ಕಾವೇರಿ ನದಿಯಲ್ಲಿ ಅಸ್ಥಿ ವಿಸರ್ಜನೆ ಮಾಡಿದ ಪುತ್ರ ಶೌರ್ಯ

Public TV
1 Min Read

ವಿಜಯ ರಾಘವೇಂದ್ರ (Vijay Raghavendra) ಪತ್ನಿ ಸ್ಪಂದನಾ (Spandana) ನಿಧನದ ಹಿನ್ನೆಲೆ ಶ್ರೀರಂಗಪಟ್ಟಣದ ಕಾವೇರಿ ನದಿಯಲ್ಲಿ ಅಸ್ಥಿ ವಿಸರ್ಜನೆ ಮಾಡಲಾಯಿತು. ತಾಯಿಯ ಅಸ್ಥಿ ವಿಸರ್ಜನೆಯನ್ನು ಪುತ್ರ ಶೌರ್ಯ ಮಾಡಿದ್ದಾರೆ. ಇದನ್ನೂ ಓದಿ:ನಾಳೆಯಿಂದ ಡಾ.ವಿಷ್ಣು ಹೆಸರಿನಲ್ಲಿ ಕ್ರಿಕೆಟ್: ಚಿತ್ರೋದ್ಯಮ ಭಾಗಿ

ಇಂದು ಬೆಳಿಗ್ಗೆ (ಆಗಸ್ಟ್ 11) ವಿಜಯ ಕುಟುಂಬ ಶ್ರೀರಂಗಪಟ್ಟಣಕ್ಕೆ ಬಂದಿತ್ತು. ವಿಧಿ ವಿಧಾನಕ್ಕೂ ಮುನ್ನ ಪುತ್ರ ಶೌರ್ಯನಿಗೆ ಮುಡಿ ಕೊಡಿಸಿದರು. ಬಳಿಕ ವೈದಿಕ ರಮೇಶ್ ಶರ್ಮಾ ನೇತೃತ್ವದಲ್ಲಿ ಕಾರ್ಯ ಮಾಡಲಾಯಿತು. ಶೌರ್ಯ ಜೊತೆ ವಿಜಯ ಕೂಡ ಶ್ರದ್ಧಾ ಕಾರ್ಯ ನೆರವೇರಿಸಿದರು. ನಂತರ ಅಸ್ಥಿಗೆ ಪೂಜೆ, ಅಸ್ಥಿ ವಿಸರ್ಜನೆ ಮಾಡಲಾಯಿತು.

ಕೆಲ ದಿನಗಳ ಹಿಂದೆ ಸ್ಪಂದನಾ ಸ್ನೇಹಿತರ ಜೊತೆ ಬ್ಯಾಂಕಾಕ್‌ಗೆ ತೆರಳಿದ್ದರು. ಹೃದಯಾಘಾತದಿಂದ ಸ್ಪಂದನಾ ವಿಧಿವಶರಾಗಿದ್ದರು. ಆಗಸ್ಟ್ 9ರಂದು ಹರಿಶ್ಚಂದ್ರ ಘಾಟ್‌ನಲ್ಲಿ ಸ್ಪಂದನಾರ ಅಂತಿಮ ಸಂಸ್ಕಾರ ನಡೆಯಿತು. ಸ್ಪಂದನಾ ಹಠಾತ್ ನಿಧನ ವಿಜಯ ಮತ್ತು ಅವರ ಕುಟುಂಬಕ್ಕೆ ಶಾಕ್ ನೀಡಿದೆ.

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್