ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ವಿಚಾರ – ಆ.23 ಕ್ಕೆ ವಿಚಾರಣೆ ಮುಂದೂಡಿಕೆ

Public TV
1 Min Read

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಎ2 ಆರೋಪಿ ನಟ ದರ್ಶನ್‌ರನ್ನು (Darshan) ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ವಿಚಾರ ಸಂಬಂಧ ಸಿಸಿಎಚ್ 64ರಲ್ಲಿ ವಿಚಾರಣೆ ನಡೆಸಿ, ಆ.23ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ವಿಚಾರಣೆ ನಡೆಸಿದ ನ್ಯಾಯಾಧೀಶರು, ದರ್ಶನ್ ಪರ ವಕೀಲರಿಗೆ ಅಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿ ಮುಂದಿನ 23ಕ್ಕೆ ವಿಚಾರಣೆಯನ್ನು ಮುಂದೂಡಿದರು. ಇನ್ನು ಸರ್ಕಾರಿ ಪರ ವಕೀಲರು ಹಾಜರಾಗಿ, ಕೊಲೆ ಕೇಸ್‌ನಲ್ಲಿ ಜಾಮೀನು ಸಿಗುವ ಹಿಂದೆ ದರ್ಶನ್ ಸೇರಿದಂತೆ ಇತರೆ ಆರೋಪಿಗಳು ಯಾವ್ಯಾವ ಜೈಲಿನಲ್ಲಿದ್ರು ಅಲ್ಲಿಗೆ ಶಿಫ್ಟ್ ಮಾಡಬೇಕು ಅಂತಾ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: `ವೇಷಗಳು’ ಚಿತ್ರದ ವಿಭಿನ್ನ ಪಾತ್ರಕ್ಕೆ ಬಣ್ಣ ಹಚ್ಚಿದ ಶರತ್ ಲೋಹಿತಾಶ್ವ

ಆದರೆ ಜಾಮೀನು ರದ್ದಾದ ದಿನವೇ ದರ್ಶನ್ ಪರ ವಕೀಲರು ಒಂದು ವೇಳೆ ಬಳ್ಳಾರಿಗೆ ಶಿಫ್ಟ್ ಮಾಡುವುದಾದರೆ ನಮ್ಮ ವಾದವನ್ನು ಅಲಿಸಬೇಕು ಅಂತಾ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ದರ್ಶನ್ ಪರ ವಕೀಲರಿಗೆ ಅವಕಾಶ ನೀಡಲಾಗಿದೆ. ಮುಂದಿನ ವಿಚಾರಣೆ ವೇಳೆ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಾ (Parappana Agrahara Jail) ಅಥವಾ ಬಳ್ಳಾರಿ ಜೈಲಾ (Ballary Jail) ಅನ್ನೋದು ತೀರ್ಮಾನವಾಗುವ ಸಾಧ್ಯತೆ ಇದೆ.

Share This Article