ಮಾಜಿ ಸಿಎಂ ನಾಯ್ಡು ಬಂಧನಕ್ಕೆ ನಟ ಪವನ್ ಕಲ್ಯಾಣ್ ಖಂಡನೆ

Public TV
2 Min Read

ತೆಲುಗು ದೇಶಂ ಪಕ್ಷದ ಅಧ್ಯಕ್ಷ ಮತ್ತು ಆಂಧ್ರಪ್ರದೇಶದ (Andhra Pradesh) ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು (Chandrababu Naidu) ಅವರನ್ನು ಶನಿವಾರ ಮುಂಜಾನೆ ನಂದ್ಯಾಲ್ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಇದೊಂದು ದ್ವೇಷಪೂರಿತ ನಡೆಯಾಗಿದ್ದು, ಈ ಬಂಧನವನ್ನು ಖಂಡಿಸುವುದಾಗಿ ನಟ ಹಾಗೂ ಜನಸೇವಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ (Pawan Kalyan) ಖಂಡಿಸಿದ್ದಾರೆ.

ಸಿಐಡಿ ಅಧಿಕಾರಿಗಳ ಈ ಬಂಧನವನ್ನು (Arrest)ಖಂಡಿಸಿರುವ ನಟ ಪವನ್ ಕಲ್ಯಾಣ್, ‘ಚಂದ್ರಬಾಬು ನಾಯ್ಡು ಅವರ ಬಂಧನವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಘಟನೆಗಳು ದುರದೃಷ್ಟಕರ. ಇಂದು ಮಾಜಿ ಮುಖ್ಯಮಂತ್ರಿಯನ್ನು ಬಂಧಿಸಿದ ರೀತಿ ನೋಡಿ ದುಃಖವಾಗಿದೆ. ಅಧಿಕಾರಿಗಳು ರಾಜಕೀಯ ಪಕ್ಷ ಮತ್ತು ಸರ್ಕಾರದ ನಾಯಕರ ಆದೇಶದಂತೆ ಬಂಧಿಸುವ ರೀತಿಯನ್ನು ನಾವು ಬಹಿರಂಗವಾಗಿ ವಿರೋಧಿಸುತ್ತೇವೆ’ ಎಂದಿದ್ದಾರೆ.

ನಂದ್ಯಾಲ್ ಡಿಐಜಿ ರಘುರಾಮಿ ರೆಡ್ಡಿ ಮತ್ತು ಅಪರಾಧ ತನಿಖಾ ದಳ (CID) ನೇತೃತ್ವದ ಪೊಲೀಸರ ಆರ್‌ಕೆ ಫಂಕ್ಷನ್ ಹಾಲ್‌ನಲ್ಲಿರುವ ನಾಯ್ಡು ಅವರ ನಿವಾಸಕ್ಕೆ ಮುಂಜಾನೆ 3 ಗಂಟೆಗೆ ಆಗಮಿಸಿದ್ದಾರೆ. ಈ ಸಮಯದಲ್ಲಿ ಚಂದ್ರಬಾಬು ನಾಯ್ದು ವಿಶ್ರಾಂತಿ ಪಡೆಯುತ್ತಿದ್ದರು. ಪೊಲೀಸರು ವಶಕ್ಕೆ ಪಡೆಯಲು ಬಂದ ವಿಚಾರ ತಿಳಿದು ಭಾರೀ ಸಂಖ್ಯೆಯಲ್ಲಿ ನಾಯ್ಡು ಮನೆ ಬಳಿ ಅಭಿಮಾನಿಗಳು ಸೇರಿದ್ದರು. ಅಭಿಮಾನಿಗಳ ಪ್ರತಿಭಟನೆಯಿಂದ ಪೊಲೀಸರಿಗೆ ನಾಯ್ದು ಅವರನ್ನು ವಶಕ್ಕೆ ಪಡೆಯಲು ಸಾಧ್ಯವಾಗಲಿಲ್ಲ.

ನಾಯ್ಡು ಅವರ ರಕ್ಷಣೆಗೆ ನಿಯೋಜನೆಗೊಂಡಿದ್ದ ಎಸ್‌ಪಿಜಿ ಪಡೆಗಳು ಸಹ ಪೊಲೀಸರಿಗೆ ಅನುಮತಿ ನೀಡಿರಲಿಲ್ಲ. ಕೊನೆಗೆ 6 ಗಂಟೆಗೆ ಚಂದ್ರಬಾಬು ನಾಯ್ಡು ಅವರನ್ನು ಪೊಲೀಸರು ಬಂಧಿಸಿದರು. ಕೌಶಲ್ಯ ಅಭಿವೃದ್ಧಿ ನಿಗಮದ ಹಗರಣದಲ್ಲಿ (Skill Development Corporation Scam) ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದ್ದು, ಅವರು ಎ1 ಆರೋಪಿ ಎಂದು ಡಿಐಜಿ ರಘುರಾಮಿ ರೆಡ್ಡಿ ತಿಳಿಸಿದರು.

 

ಐಪಿಸಿ ಸೆಕ್ಷನ್ 120 (8), 166, 167, 418, 420, 465, 468, 471, 409 ರ ಅಡಿಯಲ್ಲಿ ಬಂಧಿಸಲಾಗಿದೆ. ಭ್ರಷ್ಟಾಚಾರ ತಡೆ ಕಾಯ್ದೆ 1988 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್