ಕೊನೆಗೂ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟ ದುನಿಯಾ ವಿಜಯ್ ಪುತ್ರಿ

Public TV
1 Min Read

ಸ್ಯಾಂಡಲ್‌ವುಡ್ ನಟ ದುನಿಯಾ ವಿಜಯ್ (Duniya Vijay) ಪುತ್ರಿ ಮೋನಿಕಾ (Monica Vijay) ಸಿನಿಮಾರಂಗಕ್ಕೆ ಎಂಟ್ರಿ ಕೊಡುತ್ತಾರೆ ಎಂಬ ಸುದ್ದಿ ಕೆಲದಿನಗಳಿಂದ ಹರಿದಾಡಿತ್ತು. ಇದೀಗ ಅಂತೆ ಕಂತೆ ಸುದ್ದಿಗೆ ಸ್ಪಷ್ಟನೆ ಸಿಕ್ಕಿದೆ. ದುನಿಯಾ ವಿಜಯ್ ನಟನೆಯ 29ನೇ ಸಿನಿಮಾದಲ್ಲಿ ಮಗಳು ಮೋನಿಕಾ ಕೂಡ ನಟಿಸಲಿದ್ದಾರೆ.

ಬೆಂಗಳೂರಿನ ದೇವಸ್ಥಾನವೊಂದರಲ್ಲಿ ಏ.11ರಂದು ಚಿತ್ರದ ಮುಹೂರ್ತ ಕಾರ್ಯಕ್ರಮ ಜರುಗಲಿದೆ. ವಿಜಯ್ ಹೊಸ ಸಿನಿಮಾಗೆ ಕೆ.ವಿ ಸತ್ಯಪ್ರಕಾಶ್ ನಿರ್ಮಾಣ ಮಾಡುತ್ತಿದ್ದಾರೆ. ನಿರ್ದೇಶಕ ಜಡೇಶ್ ಕೆ.ಹಂಪಿ, ದುನಿಯಾ ವಿಜಯ್, ರಚಿತಾ ರಾಮ್ (Rachitha Ram), ಮೋನಿಕಾ ವಿಜಯ್, ಶಿಶಿರ್ ಮುಂತಾದವರು ಮುಹೂರ್ತ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ದುನಿಯಾ ವಿಜಯ್ ಮತ್ತು ರಚಿತಾ ರಾಮ್ ಹೊಸ ಚಿತ್ರಕ್ಕೆ ಜಡೇಶ್ ಕೆ. ಹಂಪಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಪುತ್ರಿ ಮೋನಿಕಾಗೂ ಕೂಡ ಚಿತ್ರದಲ್ಲಿ ಉತ್ತಮ ಪಾತ್ರವಿದೆ. ಈ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಹೊಸ ಪ್ರತಿಭೆ ಮೋನಿಕಾ ಪಾದಾರ್ಪಣೆ ಮಾಡುತ್ತಿದ್ದಾರೆ. ಇದನ್ನೂ ಓದಿ:ಈದ್ ಹಬ್ಬಕ್ಕೆ ‘ಬಡೆ ಮಿಯಾನ್ ಚೋಟೆ ಮಿಯಾನ್’

ಈ ಹಿಂದೆ ‘ಜಾನಿ ಮೇರಾ ನಾಮ್ ಪ್ರೀತಿ ಮೇರಾ ಕಾಮ್’ ಎಂಬ ಚಿತ್ರದಲ್ಲಿ ದುನಿಯಾ ವಿಜಯ್ ಮತ್ತು ರಚಿತಾ ರಾಮ್ ನಟಿಸಿದ್ದರು. ಈಗ ಹಲವು ವರ್ಷಗಳ ನಂತರ ಈ ಜೋಡಿ ಒಂದಾಗುತ್ತಿದೆ. ಹಾಗಾಗಿ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ.

Share This Article