ಕರ್ನಾಟಕದಲ್ಲೇ ‘ಪೈಲ್ವಾನ್’ 10 ಕೋಟಿ ಗಳಿಕೆ

Public TV
1 Min Read

ಸ್ಯಾಂಡಲ್‍ವುಡ್‍ನ ಬಹುನಿರೀಕ್ಷಿತ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಸಿನಿಮಾ ಗುರುವಾರ ಭರ್ಜರಿಯಾಗಿ ದೇಶ ವಿದೇಶಗಳಲ್ಲಿ ರಿಲೀಸ್ ಆಗಿದ್ದು, ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ.

ಕರ್ನಾಟಕ, ಆಂಧ್ರ, ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಉತ್ತರ ಭಾರತದಲ್ಲಿ ಎಲ್ಲಾ ಕಡೆ ಅಬ್ಬರಿಸಿದೆ. ಇಲ್ಲಿವರೆಗೆ ಪೈಲ್ವಾನ್ ಕರ್ನಾಟಕದಲ್ಲೇ 10 ಕೋಟಿ ರೂ. ಗಳಿಸಿದೆ. ಇನ್ನೂ ದಕ್ಷಿಣ ಮತ್ತು ಉತ್ತರ ಭಾರತದಲ್ಲಿ 8 ರಿಂದ 12 ಕೋಟಿ ಗಳಿಕೆಯಾಗಿದೆ. ಒಟ್ಟು ಪೈಲ್ವಾನ್ ಸಿನಿಮಾ 18 ರಿಂದ 22 ಕೋಟಿ ಗಳಿಕೆ ಕಂಡಿದೆ.

ಸುದೀಪ್ ಅವರ ಸಿನಿಮಾ ಇದೇ ಮೊದಲ ಬಾರಿಗೆ ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆ ಆಗಿದೆ. ಅಲ್ಲದೆ ಹೊರ ರಾಜ್ಯ ಮತ್ತು ವಿದೇಶಗಳಲ್ಲಿ ಪೈಲ್ವಾನ್ ತನ್ನ ತಾಕತ್ತನ್ನು ಪ್ರದರ್ಶಿಸುತ್ತಿದ್ದು, ಅಭಿಮಾನಿಗಳು ಚಿತ್ರವನ್ನು ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ. ಈ ಚಿತ್ರ ಕೃಷ್ಣ ನಿರ್ದೇಶನದಲ್ಲಿ ಮೂಡಿ ಬಂದಿದ್ದು, ಸಿನಿಮಾದಲ್ಲಿ ಸುದೀಪ್‍ಗೆ ಜೊತೆಯಾಗಿ ನಟಿ ಆಕ್ಷಾಂಕಾ ಸಿಂಗ್ ಅಭಿನಯಿಸಿದ್ದಾರೆ.

ಕರ್ನಾಟಕದಲ್ಲಿ ಪೈಲ್ವಾನ್ ಸಿನಿಮಾ 400 ಚಿತ್ರಮಂದಿರಗಳಲ್ಲಿ, ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ 450ಕ್ಕೂ ಹೆಚ್ಚು ಚಿತ್ರಮಂದಿರ, ತಮಿಳುನಾಡಿನಲ್ಲಿ 150ಕ್ಕೂ ಹೆಚ್ಚು ಚಿತ್ರಮಂದಿರ ಹಾಗೂ ವಿಶ್ವಾದ್ಯಂತ 3000 ಚಿತ್ರಮಂದಿರದಲ್ಲಿ ಸಿನಿಮಾ ಬಿಡುಗಡೆ ಆಗಿದೆ.

Share This Article
Leave a Comment

Leave a Reply

Your email address will not be published. Required fields are marked *