25 ವರ್ಷಗಳ ಒಡನಾಟಕ್ಕೆ ಬ್ರೇಕ್‌ – BJPಗೆ ನಟಿ ಗೌತಮಿ ತಡಿಮಲ್ಲ ಗುಡ್‍ಬೈ

Public TV
2 Min Read

ಚೆನ್ನೈ: ತನಗೆ ದ್ರೋಹ ಬಗೆದಿರುವ ವ್ಯಕ್ತಿಗೆ ಪಕ್ಷದ ಕೆಲ ನಾಯಕರು ಸಹಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ನಟಿ ಹಾಗೂ ಬಿಜೆಪಿ (BJP) ನಾಯಕಿ ಗೌತಮಿ ತಡಿಮಲ್ಲ (Gautami Tadimalla) ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ 25 ವರ್ಷಗಳ ಒಡನಾಟವನ್ನು ಕೊನೆಗೊಳಿಸುತ್ತಿರುವುದಾಗಿ ತಿಳಿಸಿದ್ದಾರೆ.

ರಾಜೀನಾಮೆ ಪತ್ರವನ್ನು ತಮ್ಮ X ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಕುರಿತು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (JP Nadda), ತಮಿಳುನಾಡು (TamilNadu) ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರಿಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಶೋಭಾ ಕರಂದ್ಲಾಜೆ ಹುಟ್ಟುಹಬ್ಬ – ಮಾವುತ, ಕಾವಾಡಿಗಳಿಗೆ ಉಪಹಾರಕೂಟ ಏರ್ಪಡಿಸಿ ಆಚರಣೆ

ಪತ್ರದಲ್ಲಿ ಅತ್ಯಂತ ಭಾರವಾದ ಹೃದಯದಿಂದ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ನಾನು 25 ವರ್ಷಗಳ ಹಿಂದೆ ರಾಷ್ಟ್ರ ನಿರ್ಮಾಣಕ್ಕೆ ತನ್ನ ಪ್ರಯತ್ನಗಳನ್ನು ಕೊಡುಗೆ ನೀಡಲು ಪಕ್ಷಕ್ಕೆ ಸೇರಿದ್ದೆ. ನನ್ನ ಜೀವನದಲ್ಲಿ ನಾನು ಎದುರಿಸಿದ ಎಲ್ಲಾ ಸವಾಲುಗಳ ಹೊರತಾಗಿಯೂ, ನಾನು ಬದ್ಧತೆಯಿಂದ ನಡೆದುಕೊಂಡಿದ್ದೇನೆ. ಆದರೂ ಇಂದು ನಾನು ನನ್ನ ಜೀವನದಲ್ಲಿ ಊಹಿಸಲಾಗದ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ನಿಂತಿದ್ದೇನೆ. 2021ರ ವಿಧಾನಸಭಾ ಚುನಾವಣೆಯಲ್ಲೂ ನನಗೆ ಟಿಕೆಟ್‌ ನೀಡುವುದಾಗಿ ಪಕ್ಷ ಭರವಸೆ ನೀಡಿತ್ತಾದರೂ ಕೊನೇ ಕ್ಷಣದಲ್ಲಿ ಟಿಕೆಟ್‌ ಕೈತಪ್ಪಿತ್ತು. ಇದರ ಹೊರತಾಗಿಯೂ ಪಕ್ಷಕ್ಕಾಗಿ ದುಡಿದಿದ್ದೇನೆ. ಪಕ್ಷ ಮತ್ತು ಮುಖಂಡರಿಂದ ಯಾವುದೇ ರೀತಿಯ ಬೆಂಬಲ ಪಡೆಯಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ.

ನನ್ನ ನಂಬಿಕೆಗೆ ದ್ರೋಹ ಬಗೆದಿರುವ ವ್ಯಕ್ತಿಗೆ ಕೆಲವರು ಬೆಂಬಲ ನೀಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ನಾನು 17ನೇ ವಯಸ್ಸಿನಿಂದ ಕೆಲಸ ಮಾಡುತ್ತಿದ್ದೇನೆ. ನನ್ನ ವೃತ್ತಿಜೀವನವು 37 ವರ್ಷಗಳ ಕಾಲ ಸಿನಿಮಾ, ದೂರದರ್ಶನ, ರೇಡಿಯೋ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ವ್ಯಾಪಿಸಿದೆ. ಈ ವಯಸ್ಸಿನಲ್ಲಿ ಆರ್ಥಿಕವಾಗಿ ಸುಭದ್ರವಾಗಿರಲು ಮತ್ತು ನನ್ನ ಮಗಳ ಭವಿಷ್ಯಕ್ಕಾಗಿ ನಾನು ನನ್ನ ಇಡೀ ಜೀವನ ಕೆಲಸ ಮಾಡಿದ್ದೇನೆ. ನಾನು ಮತ್ತು ನನ್ನ ಮಗಳು ಸ್ಥಿರವಾಗಿ ಮತ್ತು ಸುರಕ್ಷಿತವಾಗಿರಬೇಕಾದ ಸ್ಥಳದಲ್ಲಿ ನಾನು ಈಗ ನಿಂತಿದ್ದೇನೆ. ಆದರೆ ಸಿ.ಅಳಗಪ್ಪನ್ ನನಗೆ ಮೋಸ ಮಾಡಿ ನನ್ನ ಹಣ, ಆಸ್ತಿ, ದಾಖಲೆಗಳನ್ನು ದೋಚಿದ್ದಾರೆ ಎಂದು ದೂರಿದ್ದಾರೆ. ಇದನ್ನೂ ಓದಿ: ಶೋಭಾ ಕರಂದ್ಲಾಜೆ ಹುಟ್ಟುಹಬ್ಬ – ಮಾವುತ, ಕಾವಾಡಿಗಳಿಗೆ ಉಪಹಾರಕೂಟ ಏರ್ಪಡಿಸಿ ಆಚರಣೆ

ನ್ಯಾಯ ಕೊಡಿಸುವಂತೆ ಮನವಿ: ಈ ವಿಚಾರದಲ್ಲಿ ನ್ಯಾಯಕ್ಕಾಗಿ ಮುಖ್ಯಮಂತ್ರಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಗೌತಮಿ ತಡಿಮಲ್ಲ ಮನವಿ ಮಾಡಿದ್ದಾರೆ. ಎಫ್‌ಐಆರ್ ದಾಖಲಾಗಿದ್ದು, ಮುಖ್ಯಮಂತ್ರಿ ಮತ್ತು ಪೊಲೀಸ್ ಅಧಿಕಾರಿಗಳು ನನಗೆ ನ್ಯಾಯ ಕೊಡಿಸುತ್ತಾರೆ ಎಂಬ ಭರವಸೆ ನನಗಿದೆ ಎಂದು ಕೋರಿದ್ದಾರೆ. ಇದನ್ನೂ ಓದಿ: World Cup 2023: ಸಿಕ್ಸರ್‌ನಿಂದಲೇ ಮತ್ತೊಂದು ದಾಖಲೆ ಬರೆದ ಸಿಕ್ಸರ್ ಶರ್ಮಾ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್