಿರಲಿಲ್ಲ. ಸಾಮಾನ್ಯ ಖೈದಿಯಂತೆ ನೋಡಿಕೊಳ್ಳಲಾಗಿತ್ತು. ಇದೀಗ ಜಾಮೀನು ರದ್ದಾಗಿರುವುದರಿಂದ ಮತ್ತೇ ಬಳ್ಳಾರಿ ಜೈಲಿಗೆ ಕರೆತರುವ ಸಾಧ್ಯತೆ ಇದೆ. ಇದನ್ನೂ ಓದಿ: ದರ್ಶನ್ ಜಾಮೀನು ರದ್ದು; ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿ: ರೇಣುಕಾಸ್ವಾಮಿ ಪತ್ನಿ