RC 16: ರಾಮ್‌ಚರಣ್, ಶಿವಣ್ಣ ನಟನೆಯ ಚಿತ್ರಕ್ಕೆ ಅದ್ಧೂರಿ ಚಾಲನೆ

Public TV
1 Min Read

ಟಾಲಿವುಡ್ ನಟ ರಾಮ್‌ಚರಣ್ (Ramcharan), ಶಿವರಾಜ್‌ಕುಮಾರ್ (Shivarajkumar), ಜಾನ್ವಿ ಕಪೂರ್ ನಟನೆಯ ಹೊಸ ಸಿನಿಮಾಗೆ ಇಂದು (ಮಾ.20) ಅದ್ಧೂರಿಯಾಗಿ ಚಾಲನೆ ನೀಡಲಾಗಿದೆ. ಮುಹೂರ್ತ ಕಾರ್ಯಕ್ರಮಕ್ಕೆ ರಾಮ್ ಚರಣ್, ಜಾನ್ವಿ, ಮೆಗಾಸ್ಟಾರ್ ಚಿರಂಜೀವಿ ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ. ಇದನ್ನೂ ಓದಿ:‘ಬ್ಯಾಡ್ ನ್ಯೂಸ್’ ಬಗ್ಗೆ ಖುಷಿ ಇದೆ ಅಂತಿದ್ದಾರೆ ತೃಪ್ತಿ ದಿಮ್ರಿ

ಬಾಲಿವುಡ್ ಬ್ಯೂಟಿ ಜಾನ್ವಿ ಕಪೂರ್ (Janhvi Kapoor) ಇದೀಗ ತೆಲುಗಿನತ್ತ ಮುಖ ಮಾಡಿದ್ದಾರೆ. ಜ್ಯೂ.ಎನ್‌ಟಿಆರ್ ಜೊತೆ ಡ್ಯುಯೇಟ್ ಹಾಡಿದ ಮೇಲೆ ರಾಮ್‌ಚರಣ್ ಜೊತೆ ರೊಮ್ಯಾನ್ಸ್ ಮಾಡೋದಕ್ಕೆ ರೆಡಿಯಾಗಿದ್ದಾರೆ. ಚರಣ್ ನಟನೆಯ 16ನೇ ಚಿತ್ರಕ್ಕೆ ಇದೀಗ ಅದ್ಧೂರಿಯಾಗಿ ಮುಹೂರ್ತ ಸಮಾರಂಭ ನಡೆದಿದೆ.

ಈ ಕಾರ್ಯಕ್ರಮಕ್ಕೆ ರಾಮ್‌ಚರಣ್-ಉಪಾಸನಾ, ಬುಚ್ಚಿಬಾಬು ಜೊತೆ ಡೈರೆಕ್ಟರ್ ಶಂಕರ್, ಎ.ಆರ್ ರೆಹಮಾನ್, ಪುಷ್ಪ ಡೈರೆಕ್ಟರ್ ಸುಕುಮಾರ್, ಮೆಗಾಸ್ಟಾರ್ ಚಿರಂಜೀವಿ, ಬಾಲಿವುಡ್ ನಿರ್ಮಾಪಕ ಬೋನಿ ಕಪೂರ್ ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ.

ಮೊದಲ ಬಾರಿಗೆ ರಾಮ್- ಜಾನ್ವಿ ಕಪೂರ್ ಜೋಡಿಯಾಗಿ ನಟಿಸುತ್ತಿರೋದ್ರಿಂದ ಚಿತ್ರದ ಮೇಲೆ ನಿರೀಕ್ಷೆ ದುಪ್ಪಟ್ಟಾಗಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಕೂಡ ಚಿತ್ರದಲ್ಲಿ ಬಹುಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಸುಕುಮಾರ್ ಶಿಷ್ಯ ಬುಚ್ಚಿಬಾಬು ಈ ಹಿಂದೆ ‘ಉಪ್ಪೇನಾ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದರು. ಈ ಬಾರಿ ಡಿಫರೆಂಟ್ ಆಗಿರುವ ಕಥೆಯನ್ನೇ ಮಾಡಿದ್ದಾರೆ. ಚರಣ್‌ಗೂ ಈ ಕಥೆ ಇಷ್ಟವಾಗಿ ಸಿನಿಮಾ ಮಾಡಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ರಿಲೀಸ್ ಆದ್ಮೇಲೆ ಸಿನಿಮಾ ಅದೆಷ್ಟರ ಮಟ್ಟಿಗೆ ಪ್ರೇಕ್ಷಕರಿಗೆ ಮೋಡಿ ಮಾಡುತ್ತೆ ಎಂದು ಕಾದುನೋಡಬೇಕಿದೆ.

Share This Article