ಮುಂಬೈ ಹೋಟೆಲ್‌ವೊಂದರಲ್ಲಿ ಕ್ಯಾಮೆರಾ ಕಣ್ಣಿಗೆ ಸಿಕ್ಕಿಬಿದ್ದ ಸಿದ್ಧಾರ್ಥ್ -ಅದಿತಿ

Public TV
1 Min Read

ಸೌತ್ ಮತ್ತು ಬಾಲಿವುಡ್‌ನಲ್ಲಿ ಸಿದ್ಧಾರ್ಥ್ (Siddarth) ಮತ್ತು ಅದಿತಿ (Aditi Rao) ಲವ್ ಟ್ರ್ಯಾಕ್ ಸಿಕ್ಕಾಪಟ್ಟೆ ಸದ್ದು ಮಾಡ್ತಿದೆ. ಇತ್ತೀಚೆಗೆ ಇವರಿಬ್ಬರ ಡೇಟಿಂಗ್ ವಿಚಾರ ಹೊರಬೀಳುತ್ತಿದ್ದಂತೆ ಮುಂಬೈ ಹೋಟೆಲ್‌ವೊಂದರಲ್ಲಿ ಕ್ಯಾಮೆರಾ ಕಣ್ಣಿಗೆ ಈ ಜೋಡಿ ಕಾಣಿಸಿಕೊಂಡಿದ್ದಾರೆ. ಬಾಲಿವುಡ್ ಬ್ಯೂಟಿಗೆ ಸೌತ್ ನಟ ಫಿದಾ ಆಗಿದ್ದಾರೆ.

ತೆಲುಗಿನ (Telagi Films) ಸಿನಿಮಾವೊಂದರಲ್ಲಿ ಜೊತೆಯಾಗಿದ್ದ ಈ ಜೋಡಿಯ ನಡುವೆ ಅಲ್ಲಿಂದ ಲವ್ವಿ ಡವ್ವಿ ಶುರುವಾಗಿತ್ತು. ಈಗ ಮುಂಬೈನಲ್ಲಿ ನಾಲ್ಕೈದು ತಿಂಗಳುಗಳಿಂದ ಈ ಜೋಡಿ ಒಟ್ಟಿಗೆ ವಾಸಿಸುತ್ತಿದ್ದಾರೆ. ಮುಂಬೈ ಹೋಟೆಲ್‌ನಿಂದ ಹೊರಬರುವಾಗ ಕ್ಯಾಮೆರಾಗೆ ಸಿಕ್ಕಿಬಿದ್ದಿದ್ದಾರೆ. ಫೋಟೋ ತೆಗೆಯಲು ಹೋದವರ ವಿರುದ್ಧ ಸಿದ್ಧಾರ್ಥ್ ಈ ವೇಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸ್ಕಿನ್‌ ಲಿಫ್ಟ್‌ ಥೆರಪಿ ಮೊರೆ ಹೋದ ಶಿವರಾಜ್‌ಕುಮಾರ್‌ ನಾಯಕಿ ಮೆಹ್ರೀನ್‌ ಫಿರ್ಜಾದ

ಪರಸ್ಪರ ಪ್ರೀತಿಸುತ್ತಿರುವ ವಿಚಾರ ಸುದ್ದಿಯಾಗುತ್ತಿದ್ದರು ಕೂಡ ಈ ಜೋಡಿ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಸಾಕಷ್ಟು ಕಡೆ ಒಟ್ಟಾಗಿಯೇ ಕಾಣಿಸಿಕೊಳ್ಳುತ್ತಿರುವ ಸಿದ್ಧಾರ್ಥ್, ಅದಿತಿ ಮದುವೆಯ ಬಗ್ಗೆ ಮುಂದಿನ ದಿನಗಳಲ್ಲಿ ಗುಡ್ ನ್ಯೂಸ್ ಕೊಡುತ್ತಾರಾ ಎಂಬುದನ್ನ ಕಾದುನೋಡಬೇಕಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *