ಪದ್ಮಾವತಿ ಪರ ಬ್ಯಾಟ್ ಬೀಸಿದ ಹ್ಯಾಟ್ರಿಕ್ ಹೀರೋ ಶಿವಣ್ಣ

Public TV
1 Min Read

ಬೆಂಗಳೂರು: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರ ನಟನೆ ಅದ್ಭುತ ಅನ್ನಿಸುತ್ತದೆ. ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಒಳ್ಳೆ ಸಿನಿಮಾ ಮಾಡಿರುತ್ತಾರೆ ಎನ್ನುವ ನಂಬಿಕೆ ಇದೆ. ಸಿನಿಮಾ ರಿಲೀಸ್ ಗೂ ಮುನ್ನ ಚಿತ್ರದ ಬಗ್ಗೆ ನಿರ್ಧಾರ ಮಾಡುವುದು ಸರಿಯಲ್ಲ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಪದ್ಮಾವತಿ ಪರವಾಗಿ ಬ್ಯಾಟ್ ಬೀಸಿದ್ದಾರೆ.

ಮಫ್ತಿ ಸಿನಿಮಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವಣ್ಣ, ಚಿತ್ರ ಕಲಾವಿದರನ್ನು ಯಾವತ್ತು ಟಾರ್ಗೆಟ್ ಮಾಡಬಾರದು. ಈ ರೀತಿ ಮಾಡೋದು ಅಭಿವ್ಯಕ್ತಿ ಸ್ವಾತಂತ್ರ್ಯಕೆ ಧಕ್ಕೆ ತಂದಂತೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮಫ್ತಿ ಸಿನಿಮಾದಲ್ಲಿ ಶಿವರಾಜ್‍ಕುಮಾರ್ ಮತ್ತು ಶ್ರೀ ಮುರುಳಿ ಮೊದಲ ಬಾರಿಗೆ ತೆರೆಯ ಮೇಲೆ ಒಂದಾಗಿದ್ದು, ಸಾಕಷ್ಟು ಕುತೂಹಲಗಳಿಗೆ ಕಾರಣವಾಗಿದೆ. ಈಗಾಗಲೇ ಟ್ರೇಲರ್ ಮೂಲಕ ಚಂದನವನದಲ್ಲಿ ಸಖತ್ ಸೌಂಡ್ ಮಾಡಿದ್ದು, ಇಬ್ಬರೂ ನಟರೂ ರಗಡ್ ಲುಕ್ ನಲ್ಲಿ ಕಾಣಿಸಿಕೊಳ್ಳವ ಮೂಲಕ ಪ್ರೇಕ್ಷಕರಿಗೆ ಭರಪೂರ ಮನರಂಜನೆ ನೀಡಲಿದ್ದಾರೆ.

ನವ ನಿರ್ದೇಶಕ ನರ್ತನ್ ಪರಿಕಲ್ಪನೆಯಲ್ಲಿ ಟ್ರೇಲರ್ ಅದ್ಧೂರಿಯಾಗಿ ಮೂಡಿಬಂದಿದೆ. ಶಿವಣ್ಣನವರ ಲುಕ್, ರವಿ ಬಸ್ರೂರ್ ರವರ ಹಿನ್ನೆಲೆ ಸಂಗೀತ ಚಿತ್ರದ ಪ್ರಮುಖ ಆಕರ್ಷಣೆಯಾಗಿದೆ. ರಥಾವರ ಚಿತ್ರದ ನಂತರ ಶ್ರೀಮುರುಳಿ ನಟಿಸುತ್ತಿರುವ ಚಿತ್ರ ಇದಾಗಿದ್ದು, ಶ್ರೀ ಮುರುಳಿಗೆ ಜೋಡಿಯಾಗಿ ಶಾನ್ವಿ ಶ್ರೀವಾಸ್ತವ ಕಾಣಿಸಿಕೊಂಡಿದ್ದಾರೆ. ಸಿನಿಮಾ ಡಿಸೆಂಬರ್ 01ರಂದು ರಾಜ್ಯಾದ್ಯಂತ ತೆರೆಕಾಣಲಿದೆ.

 

 

Share This Article
Leave a Comment

Leave a Reply

Your email address will not be published. Required fields are marked *