ಚಾಮುಂಡಿ ತಾಯಿಗೆ ಶಿವಣ್ಣ ದಂಪತಿ ಪೂಜೆ

Public TV
1 Min Read

ಮೈಸೂರು: ಆಷಾಢ ಮಾಸದ ಹಿನ್ನೆಲೆಯಲ್ಲಿ ನಟ ಶಿವರಾಜ್‌ಕುಮಾರ್ (Shiva Rajkumar) ತಮ್ಮ ಪತ್ನಿ ಜೊತೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ತಾಯಿ ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿದರು.

ಮಂಗಳವಾರ ರಾತ್ರಿ ಬೆಟ್ಟಕ್ಕೆ ಆಗಮಿಸಿದ ಶಿವಣ್ಣ ದಂಪತಿ ತಾಯಿ ಚಾಮುಂಡಿಗೆ ಪೂಜೆ ಸಲ್ಲಿಸಿದರು. ಈ ವೇಳೆ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದರು. ಇದನ್ನೂ ಓದಿ: ಉದಯಪುರದಲ್ಲಿ ಭರ್ಜರಿ ಡೆವಿಲ್ ಮೇಕಿಂಗ್!

ಕಳೆದ ಕೆಲ ದಿನಗಳಿಂದ ಶಿವರಾಜ್‌ಕುಮಾರ್‌ ಮೈಸೂರು ಭಾಗದ ಸುತ್ತಮುತ್ತ ಪ್ರವಾಸ ಕೈಗೊಂಡಿದ್ದಾರೆ. ಮೊನ್ನೆಯಷ್ಟೇ ಪತ್ನಿ ಜೊತೆಗೂಡಿ ಶಿವಣ್ಣ ಕಬಿನಿ ಡ್ಯಾಂಗೆ ಭೇಟಿ ನೀಡಿದ್ದರು. ಈ ವೇಳೆ ಹಾಡಿ ಮಕ್ಕಳ ಜೊತೆ ಫೋಟೊ ಕೂಡ ತೆಗೆಸಿಕೊಂಡಿದ್ದರು.

1986ರಲ್ಲಿ ‘ಆನಂದ್‌’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಶಿವಣ್ಣ ಎಂಟ್ರಿ ಕೊಟ್ಟರು. ಸಿನಿ ಜರ್ನಿಯಲ್ಲಿ 40 ವರ್ಷ ಪೂರೈಸಿದ್ದಾರೆ. ಕನ್ನಡದ ಜನಮಾನಸದಲ್ಲಿ ಹ್ಯಾಟ್ರಿಕ್‌ ಹೀರೋ, ಸೆಂಚುರಿ ಸ್ಟಾರ್‌ ಆಗಿ ಉಳಿದಿದ್ದಾರೆ. ಇದನ್ನೂ ಓದಿ: ಇಂಡಸ್ಟ್ರಿಯಲ್ಲಿ ನನಗೆ ಯಾರೂ ಫ್ರೆಂಡ್ಸ್ ಇಲ್ಲ… ಹೀಗ್ಯಾಕಂದ್ರು ನಯನತಾರ..?

ಶಿವರಾಜ್‌ಕುಮಾರ್‌ ಸದ್ಯ 125 ಸಿನಿಮಾಗಳನ್ನು ಪೂರೈಸಿದ್ದಾರೆ. ಸದ್ಯ ಅವರ ಕೈಯಲ್ಲಿ ಐದಕ್ಕೂ ಹೆಚ್ಚು ಪ್ರಾಜೆಕ್ಟ್‌ಗಳಿವೆ. ಕೆಲ ದಿನಗಳ ಹಿಂದಷ್ಟೇ ಸಿನಿಪಯಣದಲ್ಲಿ 40 ವರ್ಷದ ಪೂರೈಸಿದ ಸಂಭ್ರಮವನ್ನು ಶಿವಣ್ಣ ಮಿಂದೆದ್ದರು.

Share This Article