ಥಾಯ್ಲೆಂಡ್‌ನಲ್ಲಿ ಜಾಲಿ ಮೂಡಲ್ಲಿರೋ ದರ್ಶನ್‌ ಬೇಲ್‌ ಭವಿಷ್ಯ ಇಂದು?

Public TV
2 Min Read

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ (Darshan), ಪವಿತ್ರಾಗೌಡ ಸೇರಿ ಇತರ ಆರೋಪಿಗಳ ಜಾಮೀನು ಭವಿಷ್ಯ ಇಂದು (ಜು.22) ರಂದು ನಿರ್ಧಾರವಾಗುವ ಸಾಧ್ಯತೆ ಇದೆ. ಈಗಾಗಲೇ ಸರ್ಕಾರದ ಪರ ವಿಚಾರಣೆ ನಡೆಸಿರುವ ಸುಪ್ರಿಂ ಕೋರ್ಟ್ (Supreme Court) ಇಂದು ದರ್ಶನ್ ಸೇರಿ 7 ಆರೋಪಿಗಳ ಪರ ವಾದ ಆಲಿಸಲಿದೆ.

ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾ.ಜೆ ಬಿ ಪಾರ್ದಿವಾಲಾ ನೇತೃತ್ವದ ದ್ವಿಸದಸ್ಯ ಪೀಠ ಮುಂದುವರಿಸಲಿದೆ. ರಾಜ್ಯ ಸರ್ಕಾರ ಪರ ವಕೀಲರ ವಾದ ಆಲಿಸಿ, ದಾಖಲೆಗಳನ್ನು ಸ್ವೀಕರಿಸಿರುವ ಪೀಠ, ಆರೋಪಿಗಳ ಪರ ವಕೀಲರ ವಾದ ಮಂಡನೆ ಆಲಿಸಿ, ಬಳಿಕ ಅಂತಿಮ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ಥಾಯ್ಲೆಂಡ್‌ನಲ್ಲಿ ದರ್ಶನ್ ಕೂಲ್ ಕೂಲ್

ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ಸರ್ಕಾರ, ಪೊಲೀಸ್ ಇಲಾಖೆ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ ಲೂಥ್ರಾ ವಾದ ಮಂಡಿಸಿದ್ದರು. ನಟ ದರ್ಶನ್ ಪರವಾಗಿ ಹಿರಿಯ ನ್ಯಾಯವಾದಿ ಅಭಿಷೇಕ್ ಮನು ಸಿಂಘ್ವಿ ನಿಯೋಜಿಸಲಾಗಿತ್ತು. ಆದರೆ ಅಭಿಷೇಕ್ ಮನು ಸಿಂಘ್ವಿ ಸದ್ಯ ಕರ್ನಾಟಕದ ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯ ಹಾಗೂ ಕರ್ನಾಟಕ ಸರ್ಕಾರದ ಪರ ವಾದ ಮಂಡನೆ ಮಾಡುತ್ತಿದ್ದಾರೆ. ಅವರೇ ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ಸರ್ಕಾರ ವಿರುದ್ಧ ವಾದ ಮಾಡುವುದು ಸೂಕ್ತವಲ್ಲ ಎಂಬ ಕಾರಣಕ್ಕೆ ದರ್ಶನ್ ಈಗ ಹಿರಿಯ ವಕೀಲ ಕಪಿಲ್ ಸಿಬಲ್ ಅವರನ್ನು ನೇಮಿಸಿಕೊಂಡಿದ್ದು, ಸಿಬಲ್ ವಾದ ಮಂಡಿಸಲಿದ್ದಾರೆ. ಇದಾದ ಬಳಿಕ ಉಳಿದ ಆರೋಪಿಗಳ ಪರ ವಕೀಲರು ವಾದ ಮಂಡಿಸಲಿದ್ದಾರೆ.

ಕಳೆದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಹೈಕೋರ್ಟ್ ತೀರ್ಪಿನ ಬಗ್ಗೆ ಬೇಸರ ವ್ಯಕ್ತಪಡಿಸಿತ್ತು. ರಾಜ್ಯ ಸರ್ಕಾರ ಸಲ್ಲಿಸಿರುವ ದಾಖಲೆಗಳನ್ನು ಪರಿಶೀಲಿಸಿದ್ದೇವೆ. ಜಾಮೀನು ನೀಡುವಾಗ ಹೈಕೋರ್ಟ್‌ ಸೂಕ್ತವಾಗಿ ತನ್ನ ವಿವೇಚನೆ ಬಳಸಿಲ್ಲ ಎಂದು ನ್ಯಾ.ಪಾರ್ದಿವಾಲ ಅಭಿಪ್ರಾಯಪಟ್ಟಿದ್ದರು.

ಥಾಯ್ಲೆಂಡ್‍ನಲ್ಲಿ ನಾಲ್ಕು ದಿನಗಳಿಂದ ದರ್ಶನ್ ನಟನೆಯ ಡೆವಿಲ್ ಸಾಂಗ್ ಶೂಟಿಂಗ್‌ ನಡೆಯುತ್ತಿದೆ. ಕುಟುಂಬ ಸಮೇತ ಥಾಯ್ಲೆಂಡ್‍ಗೆ ತೆರಳಿರುವ ದರ್ಶನ್, ಚಿತ್ರೀಕರಣ ಮುಗಿದ ನಂತರ ನಾಲ್ಕೈದು ದಿನ ಅಲ್ಲೇ ಇದ್ದು, ಜುಲೈ 25ರ ನಂತರ ಭಾರತಕ್ಕೆ ವಾಪಸ್ ಆಗಲಿದ್ದಾರೆ. ಇದನ್ನೂ ಓದಿ: ಪತಿಯನ್ನ ಪತ್ನಿ ನದಿಗೆ ತಳ್ಳಿದ್ದ ಆರೋಪ ಪ್ರಕರಣಕ್ಕೆ ಟ್ವಿಸ್ಟ್ – ಪತಿ ವಿರುದ್ಧ ಮಹಿಳಾ ಠಾಣೆಯಲ್ಲಿ ಕೇಸ್ ದಾಖಲು

Share This Article