‘ಕಾಂತಾರ’ ಹೀರೋ ಕಡೆಯಿಂದ ಫ್ಯಾನ್ಸ್‌ಗೆ ಸಿಹಿಸುದ್ದಿ- ರಿಷಬ್ ಬರ್ತ್‌ಡೇಗೆ ಬಿಗ್ ಸರ್ಪ್ರೈಸ್

Public TV
1 Min Read

ಡಿವೈನ್ ಸ್ಟಾರ್ ಆಗಿ ರಿಷಬ್ ಶೆಟ್ಟಿ (Rishab Shetty)  ದೇಶದೆಲ್ಲೆಡೆ ಸದ್ದು ಮಾಡ್ತಿದ್ದಾರೆ. ‘ಕಾಂತಾರ’ (Kantara) ಸಿನಿಮಾದ ಮೂಲಕ ಅಪಾರ ಅಭಿಮಾನಿ ಬಳಗವನ್ನ ಸಂಪಾದಿಸಿದ್ದಾರೆ. ಜುಲೈ 7ರಂದು ರಿಷಬ್ ಶೆಟ್ಟಿ ಹುಟ್ಟುಹಬ್ಬಕ್ಕೆ, ಅಭಿಮಾನಿಗಳಿಗೆ ಬಿಗ್ ‌ಸರ್ಪ್ರೈಸ್ ಕೊಡ್ತಿದ್ದಾರೆ. ಅಭಿಮಾನಿಗಳನ್ನ ಭೇಟಿಯಾಗುವ ಬಗ್ಗೆ ಸಿಹಿಸುದ್ದಿ ನೀಡಿದ್ದಾರೆ. ಇದನ್ನೂ ಓದಿ:ಕೋಟಿ ಕೋಟಿ ಕೊಟ್ಟು ಮೂರು ಕಚೇರಿ ಖರೀದಿಸಿದ ಕಾಜೋಲ್- ಅಜಯ್ ದೇವಗನ್ ದಂಪತಿ

ಕನ್ನಡದ ‘ಕಾಂತಾರ’ ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ರಿಷಬ್ ಶೆಟ್ಟಿ ಮಿಂಚ್ತಿದ್ದಾರೆ. ತುಳುನಾಡಿನ ದೈವದ ಮಹಿಮೆಯುಳ್ಳ ಈ ಕಥೆಗೆ ಇಡೀ ದೇಶವೇ ತಲೆಬಾಗಿದೆ. ಪಾರ್ಟ್ ಒನ್ ಸಕ್ಸಸ್ ಆಗಿರುವ ಬೆನ್ನಲ್ಲೇ ‘ಕಾಂತಾರ 2’ ಮಾಡಲು ಸಕಲ ತಯಾರಿ ಕೂಡ ನಡೆಯುತ್ತಿದೆ. ಆಗಸ್ಟ್‌ನಲ್ಲಿ ಭರ್ಜರಿಯಾಗಿ ಶೂಟಿಂಗ್ ಶುರುವಾಗಲಿದೆ.

ತಮ್ಮ ಜನ್ಮದಿನದ ಸಂದರ್ಭದಲ್ಲಿ ಅವರು ಇಂಥದ್ದೊಂದು ಭೇಟಿಗೆ ವೇದಿಕೆ ಸಿದ್ಧಪಡಿಸಿಕೊಂಡಿದ್ದು, ಆ ಮೂಲಕ ಅಭಿಮಾನಿಗಳ ಜೊತೆ ಅದ್ಧೂರಿಯಾಗಿ ಜನ್ಮದಿನ ಆಚರಿಸಿಕೊಳ್ಳಲು ಮುಂದಾಗಿದ್ದಾರೆ. ಈ ಕುರಿತು ರಿಷಬ್ ಶೆಟ್ಟಿಯವರೇ ವಿಡಿಯೋ ವಿಶೇಷ ಸಂದೇಶ ಮೂಲಕ ಆಹ್ವಾನ ನೀಡಿದ್ದಾರೆ.

ಕೆರಾಡಿ (Keradi) ಎಂಬ ಸಣ್ಣ ಹಳ್ಳಿಯಿಂದ ಸಿನಿಮಾ ಕನಸು ಕಟ್ಟಿಕೊಂಡು ಬಂದ ನನಗೆ ಇಷ್ಟೊಂದು ಪ್ರೀತಿ ತೋರಿಸಿದ್ದೀರಿ, ಇಲ್ಲಿಯವರೆಗೆ ಕರೆತಂದಿದ್ದೀರಿ. ನೀವು ಇಷ್ಟೆಲ್ಲ ಪ್ರೀತಿ ತೋರಿದಾಗ ಅದನ್ನು ಹೇಗೆ ಹ್ಯಾಂಡಲ್ ಮಾಡಬೇಕು ಎಂದು ಗೊತ್ತಾಗಿಲ್ಲ. ಅದರಲ್ಲೂ ‘ಕಾಂತಾರ’ ಚಿತ್ರ ಬಿಡುಗಡೆ ಆದಾಗ ತುಂಬಾ ಜನ ಮನೆ ಹತ್ತಿರ ಬಂದಿದ್ದೀರಿ, ಹೋದಹೋದಲ್ಲಿ ನನ್ನ ಭೇಟಿಗೆ ಕಾದಿದ್ದೀರಿ, ಎಷ್ಟೋ ಜನರನ್ನು ನಾನು ಭೇಟಿ ಆಗಲು ಆಗಿರಲಿಲ್ಲ. ಅದಕ್ಕೆ ನನ್ನ ಹುಟ್ಟಿದ ದಿನ ಇದೇ ಜುಲೈ 7ರ ಮಧ್ಯಾಹ್ನ 3ಕ್ಕೆ ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್‌ನಲ್ಲಿ (Nandhi Link Grounds) ನಿಮ್ಮನ್ನು ಭೇಟಿಯಾಗಲು ನಾನು ಕಾಯುತ್ತಿರುತ್ತೇನೆ ಎನ್ನುವ ಮೂಲಕ ರಿಷಬ್ ಶೆಟ್ಟಿ ತಮ್ಮ ಅದ್ಧೂರಿ ಜನ್ಮದಿನಾಚರಣೆಗೆ ಅಭಿಮಾನಿಗಳೆಲ್ಲರಿಗೆ ಮುಕ್ತ ಆಹ್ವಾನ ನೀಡಿದ್ದಾರೆ.

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್