ಜ್ಯೂ.ಎನ್‌ಟಿಆರ್ ಹುಟ್ಟುಹಬ್ಬದಂದು ‘ದೇವರ’ ಚಿತ್ರದ ಫಸ್ಟ್ ಸಾಂಗ್ ರಿಲೀಸ್

Public TV
1 Min Read

ಟಾಲಿವುಡ್ ನಟ ಜ್ಯೂ.ಎನ್‌ಟಿಆರ್ ನಟನೆಯ ‘ದೇವರ’ (Devara Film) ಸಿನಿಮಾದ ಅಪ್‌ಡೇಟ್ ಯಾವಾಗ ಸಿಗಲಿದೆ ಎಂದು ಕಾದು ಕುಳಿತ ಅಭಿಮಾನಿಗಳಿಗೆ ಸಿಕ್ತು ಗುಡ್ ನ್ಯೂಸ್. ಜ್ಯೂ.ಎನ್‌ಟಿಆರ್ ಹುಟ್ಟುಹಬ್ಬದ ಸಂದರ್ಭದಲ್ಲಿ ‘ದೇವರ’ ಸಿನಿಮಾದ ಮೊದಲ ಹಾಡು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.

‘ಆರ್‌ಆರ್‌ಆರ್’ (RRR) ಸಿನಿಮಾದ ಸೂಪರ್ ಸಕ್ಸಸ್ ನಂತರ ಜ್ಯೂ.ಎನ್‌ಟಿಆರ್ ನಟನೆಯ ‘ದೇವರ’ ಚಿತ್ರದ ಮೇಲೆ ಅಭಿಮಾನಿಗಳಿಗೆ ಭಾರೀ ನಿರೀಕ್ಷೆಯಿದೆ. ಇದರ ನಡುವೆ ಚಿತ್ರದ ಬಗ್ಗೆ ಬಿಗ್‌ ಅಪ್‌ಡೇಟ್‌ ಸಿಕ್ಕಿದೆ. ಇದೇ ಮೇ 20ರಂದು ತಾರಕ್ ಬರ್ತ್‌ಡೇ ಆದರೆ ಒಂದು ದಿನ (ಮೇ 19) ಮುಂಚಿತವಾಗಿ ಸಾಂಗ್ ರಿಲೀಸ್ ಮಾಡುವುದಾಗಿ ಚಿತ್ರತಂಡ ತಿಳಿಸಿದೆ.

ಕೆಲವು ತಿಂಗಳುಗಳ ಹಿಂದೆ ಜ್ಯೂ.ಎನ್‌ಟಿಆರ್ ಮತ್ತು ಜಾನ್ವಿ ಕಪೂರ್ (Janhvi Kapoor) ಪಾತ್ರದ ಲುಕ್ ಅನ್ನು ಚಿತ್ರತಂಡ ಹಂಚಿಕೊಂಡಿತ್ತು. ಹಾಗಾಗಿ ಚಿತ್ರದ ಮೊದಲ ಸಾಂಗ್‌ ಬಗ್ಗೆ ಫ್ಯಾನ್ಸ್‌ಗೆ ನಿರೀಕ್ಷೆಯಿದೆ. ಇದನ್ನೂ ಓದಿ:ವಿಜಯ್ ದೇವರಕೊಂಡಗೆ ಸಾಯಿ ಪಲ್ಲವಿ ನಾಯಕಿ

ಅಂದಹಾಗೆ, ‘ದೇವರ’ ಚಿತ್ರಕ್ಕೆ ನಾಯಕಿಯಾಗುವ ಮೂಲಕ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್ ತೆಲುಗಿಗೆ ಎಂಟ್ರಿ ಕೊಡ್ತಿದ್ದಾರೆ. ಸೈಫ್ ಅಲಿ ಖಾನ್ (Saif Ali Khan) ವಿಲನ್ ಆಗಿ ಅಬ್ಬರಿಸಲಿದ್ದಾರೆ. ಇದೇ ಅಕ್ಟೋಬರ್ 10ರಂದು ಬಹುಭಾಷೆಗಳಲ್ಲಿ ‘ದೇವರ’ ಸಿನಿಮಾ ರಿಲೀಸ್ ಆಗಲಿದೆ.

Share This Article