ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಇದೀಗ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ‘ಡೆವಿಲ್’ (Devil Film) ಆಗಿ ಅವತಾರ ತಾಳಿರುವ ದರ್ಶನ್ ಮುಂಬರುವ ಸಿನಿಮಾದ ರಿಲೀಸ್ ಬಗ್ಗೆ ಮಾಹಿತಿ ನೀಡಿದ್ದಾರೆ. ‘ಡೆವಿಲ್’ ಬಗ್ಗೆ ಬಿಗ್ ಅಪ್‌ಡೇಟ್ ಕೊಟ್ಟಿದ್ದಾರೆ. ಇದನ್ನೂ ಓದಿ:ಕಮಲ್ ನಟನೆಯ ‘ಇಂಡಿಯನ್ 2’ ಫಸ್ಟ್ ಸಾಂಗ್ ರಿಲೀಸ್
ನಮ್ಮ ನಲ್ಮೆಯ ಸೆಲೆಬ್ರಿಟಿಸ್ ಹಾಗೂ ಕನ್ನಡಾಭಿಮಾನಿಗಳಿಗೆ ವಿಶೇಷ ಪ್ರಕಟಣೆ. ‘ಡೆವಿಲ್’ (Devil) ಚಿತ್ರವು ಇದೇ ಕ್ರಿಸ್‌ಮಸ್ 2024 ಬೆಳ್ಳಿತೆರೆಯ ಮೇಲೆ ಬರಲಿದೆ. ನಿಮ್ಮ ಪ್ರೀತಿ ಮತ್ತು ಹಾರೈಕೆ ಸದಾ ಕನ್ನಡ ಚಿತ್ರಗಳ ಮೇಲಿರಲಿ ಎಂದು ಎಕ್ಸ್‌ನಲ್ಲಿ ದರ್ಶನ್ ಮಾಹಿತಿ ನೀಡಿದ್ದಾರೆ. ಈ ಮೂಲಕ ಫ್ಯಾನ್ಸ್‌ಗೆ ಬಿಗ್ ಸರ್ಪ್ರೈಸ್ ನೀಡಿದ್ದಾರೆ.
ನಮ್ಮ ನಲ್ಮೆಯ ಸೆಲೆಬ್ರಿಟಿಸ್ ಹಾಗೂ ಕನ್ನಡಾಭಿಮಾನಿಗಳಿಗೆ ವಿಶೇಷ ಪ್ರಕಟಣೆ – ‘ಡೆವಿಲ್’ ಚಿತ್ರವು ಇದೇ ಕ್ರಿಸ್‌ಮಸ್ 2024 ಬೆಳ್ಳಿತೆರೆಯ ಮೇಲೆ ಬರಲಿದೆ. ನಿಮ್ಮ ಪ್ರೀತಿ-ಹಾರೈಕೆ ಸದಾ ಕನ್ನಡ ಚಿತ್ರಗಳ ಮೇಲಿರಲಿ ????#DevilTheHero pic.twitter.com/ijePSdg1r5
— Darshan Thoogudeepa (@dasadarshan) May 23, 2024
ಅಂದಹಾಗೆ, ದರ್ಶನ್ ನಟನೆಯ ಡೆವಿಲ್ ಸಿನಿಮಾಗೆ ನಾಯಕಿಯ ಆಯ್ಕೆಯಾಗಿದೆ. ವಾಮನ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿರುವ ತುಳುನಾಡ ಕುವರಿ ರಚನಾ ರೈ (Rachana Rai) ಅವರು ಡೆವಿಲ್ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿರುವ ವಿಚಾರವನ್ನು ಕಳೆದ ವಾರ ಚಿತ್ರತಂಡ ಅನೌನ್ಸ್ ಮಾಡಿದ್ದರು. ಈ ಹಿಂದೆ ಇವರು ಶಂಕರ್ ರಾಮನ್ ನಿರ್ದೇಶನದಲ್ಲಿ ಮೂಡಿ ಬಂದ ‘ವಾಮನ’ ಚಿತ್ರಕ್ಕೆ ನಾಯಕಿಯಾಗಿದ್ದರು. ಈ ಹಿಂದೆ ತುಳು ಸಿನಿಮಾವೊಂದರಲ್ಲಿ ನಟಿಸಿದ್ದ ರಚನಾಗೆ ವಾಮನ ಮೊದಲ ಕನ್ನಡ ಸಿನಿಮಾವಾಗಿತ್ತು.

ಇತ್ತೀಚೆಗೆ ‘ಡೆವಿಲ್’ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆದ ಬೆನ್ನಲ್ಲೇ ಅದರ ತೆರೆಹಿಂದಿನ ಝಲಕ್ ಹೇಗಿತ್ತು ಎಂಬುದನ್ನು ಇದೀಗ ರಿವೀಲ್ ಮಾಡಿದ್ದಾರೆ. ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಮೇಕಿಂಗ್ ವಿಡಿಯೋವನ್ನು ಚಿತ್ರತಂಡ ರಿಲೀಸ್ ಮಾಡಿತ್ತು.
ಫೆಬ್ರವರಿಯಲ್ಲಿ ಚಿತ್ರದ ಫಸ್ಟ್ ಲುಕ್ ರಿವೀಲ್ ಆಗಿತ್ತು. ನಮ್ಮ ಮನೆಯಲ್ಲೊಂದು ಪುಟ್ಟ ಪಾಪು ಇರುವುದು. ಫೋಟೋ ತೆಗೆದರೆ ಅದಕ್ಕೆ ಬಲು ಕೋಪ ಬರುವುದು. ಫೋಟೋ ತೆಗೆದ ಪಾಪು ಕೈಯ ಮುರಿದು ಬಿಡುವುದು. ಸರ್ಸು ಪಾಪು ಹೆಸರು ಕೇಳಲ್ವಾ? ಎಂದು ದರ್ಶನ್ ಹೇಳಿರುವ ಡೈಲಾಗ್ ‘ಡೆವಿಲ್’ ಮೊದಲ ಟೀಸರ್‌ನಲ್ಲಿತ್ತು. ಈಗ ಇದರ ವಿಡಿಯೋ ಬಿಡಲಾಗಿದೆ. ಕಲರ್‌ಫುಲ್ ಲೋಕೇಷನ್‌ನಲ್ಲಿ ದರ್ಶನ್ ಸಖತ್ ಸ್ಟೈಲೀಶ್ ಆಗಿ ಕಾಣಿಸಿಕೊಂಡಿದ್ದಾರೆ.


