ಪುಷ್ಪಾ ಸಿನಿಮಾದಲ್ಲಿ ಅಲ್ಲು ಜೊತೆ ಡ್ಯಾನ್ಸ್ ಮಾಡಲಿದ್ದಾರಾ ಸಮಂತಾ?

Public TV
2 Min Read

ಹೈದರಾಬಾದ್: ಟಾಲಿವುಡ್ ನಟ ಸ್ಟೈಲಿಶ್ ಸ್ಟಾರ್ ಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ಬಹುನಿರೀಕ್ಷಿತ ಪುಷ್ಪ ಸಿನಿಮಾ ವಿಶೇಷ ಸಾಂಗ್‍ವೊಂದರಲ್ಲಿ ನಟಿ ಸಮಂತಾ ಹೆಜ್ಜೆ ಹಾಕಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಶೂಟಿಂಗ್‍ನಿಂದ ಕೊಂಚ ಬ್ರೇಕ್ ತೆಗೆದುಕೊಂಡಿದ್ದ ನಟಿ ಸಮಂತಾ ಇದೀಗ ಬ್ಯಾಕ್ ಟು ಬ್ಯಾಕ್ ಚಿತ್ರಗಳಿಗೆ ಸಹಿ ಹಾಕುತ್ತಿದ್ದಾರೆ. ಸದ್ಯ ಅಲ್ಲು ಅರ್ಜುನ್ ಅವರ ಮುಂಬರುವ ಬಿಗ್-ಬಜೆಟ್ ಚಿತ್ರ ಪುಷ್ಪಾದಲ್ಲಿ ವಿಶೇಷ ಸಾಂಗ್‍ವೊಂದರಲ್ಲಿ ನೃತ್ಯ ಮಾಡಲು ಒಪ್ಪಿಕೊಂಡಿದ್ದು, ನವೆಂಬರ್ ಅಂತ್ಯದಲ್ಲಿ ಈ ಹಾಡಿನ ಚಿತ್ರೀಕರಣವನ್ನು ಚಿತ್ರತಂಡ ಆರಂಭಿಸಲಿದೆ ಮತ್ತು ಹೈದರಾಬಾದ್‍ನ ರಾಮೋಜಿ ಫಿಲಂ ಸಿಟಿಯಲ್ಲಿ ಅದ್ಧೂರಿ ಸೆಟ್ ಹಾಕಲು ಪ್ಲಾನ್ ಮಾಡಲಾಗಿದೆ ಎಂಬ ಸುದ್ದಿಯೊಂದು ಇದೀಗ ಭಾರೀ ಸದ್ದು ಮಾಡುತ್ತಿದೆ.

ನಟ ನಾಗ ಚೈತನ್ಯ ಜೊತೆಗೆ ವಿಚ್ಛೇದನ ಪಡೆದ ನಂತರ ಸಮಂತಾ ಬದರಿನಾಥ್, ಕೇದಾರನಾಥ್, ಗೋವಾ ಮತ್ತು ಚೆನ್ನೈ ಪ್ರವಾಸ ಕೈಗೊಂಡಿದ್ದರು. ಆದರೆ ಇದೀಗ ತಮಿಳು ಮತ್ತು ತೆಲುಗು ಸಿನಿಮಾಗಳಲ್ಲಿ ಮತ್ತೆ ಬಣ್ಣ ಹಚ್ಚಲು ರೆಡಿಯಾಗಿದ್ದಾರೆ. ದನ್ನೂ ಓದಿ: ಮಗಳ ಹುಟ್ಟುಹಬ್ಬವನ್ನು ವಿಲ್ಲಾದಲ್ಲಿ ಆಚರಿಸುತ್ತಿರೋ ಅಭಿ, ಐಶ್ – ದಿನಕ್ಕೆ ಇದರ ಬೆಲೆ ಎಷ್ಟು ಗೊತ್ತಾ?

ಕೆಲವು ದಿನಗಳ ಹಿಂದೆ ಪುಷ್ಪಾ ಸಿನಿಮಾದ ನಿರ್ಮಾಪಕರು ವಿಶೇಷ ಸಾಂಗ್‍ವೊಂದರಲ್ಲಿ ಅಭಿನಯಿಸಲು ಸಮಂತಾ ಅವರೊಂದಿಗೆ ಮಾತುಕತೆ ನಡೆಸಿದ್ದು, ಸಮಂತಾ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಸಮಂತಾ ಆಗಲಿ, ಪುಷ್ಪಾ ಸಿನಿಮಾದ ನಿರ್ದೇಶಕ ಸುಕುಮಾರನ್ ಆಗಲಿ ಎಲ್ಲೂ ಅಧಿಕೃತವಾಗಿ ಹೇಳಿಕೆ ನೀಡಿಲ್ಲ. ಇದನ್ನೂ ಓದಿ: ದಲಿತರು ಕೋಳಿ ಕೊಟ್ಟರೆ ತಿನ್ನುತ್ತಾರಾ? : ಕ್ಷಮೆ ಕೇಳಿದ ಹಂಸಲೇಖ

ಪುಷ್ಪಾ ಚಿತ್ರದಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಮತ್ತು ಫಹದ್ ಫಾಸಿಲ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದು, ಈ ಚಿತ್ರಕ್ಕೆ ನಿರ್ದೇಶಕ ಸುಕುಮಾರನ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಚಿತ್ರದಲ್ಲಿ ಜಗಪತಿ ಬಾಬು, ಪ್ರಕಾಶ್ ರಾಜ್, ಧನಂಜಯ್, ಸುನೀಲ್, ಅನಸೂಯಾ ಭಾರದ್ವಾಜ್ ಮತ್ತು ಹರೀಶ್ ಉತ್ತಮನ್ ಸೇರಿದಂತೆ ದೊಡ್ಡ ತಾರಾಬಳಗವೇ ಇದ್ದು, ಆಕ್ಷನ್ ಥ್ರಿಲ್ಲರ್ ಚಿತ್ರಕ್ಕೆ ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜಿಸಿದ್ದಾರೆ. ಇದೇ ಡಿಸೆಂಬರ್ 17 ರಂದು ಪುಷ್ಪಾ ಸಿನಿಮಾ ಬಹು ಭಾಷೆಗಳಲ್ಲಿ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.

Share This Article
Leave a Comment

Leave a Reply

Your email address will not be published. Required fields are marked *