Breaking- ಡಾ.ರಾಜ್ ಕುಟುಂಬ ಕುಡಿ ನಟ ಧ್ರುವನ್ ಗಂಭೀರ ಅಪಘಾತ : ಐಸಿಯುನಲ್ಲಿ ಚಿಕಿತ್ಸೆ

Public TV
1 Min Read

ಪಾರ್ವತಮ್ಮ ರಾಜ್ ಕುಮಾರ್ (, Pavarthamma Rajkumar) ಅವರ ಸಹೋದರನ ಪುತ್ರ, ನಟ ಸೂರಜ್ (ಧ್ರುವನ್) (Dhruvan) ಗೆ ಚಾಮರಾಜನಗರ ಬೇಗೂರು (ಗುಂಡ್ಲುಪೇಟೆ) ಸಮೀಪದ ಹಿರಿಕಾಟಿ ಗೇಟ್ ಬಳಿ ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸೂರಜ್ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ನಿನ್ನೆ ಬೇಗೂರಿನಿಂದ ಹಿರಿಕಾಟಿ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿಯೊಂದು ಮೈಸೂರು ಕಡೆಯಿಂದ ಬರುತ್ತಿದ್ದ ಬುಲೆಟ್ ಬೈಕ್ ಗೆ ಡಿಕ್ಕಿ  ಸಂಭವಿಸಿದ ಪರಿಣಾಮ   ಮೈಸೂರಿನ ಸರಸ್ವತಿಪುರಂ ನಿವಾಸಿ ಧ್ರುವನ್ (28) ತೀವ್ರವಾಗಿ ಗಾಯಗೊಂಡಿದ್ದಾರೆ  ವಿಷಯ ತಿಳಿದ ಬೇಗೂರು ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಗಾಯಾಳವನ್ನು ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ:ಕೆಂಪು ಬಣ್ಣದ ಸೀರೆಯಲ್ಲಿ ಗ್ಲ್ಯಾಮರಸ್ ಆಗಿ ಮಿಂಚಿದ ಮಾನ್ವಿತಾ

ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಧ್ರುವನ್ ಆಪ್ತರು ನೀಡಿದ ಮಾಹಿತಿಯಂತೆ ನಿನ್ನೆಯೇ ಅವರಿಗೆ ಶಸ್ತ್ರ ಚಿಕಿತ್ಸೆ ನೀಡಲಾಗಿದ್ದು, ಕಾಲಿಗೆ ತೀವ್ರವಾಗಿ ಪೆಟ್ಟಾಗಿದ್ದರಿಂದ ಒಂದು ಕಾಲು ಕತ್ತರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನೂ ಅವರಿಗೆ ಪ್ರಜ್ಞೆ ಬಾರದೇ ಇರುವ ಹಿನ್ನೆಲೆಯಲ್ಲಿ ಐಸಿಯುನಲ್ಲಿ(ICU) ಚಿಕಿತ್ಸೆ ನೀಡಲಾಗುತ್ತಿದೆಯಂತೆ.

ನಿನ್ನೆ ಶಿವರಾಜ್ ಕುಮಾರ್ ಸೇರಿದಂತೆ ಹಲವರು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಮೂಲ ಸೂರಜ್ ಅಂತಿದ್ದ ಹೆಸರನ್ನು ಧ್ರುವನ್ ಅಂತ ಬದಲಾಯಿಸಿಕೊಂಡು ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದ್ದರು. ಭಗವಾನ್ ಶ್ರೀಕೃಷ್ಣ ಪರಮಾತ್ಮ ಸಿನಿಮಾ ಸೇರಿದಂತೆ ಹಲವು ಚಿತ್ರಗಳಲ್ಲಿ ಇವರು ನಟಿಸಿದ್ದಾರೆ.

Share This Article