ಷಷ್ಠಿಪೂರ್ತಿ ಆಚರಿಸಿಕೊಂಡ ಶಿವರಾಜ್‌ಕುಮಾರ್ ದಂಪತಿ

Public TV
1 Min Read

ಸ್ಯಾಂಡಲ್‌ವುಡ್ ನಟ ಶಿವರಾಜ್‌ಕುಮಾರ್ (Shivarajkumar) ಮತ್ತು ಗೀತಾ (Geetha) ದಂಪತಿ ತಮಿಳುನಾಡಿನ ಪ್ರಸಿದ್ಧ ದೇವಾಲಯದಲ್ಲಿ ಷಷ್ಠಿಪೂರ್ತಿ ಆಚರಿಸಿಕೊಂಡಿದ್ದಾರೆ. ಬಾಲ್ಯದ ಗೆಳೆಯರೊಡನೆ ಈ ಕಾರ್ಯಕ್ರಮ ಸಂಭ್ರಮದಿಂದ ಜರುಗಿದೆ.

ಒಂದು ಸಾವಿರ ವರ್ಷಗಳ ಇತಿಹಾಸವಿರುವ ಅಭಿರಾಮಿ ಅಮೃತ ಕದೇಶ್ವರರ್ ದೇವಸ್ಥಾನದಲ್ಲಿ ಮಕ್ಕಳಾದ ನಿವೇದಿತಾ ಮತ್ತು ನಿರುಪಮಾ ಜೊತೆ ನಟ ಶಿವಣ್ಣ ದಂಪತಿ ಷಷ್ಠಿಪೂರ್ತಿ ಕಾರ್ಯಕ್ರಮ ಆಚರಿಸಿಕೊಂಡಿದ್ದಾರೆ. ಶಿವಣ್ಣ 60 ವರ್ಷ ಪೂರ್ಣಗೊಳಿಸಿದ ಹಿನ್ನೆಲೆ ಈ ಕಾರ್ಯಕ್ರಮ ನಡೆದಿದೆ. ಇದನ್ನೂ ಓದಿ:ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಪವನ್ ಕಲ್ಯಾಣ್

ಷಷ್ಠಿಪೂರ್ತಿ ಕಾರ್ಯಕ್ರಮದಲ್ಲಿ ಮದುವೆ ಮುಹೂರ್ತದಲ್ಲಿ ಮಾಡಲಾಗುವ ಎಲ್ಲಾ ಶಾಸ್ತ್ರಗಳನ್ನು ಮಾಡಿದ್ದಾರೆ. ಪತ್ನಿ ಗೀತಾಗೆ ಮತ್ತೊಮ್ಮೆ ಶಿವಣ್ಣ ಮಾಂಗಲ್ಯ ಧಾರಣೆ ಮಾಡಿದ್ದಾರೆ. ಇದನ್ನೂ ಓದಿ:ಫ್ಯಾನ್ಸ್‌ಗೆ ಗುಡ್‌ ನ್ಯೂಸ್-‌ ಶೋಭಿತಾ ಜೊತೆ ಸಮಂತಾ ಮಾಜಿ ಪತಿ ನಿಶ್ಚಿತಾರ್ಥ

ಅಂದಹಾಗೆ, ಮಾಜಿ ಸಿಎಂ ಬಂಗಾರಪ್ಪ ಅವರ ಪುತ್ರಿ ಗೀತಾರನ್ನು 1986ರಲ್ಲಿ ಶಿವಣ್ಣ ಮದುವೆಯಾದರು.

Share This Article