ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ನಟ ಪ್ರಭುದೇವ

Public TV
0 Min Read

ಮಂಗಳೂರು: ನಟ ಪ್ರಭುದೇವ (Prabhu Deva) ಕುಟುಂಬ ಸಮೇತರಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ (Kukke Subramanya Temple) ಭೇಟಿ ನೀಡಿ ಶ್ರೀ ದೇವಳದಲ್ಲಿ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡರು.

ಪ್ರಭುದೇವ್ ಪತ್ನಿ ಹಾಗೂ ಕುಟುಂಬ ವರ್ಗದವರು ಮಹಾಭಿಷೇಕ ಪೂಜೆಯನ್ನು ನೆರವೇರಿಸಿ ಶ್ರೀದೇವರ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ಬಳಿಕ ದೇವಳದ ಕಚೇರಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಪ್ರಭುದೇವ ದಂಪತಿಯನ್ನು ಶಾಲು ಹೊದಿಸಿ ಫಲಪುಷ್ಪ ನೀಡಿ ಗೌರವಿಸಿದರು.

ಬಳಿಕ ಸುಬ್ರಹ್ಮಣ್ಯ ಮಠಕ್ಕೆ ಭೇಟಿ ನೀಡಿ, ಅಲ್ಲಿನ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಮಂತ್ರಾಕ್ಷತೆ ಪಡೆದರು.

Share This Article