ಮತ್ತೆ ಕಿರುತೆರೆಗೆ ಎಂಟ್ರಿ ಕೊಟ್ಟ ಅದಿತಿ ಪ್ರಭುದೇವ

Public TV
1 Min Read

ಸ್ಯಾಂಡಲ್ವುಡ್ ನಟಿ ಅದಿತಿ ಪ್ರಭುದೇವ (Aditi Prabhudeva) ಇತ್ತೀಚೆಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಮಗುವಿನ ಪಾಲನೆಯಲ್ಲಿ ಬ್ಯುಸಿಯಿದ್ದ ನಟಿ ಈಗ ಕ್ಯಾಮೆರಾ ಮುಂದೆ ಬಂದಿದ್ದಾರೆ. ಮತ್ತೆ ಕಿರುತೆರೆಗೆ ಎಂಟ್ರಿ ಕೊಡುವ ಮೂಲಕ ಫ್ಯಾನ್ಸ್‌ಗೆ ಸಿಹಿಸುದ್ದಿ ನೀಡಿದ್ದಾರೆ.

ವಿಶಿಷ್ಟ ಜೋಡಿಗಳ ಸಮಾಗಮದ ‘ರಾಜ ರಾಣಿ’ (Raja Rani) ಶೋನಲ್ಲಿ ಅದಿತಿ ಪ್ರಭುದೇವ ಜಡ್ಜ್ ಆಗಿ ಎಂಟ್ರಿ ಕೊಡ್ತಿದ್ದಾರೆ. ಸೃಜನ್ ಲೋಕೇಶ್, ಹಿರಿಯ ನಟಿ ತಾರಾ ಜೊತೆ ಅದಿತಿ ಕೂಡ ಜಡ್ಜ್ ಆಗಿ ಸಾಥ್ ನೀಡುತ್ತಿದ್ದಾರೆ. ಇದನ್ನೂ ಓದಿ:ಟ್ರೋಲಿಗರ ವಿರುದ್ಧ ಸಿಡಿದೆದ್ದ ‘ಬಿಗ್‌ ಬಾಸ್‌’ ಮಾಜಿ ಸ್ಪರ್ಧಿ- ಸೈಬರ್ ಠಾಣೆಗೆ ಸುಷ್ಮಾ ವೀರ್ ದೂರು

ಸದ್ಯ ರಿಲೀಸ್ ಆಗಿರುವ ‘ರಾಜ ರಾಣಿ’ ಶೋನ ಪ್ರೋಮೋದಲ್ಲಿ ಅದಿತಿ ಸ್ಟೈಲೀಶ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ರೆಡ್ ಕಲರ್ ಗೌನ್‌ನಲ್ಲಿ ಮಿಂಚಿದ್ದಾರೆ. ಬಹುದಿನಗಳ ನಂತರ ನೆಚ್ಚಿನ ನಟಿಯನ್ನು ನೋಡಿ ಅಭಿಮಾನಿಗಳು ಖುಷಿಪಡ್ತಿದ್ದಾರೆ. ಮಗು ಆಗಿ ಎರಡು ತಿಂಗಳು ಆಗಿದೆ. ಆ ಮಗುವನ್ನು ಬಿಟ್ಟು ಶೂಟಿಂಗ್ ಬರುತ್ತಿರಾ ಎಂದು ನೆಟ್ಟಿಗರು ಬಗೆ ಬಗೆಯ ಕಾಮೆಂಟ್‌ಗಳನ್ನು ಮಾಡಿದ್ದಾರೆ.

ಇನ್ನೂ ‘ರಾಜ ರಾಣಿ’ ಶೋನಲ್ಲಿ ಏನೆಲ್ಲಾ ಹೊಸತನ ಇರಲಿದೆ ಎಂಬುದರ ಬಗ್ಗೆ ಅಭಿಮಾನಿಗಳು ಕ್ಯೂರಿಯಸ್ ಆಗಿದ್ದಾರೆ.

2022ರಲ್ಲಿ ಕೊಡಗಿನ ಬ್ಯುಸಿನೆಸ್‌ಮೆನ್ ಯಶಸ್ ಪಾಟ್ಲಾರನ್ನು ಅದಿತಿ ಮದುವೆಯಾದರು. ಏ.4ರಂದು ನಟಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

Share This Article