ನಟಿ ಅನುಪಮಾ ‘ಲಿಪ್ ಲಾಕ್’ ಬಲು ದುಬಾರಿ

Public TV
1 Min Read

ಕ್ಷಿಣದ ಖ್ಯಾತ ನಟಿ ಅನುಪಮಾ ಪರಮೇಶ್ವರನ್ ಟಿಲ್ಲು ಸ್ಕ್ವೇರ್ ಸಿನಿಮಾದಲ್ಲಿ ಸಖತ್ ಬೋಲ್ಡ್ ಆಗಿ ನಟಿಸಿದ್ದಾರೆ. ಕಾರಿನಲ್ಲಿ ಕೂತುಕೊಂಡು ನಾಯಕ ನಟನ ಜೊತೆ ಲಿಪ್ ಲಾಕ್ ಮಾಡಿಕೊಂಡಿದ್ದಾರೆ. ಇದೊಂದು ದುಬಾರಿ ಲಿಪ್ ಲಾಕ್ ಎಂದು ಬಣ್ಣಿಸಲಾಗುತ್ತಿದೆ. ಕಾರಣ ಅನುಪಮಾ ಈ ಸಿನಿಮಾಗಾಗಿ ಡಬಲ್ ಸಂಭಾವನೆಯನ್ನು ಪಡೆದಿದ್ದಾರಂತೆ.

ಸಾಮಾನ್ಯವಾಗಿ ಅನುಪಮಾ ಸಿನಿಮಾವೊಂದಕ್ಕೆ ಒಂದು ಕೋಟಿ ಅಥವಾ ಒಂದೂವರೆ ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ. ಈ ಸಿನಿಮಾಗಾಗಿ ಅವರು ಎರಡು ಕೋಟಿಗೂ ಹೆಚ್ಚು ಸಂಭಾವನೆ ಪಡೆದಿದ್ದಾರಂತೆ. ಕಾರಣ ಪಾತ್ರ ಸಖತ್ ಬೋಲ್ಡ್ ಆಗಿ ಇರುವುದೇ ಆಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಕನ್ನಡವೂ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ನಟಿ ಅನುಪಮಾ ಪರಮೇಶ್ವರನ್  (Anupama Parameswaran)ಇದೀಗ ಟಿಲ್ಲು ಸ್ಕ್ವೇರ್ ಸಿನಿಮಾದಲ್ಲಿ ಹೊಸ ಬಗೆಯ ಪಾತ್ರ ಮಾಡಿದ್ದಾರೆ. ಸಿದ್ದು ಜೊನ್ನಲಗಡ್ಡ ಜೊತೆಯಾಗಿ ನಟಿಸಿರುವ ಅನುಪಮಾ ಅಭಿಮಾನಿಗಳಿಗೆ ಮತ್ತೇರಿಸುವಂತ ದೃಶ್ಯದಲ್ಲಿ ಕಾಣಿಸಿಕೊಂಡಿದ್ದಾರೆ.

ಬೋಲ್ಡ್ ಪಾತ್ರಗಳಲ್ಲಿ ಮಾಡಲ್ಲ ಅಂತಿದ್ದ ಈ ನಟಿ ಟಿಲ್ಲು ಸ್ಕ್ವೇರ್ (Tillu Square) ಸಿನಿಮಾದಲ್ಲಿ ಬೋಲ್ಡ್ ಆಗಿ ನಟಿಸಿದ್ದಾರೆ. ಜೊತೆಗೆ ಲಿಪ್ ಲಾಕ್ (Lip Lock) ಕೂಡ ಮಾಡಿದ್ದಾರೆ. ಈ ಹಿಂದೆ ರೌಡಿ ಬಾಯ್ಸ್ ಸಿನಿಮಾದಲ್ಲಿ ಈ ರೀತಿಯ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರೂ, ಅಭಿಮಾನಿಗಳಿಗೆ ಅಷ್ಟೇನೂ ಅವು ಮತ್ತೇರಿಸಿರಲಿಲ್ಲ.

ಟಿಲ್ಲು ಸ್ಕ್ವೇರ್ ಸ್ವೀಕೆಲ್ ಸಿನಿಮಾ. ಈ ಹಿಂದೆ 2022ರಲ್ಲಿ ಬಿಡುಗಡೆಯಾಗಿದ್ದ ಡಿಜೆ ಟಿಲ್ಲು ಸಿನಿಮಾದ ಮುಂದುವರೆದ ಭಾಗ ಇದಾಗಿದೆ.  ಟಿಲ್ಲು ಸ್ಕ್ವೇರ್ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು ಅನುಪಮಾ ಅಚ್ಚರಿ ಎನ್ನುವಂತೆ ಬೋಲ್ಡ್ ಸ್ಟೆಪ್ ಇಟ್ಟಿದ್ದಾರೆ.  ಈ ಸಿನಿಮಾವನ್ನು ಮಲ್ಲಿಕ್ ರಾಮ್ ನಿರ್ದೇಶನ ಮಾಡಿದ್ದು, ಸೂರ್ಯದೇವರ ನಾಗ್ ವಂಶಿ ನಿರ್ಮಾಣ ಮಾಡಿದ್ದಾರೆ.

 

ಅನುಪಮಾ ಈ ಹಿಂದೆ ಈಗಲ್ ಸಿನಿಮಾದಲ್ಲಿ ನಟಿಸಿದ್ದರು. ಆ ಸಿನಿಮಾ ಸೂಪರ್ ಹಿಟ್ ಆಗಿತ್ತು. ಈ ಬೆನ್ನಲ್ಲೆ ಟಿಲ್ಲು ಸ್ಕ್ವೇರ್ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಮಾರ್ಚ್ 29ರಂದು ವಿಶ್ವದಾದ್ಯಂತ ಬಿಡುಗಡೆ ಆಗುತ್ತಿದೆ.

Share This Article