ಬೆಂಗಳೂರು: ನಿರ್ದೇಶಕ, ನಟ ಪಿ.ಎನ್ ಸತ್ಯ ನಿಧನಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಂಬನಿ ಮಿಡಿದಿದ್ದಾರೆ.
ಕಳೆದ ಒಂದು ವರ್ಷದಿಂದ ಕ್ಯಾನ್ಸರ್‍ನಿಂದ ಬಳಲುತ್ತಿದ್ದ ಸತ್ಯ ಚಿಕಿತ್ಸೆ ಫಲಿಸದೆ ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಸಂಜೆ ಸುಮಾರು 7.30ಕ್ಕೆ ವಿಧಿವಶರಾಗಿದ್ದಾರೆ. ಇದನ್ನೂ ಓದಿ: ಮೆಜೆಸ್ಟಿಕ್ ಸಿನಿಮಾ ನಿರ್ದೇಶಕ ಪಿ.ಎನ್.ಸತ್ಯ ವಿಧಿವಶ
ಸದ್ಯ ಬಸವೇಶ್ವರನಗರದ ಸೋದರಿ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಇಂದು ಸಂಜೆ ಅಂತ್ಯಕ್ರಿಯೆ ನಡೆಯುವ ಸಾಧ್ಯತೆ ಇದೆ. ದರ್ಶನ್‍ಗೆ ನಾಯಕ ನಟ ಇಮೇಜ್ ತಂದು ಕೊಟ್ಟಿದ್ದೇ ಈ ಸತ್ಯ.
ಈ ಬಗ್ಗೆ ದರ್ಶನ್ ಕಂಬನಿ ಮಿಡಿದಿದ್ದು, “ನನ್ನ ಆಪ್ತ ಸ್ನೇಹಿತರಲ್ಲೊಬ್ಬರು, ನನ್ನ `ಮೆಜೆಸ್ಟಿಕ್’ ಚಿತ್ರದ ನಿರ್ದೇಶಕರು ಪಿ.ಎನ್ ಸತ್ಯ ಇಂದು ನಮ್ಮಿಂದ ದೈಹಿಕವಾಗಿ ದೂರವಾಗಿದ್ದಾರೆ. ಈ ನಷ್ಟವನ್ನು ಸಹಿಸಿಕೊಳ್ಳುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ. ಸತ್ಯ ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಟ್ವೀಟ್ ಮಾಡಿದ್ದಾರೆ.
ಮೆಜೆಸ್ಟಿಕ್, ಡಾನ್, ದಾಸ, ಶಾಸ್ತ್ರೀ, ಗೂಳಿ ಸೇರಿದಂತೆ 16 ಚಿತ್ರಗಳನ್ನ ನಿರ್ದೇಶಿಸಿದ್ದ ಸತ್ಯ ಅವರ ಕೊನೆಯ ಚಿತ್ರ ಮರಿ ಟೈಗರ್ ಆಗಿತ್ತು.
ನನ್ನ ಆಪ್ತ ಸ್ನೇಹಿತರಲ್ಲೊಬ್ಬರು, ನನ್ನ ‘ಮೆಜೆಸ್ಟಿಕ್’ ಚಿತ್ರದ ನಿರ್ದೇಶಕರು ಪಿ.ಎನ್ ಸತ್ಯ ಇಂದು ನಮ್ಮಿಂದ ದೈಹಿಕವಾಗಿ ದೂರವಾಗಿದ್ದಾರೆ. ಈ ನಷ್ಟವನ್ನು ಸಹಿಸಿಕೊಳ್ಳುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ. ಸತ್ಯ ರವರ ಆತ್ಮಕ್ಕೆ ಶಾಂತಿ ಸಿಗಲಿ
— Darshan Thoogudeepa (@dasadarshan) May 5, 2018