ಕನ್ನಡ ಚಿತ್ರರಂಗ ರಾಷ್ಟ್ರಮಟ್ಟದಲ್ಲಿ ಮಿಂಚಿದ ಕ್ಷಣ- ನ್ಯಾಷನಲ್‌ ಅವಾರ್ಡ್‌ ಬಂದಿದ್ದಕ್ಕೆ ಯಶ್‌ ಸಂತಸ

Public TV
1 Min Read

ನ್ಯಾಷನಲ್‌ ಸ್ಟಾರ್‌ ಯಶ್‌ ಅವರು ‘ಕೆಜಿಎಫ್ 2’ (KGF 2) ಚಿತ್ರಕ್ಕೆ ಎರಡು ರಾಷ್ಟ್ರೀಯ ಪ್ರಶಸ್ತಿ ಬಂದಿದ್ದಕ್ಕೆ, ಇದು ನಿಜಕ್ಕೂ ಕನ್ನಡ ಚಿತ್ರರಂಗ ರಾಷ್ಟ್ರಮಟ್ಟದಲ್ಲಿ ಮಿಂಚಿದ ಕ್ಷಣ ಎಂದು ಸಂಭ್ರಮಿಸಿದ್ದಾರೆ. ಈ ಕುರಿತು ಸೋಷಿಯಲ್‌ ಮೀಡಿಯಾದಲ್ಲಿ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.


‘ಕೆಜಿಎಫ್ 2’ (KGF 2) ಸಿನಿಮಾಗೆ ಎರಡು ನ್ಯಾಷನಲ್ ಅವಾರ್ಡ್ ಸಿಕ್ಕ ಹಿನ್ನೆಲೆ ಯಶ್ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿ, ಇದು ನಿಜಕ್ಕೂ ಕನ್ನಡ ಚಿತ್ರರಂಗ ರಾಷ್ಟ್ರಮಟ್ಟದಲ್ಲಿ ಮಿಂಚಿದ ಕ್ಷಣ ಎಂದಿದ್ದಾರೆ. ನಟ ರಿಷಬ್ ಶೆಟ್ಟಿ, ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರ್ ಮತ್ತು ಪ್ರಶಾಂತ್ ನೀಲ್‌ಗೆ ಅಭಿನಂದನೆಗಳು. ‘ಕಾಂತಾರ’ (Kantara) ಹಾಗೂ ‘ಕೆಜಿಎಫ್ 2’ಗೆ ಪ್ರಶಸ್ತಿ ಬಂದಿರುವುದು ಅರ್ಹವಾದ ಮನ್ನಣೆಯಾಗಿದೆ ಎಂದು ಯಶ್ ಸಂತಸ ವ್ಯಕ್ತಪಡಿಸಿದ್ದಾರೆ.

ಇನ್ನೂ ಹೊಂಬಾಳೆ ಸಂಸ್ಥೆ ನಿರ್ಮಾಣದ ಅತ್ಯುತ್ತಮ ಮನರಂಜನಾ ಚಿತ್ರ ‘ಕಾಂತಾರ’, ಮತ್ತು ‘ಕಾಂತಾರ’ (Kantara) ಚಿತ್ರದ ನಟನೆಗಾಗಿ ಅತ್ಯುತ್ತಮ ನಟ ಪ್ರಶಸ್ತಿ ರಿಷಬ್ ಶೆಟ್ಟಿಗೆ ಸಿಕ್ಕಿದೆ. ಜೊತೆಗೆ ಅತ್ಯುತ್ತಮ ಪ್ರಾದೇಶಿಕ ಸಿನಿಮಾ, ಅತ್ಯುತ್ತಮ ಸಾಹಸ ನಿರ್ದೇಶನ ‘ಕೆಜಿಎಫ್ 2’ಗೆ ಸಿಕ್ಕಿದೆ.

Share This Article