‘ಕಾಂತಾರ 1’ ಸಿನಿಮಾ ಶೂಟಿಂಗ್ ನಡುವೆ ರಿಷಬ್ ಶೆಟ್ಟಿ ಟೆಂಪಲ್ ರನ್

Public TV
1 Min Read

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ (Rishab Shetty) ಇದೀಗ ಕಾಂತಾರ ಪಾರ್ಟ್ 1 (Kantara 1) ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹರಿಹರಪುರ ಕ್ಷೇತ್ರಕ್ಕೆ ಕುಟುಂಬದ ಜೊತೆ ರಿಷಬ್ ಶೆಟ್ಟಿ ಭೇಟಿ ನೀಡಿದ್ದಾರೆ. ಇದನ್ನೂ ಓದಿ:ಶ್ರೀವಲ್ಲಿ ಫ್ಯಾನ್ಸ್‌ಗೆ ಸಿಹಿಸುದ್ದಿ- ‘ಪುಷ್ಪ 2’ ಅಪ್‌ಡೇಟ್ ಹಂಚಿಕೊಂಡ ರಶ್ಮಿಕಾ ಮಂದಣ್ಣ

‘ಕಾಂತಾರ’ ಪಾರ್ಟ್ 1 (Kantara Part 1) ಸಿನಿಮಾದ ಶೂಟಿಂಗ್ ಈಗಾಗಲೇ ಶುರುವಾಗಿದೆ. ಕೆಲಸಕ್ಕೆ ಕೊಂಚ ಬ್ರೇಕ್ ಕೊಟ್ಟು ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ರಿಷಬ್ ಭೇಟಿ ನೀಡಿದ್ದಾರೆ. ತುಂಗಾ ನದಿ ತಟದಲ್ಲಿರುವ ಇತಿಹಾಸ ಪ್ರಸಿದ್ಧ ದೇಗುಲವಾಗಿರುವ ಹರಿಹರಪುರದ ಶಾರದ ಲಕ್ಷ್ಮಿ ನರಸಿಂಹಸ್ವಾಮಿಯ ದರ್ಶನ ಪಡೆದಿದ್ದಾರೆ. ಬಳಿಕ ಶ್ರೀ ಸ್ವಯಂ ಸಚ್ಚಿದಾನಂದ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಈ ವೇಳೆ, ರಿಷಬ್ ಶೆಟ್ಟಿರನ್ನು ನೋಡುತ್ತಿದ್ದಂತೆ ಅವರ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಫ್ಯಾನ್ಸ್ ಮುಗಿಬಿದ್ದಿದ್ದಾರೆ.

ಇತ್ತೀಚೆಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ರಿಷಬ್, ಜನ ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡಿದ್ರೆ ಒಳ್ಳೆಯದು. ಕಾಂತಾರ ಚಿತ್ರದ ಕುರಿತು ಅಧಿಕೃತವಾಗಿ ಹೊಂಬಾಳೆ ಸಂಸ್ಥೆ ಎಲ್ಲವನ್ನೂ ಘೋಷಣೆ ಮಾಡುತ್ತದೆ. ಈಗಾಗಲೇ ‘ಕಾಂತಾರ’ ಪ್ರೀಕ್ವೆಲ್ ಚಿತ್ರೀಕರಣ ಆರಂಭವಾಗಿದೆ. ಸಿನಿಮಾದ ಕೆಲಸ ಬಹಳ ಚೆನ್ನಾಗಿ ನಡೆಯುತ್ತಿದೆ ಎಂದು ರಿಷಬ್ ಮಾಹಿತಿ ಹಂಚಿಕೊಂಡಿದ್ದರು.

‘ಕಾಂತಾರ’ (Kantara) ಸಕ್ಸಸ್ ನಂತರ ಮೊದಲಿಗಿಂತ ಜವಾಬ್ದಾರಿ ಹೆಚ್ಚಾಗಿದೆ. ನಮ್ಮ ಸಿನಿಮಾಗಾಗಿ ದೊಡ್ಡ ತಂಡ ಕೆಲಸ ಮಾಡುತ್ತಿದೆ ಎಂದಿದ್ದಾರೆ. ಹೊಂಬಾಳೆ ಸಂಸ್ಥೆ (Hombale Films) ಸಿಕ್ಕಿರುವುದು ಫಿಲ್ಮ್ ಮೇಕರ್‌ಗೆ ಒಂದು ಪುಣ್ಯ ಎಂದು ರಿಷಬ್ ಖುಷಿಯಿಂದ ಮಾತನಾಡಿದ್ದಾರೆ. ‘ಕಾಂತಾರ’ಗಾಗಿ ಅದ್ಭುತವಾದ ಟೆಕ್ನಿಷಿಯನ್ಸ್‌ಗಳು ಕೆಲಸ ಮಾಡುತ್ತಿದ್ದಾರೆ. ನಿರಂತರವಾಗಿ ಪಾರ್ಟ್ ಬೈ ಪಾರ್ಟ್ ಚಿತ್ರೀಕರಣ ನಡೆಯುತ್ತದೆ ಎಂದು ರಿಷಬ್ ತಿಳಿಸಿದ್ದರು.

ಜನ ‘ಕಾಂತಾರ’ ಚಿತ್ರವನ್ನು ಗೆಲ್ಲಿಸಿದ್ದಾರೆ ಬಾಯಲ್ಲಿ ಏನು ಹೇಳಲ್ಲ. ಕೆಲಸದ ಮೂಲಕ ಮಾಡಿ ತೋರಿಸಬೇಕು ಎಂದು ಅಂದುಕೊಂಡಿದ್ದೇನೆ. ನನಗೆ ಯಾವ ಒತ್ತಡವು ಇಲ್ಲ. ಆಗ ನನಗೆ ಬಹಳ ದೊಡ್ಡ ಚಿತ್ರವಾಗಿತ್ತು. ಸಿನಿಮಾ ಯಾವಾಗಲೂ ಕಲಿಯುವ ಪ್ರೊಸೆಸ್ ಅದನ್ನು ಮಾಡುತ್ತಿದ್ದೇನೆ ಎಂದಿದ್ದರು ರಿಷಬ್.

Share This Article