ಕಾರು ಅಪಘಾತದಲ್ಲಿ ಗಾಯಗೊಂಡ ನಟ ಶರ್ವಾನಂದ್: ನಟನ ಮದುವೆಗೆ 3 ದಿನವಷ್ಟೇ ಬಾಕಿ

Public TV
1 Min Read

ದೇ ಜೂನ್ 2 ರಂದು ತೆಲುಗಿನ ಖ್ಯಾತ ನಟ ಶರ್ವಾನಂದ್ ಮದುವೆ. ಅವರ ಇಡೀ ಕುಟುಂಬ ಸಡಗರ ಸಂಭ್ರಮದಲ್ಲಿದ್ದರೆ ಅತ್ತ ಶರ್ವಾನಂದ್ ಕಾರು (Car) ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ಐಷಾರಾಮಿ ಕಾರು ಹೈದರಾಬಾದ್ ನ ಜೂಬ್ಲಿ ಹಿಲ್ಸ್ ಬಳಿ ಅಪಘಾತಕ್ಕೀಡಾಗಿದೆ (Accident). ಶರ್ವಾನಂದ್ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಶರ್ವಾನಂದ್ ಅವರ ಡ್ರೈವರ್ ಆ ಕಾರು ಓಡಿಸುತ್ತಿದ್ದರು ಎಂದು ಹೇಳಲಾಗುತ್ತಿದ್ದು, ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರು ಪಲ್ಟಿಯಾಗಿದೆ. ಅದು ಐಷಾರಾಮಿ ಕಾರು ಆಗಿದ್ದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಕೂಡಲೇ ಶರ್ವಾನಂದ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆತಂಕ ಪಡುವಂಥದ್ದು ಏನೂ ಆಗಿಲ್ಲವೆಂದು ತಿಳಿಸಿದ್ದಾರೆ.

ಶರ್ವಾನಂದ್ (Sharwanand) ತಮ್ಮ ಬಹುಕಾಲದ ಗೆಳತಿ ರಕ್ಷಿತಾ ರೆಡ್ಡಿ ಜೊತೆ ಕೆಲ ತಿಂಗಳ ಹಿಂದೆಯಷ್ಟೇ ಎಂಗೇಜ್‌ಮೆಂಟ್ (Engagement) ಮಾಡಿಕೊಂಡಿದ್ದರು. ಇದೀಗ ಜೂನ್ 2 ಮತ್ತು 3 ರಂದು ರಾಜಸ್ಥಾನದ ಜೈಪುರದಲ್ಲಿರುವ ಲೀಲಾ ಪ್ಯಾಲೇಸ್ ನಲ್ಲಿ ಮದುವೆ ಆಗುತ್ತಿದ್ದಾರೆ. ಈಗವರು ಮದುವೆ ಸಿದ್ಧತೆಯಲ್ಲಿದ್ದರು. ಇದನ್ನೂ ಓದಿ:ಹುಟ್ಟುಹಬ್ಬದ ಸಂಭ್ರಮದಲ್ಲಿ ‘ಹೊಯ್ಸಳ’ ಬಲಿ- ಫ್ಯಾನ್ಸ್‌ಗೆ ಸಿಕ್ತು ಸಿಹಿಸುದ್ದಿ

ಶರ್ವಾನಂದ್ ಕೈ ಹಿಡಿಯುತ್ತಿರುವ ಹುಡುಗಿಯ ಹೆಸರು ರಕ್ಷಿತಾ ರೆಡ್ಡಿ (Raskshitha Reddy). ಸಾಫ್ಟ್ ವೇರ್ ಇಂಜಿನಿಯರ್ ಆಗಿ ಆಕೆ ಕೆಲಸ ಮಾಡುತ್ತಿದ್ದಾರೆ. ತಂದೆ ಮಧುಸೂದನ ರೆಡ್ಡಿ ತೆಲಂಗಾಣ ಹೈಕೋರ್ಟ್‌ನಲ್ಲಿ ವಕೀಲರಾಗಿದ್ದಾರೆ. ಇವರ ಮದುವೆಗೆ ರಾಮ್ ಚರಣ್ (Ramcharan) ದಂಪತಿ, ಸಿದ್ಧಾರ್ಥ್- ಅದಿತಿ ಜೋಡಿ, ನಟ ಚಿರಂಜೀವಿ, ನಾನಿ, ನಟ ನಾಗಾರ್ಜುನ ದಂಪತಿ ಸೇರಿದಂತೆ ಹಲವರು ಆಗಮಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

Share This Article