ಅರೇಬಿಕ್ ಭಾಷೆಗೆ ಡಬ್ ಆಯ್ತು ರಾಜ್ ಬಿ ಶೆಟ್ಟಿ ನಟನೆಯ ಸಿನಿಮಾ

Public TV
1 Min Read

‘ಒಂದು ಮೊಟ್ಟೆಯ ಕಥೆ’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ರಾಜ್ ಬಿ ಶೆಟ್ಟಿ (Raj B Shetty) ಇತ್ತೀಚೆಗೆ ‘ರೂಪಾಂತರ’ ಎಂಬ ಚಿತ್ರದ ಮೂಲಕ ಮೋಡಿ ಮಾಡಿದ್ದರು. ಇದರ ನಡುವೆ ಅವರು ನಟಿಸಿದ ಸಿನಿಮಾ ಒಂದು ಅರೇಬಿಕ್ ಭಾಷೆಗೆ ಡಬ್ ಆಗಿ ರಿಲೀಸ್‌ಗೆ ಸಿದ್ಧವಾಗಿದೆ.

ರಾಜ್ ಬಿ ಶೆಟ್ಟಿ ಅವರು ಇತ್ತೀಚೆಗೆ ಮಮ್ಮುಟ್ಟಿಗೆ ವಿಲನ್ ಆಗಿ ‘ಟರ್ಬೋ’ (Turbo Film) ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರದ ನಟನೆಗೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ವೆಟ್ರಿವೇಲ್ ಷಣ್ಮುಖಂ ಎಂಬ ಹೆಸರಿನ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ ಗಮನ ಸೆಳೆದಿದ್ದರು. ಈಗ ಇದೇ ಚಿತ್ರ ಅರೇಬಿಕ್ ಭಾಷೆಗೆ ಡಬ್ ಆಗಿ ಸದ್ಯದಲ್ಲೇ ರಿಲೀಸ್ ಆಗಲಿದೆ.

ಗಲ್ಫ್ ರಾಷ್ಟ್ರದಲ್ಲಿ ‘ಟರ್ಬೋ’ ಚಿತ್ರ ರಿಲೀಸ್ ಆಗುತ್ತಿದೆ. ಇದು ಅರೇಬಿಕ್ ಭಾಷೆಗೆ ಡಬ್ ಆದ ಮೊದಲ ಭಾರತೀಯ ಸಿನಿಮಾ ಅನ್ನೋದು ವಿಶೇಷ. ಇದನ್ನೂ ಓದಿ:ತೆಲುಗಿನಲ್ಲಿ ಬಿಗ್ ಚಾನ್ಸ್- ಪ್ರಭಾಸ್‌ಗೆ ಮೃಣಾಲ್ ಠಾಕೂರ್ ಜೋಡಿ

ಅಂದಹಾಗೆ, ರಾಜ್ ಬಿ ಶೆಟ್ಟಿ ಸದ್ಯ ಅರ್ಜುನ್ ಜನ್ಯ ನಿರ್ದೇಶನದ ’45’ ಸಿನಿಮಾ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದಲ್ಲಿ ಶಿವರಾಜ್‌ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ, ಕಿರುತೆರೆ ನಟಿ ಕೌಸ್ತುಭ ಮಣಿ ನಟಿಸಿದ್ದಾರೆ.

Share This Article