ಜೈಲಿನಿಂದ 6 ಖೈದಿಗಳ ಬಿಡುಗಡೆ ಮಾಡಿಸಿದ ನಟ ವಿಜಯ್

Public TV
1 Min Read

ಮೊನ್ನೆಯಷ್ಟೇ ಹುಟ್ಟೂರಲ್ಲಿ ಜೈಲು ಪಾಲಾಗಿರೋ ಅಮಾಯಕ ಜೀವಿಗಳ ಬಿಡುಗಡೆಗೆ ಪ್ರಯತ್ನ ಮಾಡ್ತಿವಿ ಎಂದಿದ್ದ ವಿಜಯ್, ಇಂದು ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿನ 6 ಜೈಲು ಹಕ್ಕಿಗಳನ್ನು ಬಿಡುಗಡೆ ಮಾಡಿಸಿದ್ದಾರೆ. ಕೋರ್ಟ್ ವಿಧಿಸಿದ ದಂಡ ಕಟ್ಟಲಾಗದೆ ಈ ಕೈದಿಗಳು ಜೈಲಿನಲ್ಲಿದ್ದರು.

ಹುಟ್ಟು ಹಬ್ಬಕ್ಕೆ ಸಿದ್ಧತೆ

ದುನಿಯಾ ವಿಜಯ್ ಜನವರಿ 20ರಂದು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅಭಿಮಾನಿಗಳ ಜೊತೆ ಇರುವುದಕ್ಕಾಗಿಯೇ ಅವರು ವಿಶೇಷ ವ್ಯವಸ್ಥೆಯನ್ನೂ ಮಾಡಿಕೊಂಡಿದ್ದಾರೆ. ಜೊತೆಗೆ ವಿಜಯ್ ಅವರೇ ನಿರ್ದೇಶಿಸಿ, ನಟಿಸುತ್ತಿರುವ ಭೀಮ ಚಿತ್ರದ ಟೀಸರ್ ಕೂಡ ಅಂದು ಬಿಡುಗಡೆ ಆಗಲಿದೆ.

ಈ ಹುಟ್ಟು ಹಬ್ಬದ ಸಂದರ್ಭದಲ್ಲಿ ದುನಿಯಾ ವಿಜಯ್ (Duniya Vijay) ಅವರು ತಮ್ಮ ಅಭಿಮಾನಿಗಳಿಗೆ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ. ಯಶ್ (Yash) ಫ್ಯಾನ್ಸ್ ದುರಂತ ಸಾವಿನ ಬಳಿಕ ವಿಜಯ್ ಅಭಿಮಾನಿಗಳಿಗೆ ಕೈ ಮುಗಿದು ಮನವಿ ಮಾಡಿಕೊಂಡಿದ್ದಾರೆ. ತಮ್ಮ ಹುಟ್ಟುಹಬ್ಬದ (Birthday) ಅಪ್‌ಡೇಟ್ ಹಂಚಿಕೊಂಡಿದ್ದಾರೆ.

ಇದೇ ಜನವರಿ 20ರಂದು ದುನಿಯಾ ವಿಜಯ್ (Duniya Vijay) ಹುಟ್ಟುಹಬ್ಬವಿದೆ. ಹೀಗಾಗಿ ಪ್ರತಿ ಬಾರಿಯಂತೆ ಈ ಬಾರಿಯೂ ವಿಜಯ್ ತಮ್ಮ ಅಭಿಮಾನಿಗಳನ್ನು ಭೇಟಿಯಾಗಲಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ತನ್ನ ಹುಟ್ಟೂರಾದ ಕುಂಬಾರನಹಳ್ಳಿಯಲ್ಲಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ.

Share This Article