ತಂದೆ ಸ್ಥಾನವನ್ನೂ ತುಂಬಿ ಮಗಳಿಗೆ ಹೆಸರಿಟ್ಟ ನಟಿ ದಿವ್ಯಾ ಶ್ರೀಧರ್

Public TV
2 Min Read

ನ್ನಡದ ‘ಆಕಾಶದೀಪ’ (Akashadeepa) ಸೀರಿಯಲ್ ನಟಿ ದಿವ್ಯಾ ಶ್ರೀಧರ್ (Divya Shridhar) ತಮಿಳು ಕಿರುತೆರೆಗೆ ಹಾರಿ, ಅಲ್ಲಿಯೂ ಸಾಕಷ್ಟು ಫೇಮಸ್ ಆಗಿದ್ದರು. ನಟ ಆರ್ನವ್ ಜೊತೆ ಮದುವೆಯಾಗಿ ಇದೀಗ ಇಬ್ಬರೂ ದೂರವಾಗಿದ್ದಾರೆ. ದಿವ್ಯಾ ಗರ್ಭಿಣಿಯಾಗಿದ್ದಾರೆ ಎನ್ನುವ ಕಾರಣಕ್ಕಾಗಿ ಆರ್ನವ್ ದೂರವಾಗಿದ್ದಾನೆ ಎನ್ನುವುದು ಆರೋಪ. ಆನಂತರ ದಿವ್ಯಾ ಏಪ್ರಿಲ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆ ಮಗುವಿಗೆ ಈಗ ತಂದೆ ಸ್ಥಾನದಲ್ಲೂ ನಿಂತು ಪ್ರಾಯುಷಿ (Prausi) ಎಂದು ಹೆಸರಿಟಿದ್ದಾರೆ. ಸ್ನೇಹಿತರು ಮತ್ತು ಕುಟುಂಬ ಈ ಸಂದರ್ಭದಲ್ಲಿ ಹಾಜರಿತ್ತು.

ಮಗು ಹುಟ್ಟಿದ ಒಂದೇ ತಿಂಗಳಿಗೆ ಚಿತ್ರೀಕರಣದಲ್ಲಿ ಭಾಗಿ

ಮಗು ಹುಟ್ಟಿದ ಒಂದೇ ತಿಂಗಳಿಗೆ ಹಸುಗೂಸನ್ನ (Child) ಶೂಟಿಂಗ್ (Shooting)  ಕರೆದುಕೊಂಡು ಕೆಲಸ ಮಾಡುವ ಪರಿಸ್ಥಿತಿ ಎದುರಾಗಿದೆ ಎಂದು ದಿವ್ಯಾ ಹೇಳಿಕೊಂಡಿದ್ದರು. ಚಿತ್ರೀಕರಣ ಮತ್ತು ಮಗು ಪಾಲನೆ ಎರಡನ್ನು ಹೇಗೆ ನಿಭಾಯಿಸುತ್ತಿದ್ದಾರೆ ಎಂದು ವರ್ಕಿಂಗ್ ವುಮೆನ್ ಬಗ್ಗೆ ನಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ಆಕಾಶದೀಪ, ಅಮ್ಮಾ, ಸೀರಿಯಲ್ ಸೇರಿದಂತೆ ‘ಸನಿಹ’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದರು. ಬಳಿಕ ತಮಿಳು ಸೀರಿಯಲ್‌ನಲ್ಲಿ ನಟಿ ಬ್ಯುಸಿಯಾದರು. ತಮಿಳು ನಟ ಅರ್ನವ್ ಜೊತೆಗಿನ ದಾಂಪತ್ಯದಲ್ಲಿ ಬಿರುಕಿನ ಬೆನ್ನಲ್ಲೇ ನಟಿ ಪೊಲೀಸ್ ಠಾಣೆ ಮಟ್ಟಿಲೇರಿ ಸುದ್ದಿಯಾದರು. ಏಪ್ರಿಲ್ 7ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಅದಾಗಿ ಒಂದು ತಿಂಗಳು ಕಳೆಯುತ್ತಿದ್ದಂತೆ, ಮೇ 21ರಿಂದಲೇ ಅವರು ಮತ್ತೆ ಕೆಲಸ ಶುರು ಮಾಡಿದ್ದಾರೆ. ಹಸುಗೂಸನ್ನು ಕೂಡ ಅವರು ಶೂಟಿಂಗ್ ಸ್ಥಳಕ್ಕೆ ಕರೆದುಕೊಂಡು ಹೋಗಬೇಕಾದ ಪರಿಸ್ಥಿತಿ ಇದೆ. ಕೆಲಸ ಮಾಡುವ ಮಹಿಳೆ ಮಾಡದಿರುವ ಕೆಲಸ ಇಲ್ಲ, ಮರಳಿ ಕೆಲಸಕ್ಕೆ ಎಂದು ದಿವ್ಯಾ ಶ್ರೀಧರ್ ಅವರು ಇಬ್ಬರು ಹೆಣ್ಣು ಮಕ್ಕಳ ಜೊತೆಗೆ ಶೂಟಿಂಗ್ ಸ್ಥಳಕ್ಕೆ ಬರುವ ವಿಡಿಯೋವನ್ನು ಹಂಚಿಕೊಂಡಿದ್ದರು.

ತಾಯಿಯ ಸಂಪತ್ತು ಮಗಳು ಎಂದು ಮುದ್ದು ಮಗಳ ಜೊತೆಗೆ ಆಟ ಆಡುತ್ತಿರುವ ವಿಡಿಯೋವನ್ನು ‘ಆಕಾಶದೀಪ’ ನಟಿ ದಿವ್ಯಾ ಹಂಚಿಕೊಂಡಿದ್ದರು. ದಿವ್ಯಾ ಅವರಿಗೆ ಮೊದಲ ಮದುವೆಯಿಂದ ಓರ್ವ ಹೆಣ್ಣು ಮಗಳಿದ್ದಾಳೆ. ಆ ನಂತರ ಪತಿಗೆ ವಿಚ್ಛೇದನ ಕೊಟ್ಟ ಬಳಿಕ ಅವರು ಅರ್ನವ್ (Arnaav) ಎನ್ನುವವರನ್ನು ಮದುವೆಯಾಗಿದ್ದಾರೆ. ಪರಭಾಷೆಯ ಸೀರಿಯಲ್‌ನಲ್ಲಿ ಆಕ್ಟೀವ್ ಆಗಿದ್ದ ವೇಳೆ ಅವರು ಸಹನಟ ಆರವ್ ಜೊತೆ ಸ್ನೇಹ ಬೆಳೆಸಿದರು, ಅದು ಪ್ರೀತಿಗೆ ತಿರುಗಿತ್ತು. ಆ ನಂತರ ಆರವ್, ದಿವ್ಯಾ ಅವರು ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದರು. ಆ ನಂತರ ಇವರಿಬ್ಬರು ಖಾಸಗಿಯಾಗಿ ಕೆಲವೇ ಕೆಲವರ ಸಾಕ್ಷಿಯಾಗಿ ಹಿಂದು, ಮುಸ್ಲಿಂ ಸಮುದಾಯದ ಪ್ರಕಾರ ಮದುವೆಯಾದರು.

 

ದಿವ್ಯಾ ಅವರು ಗರ್ಭಿಣಿಯಾದಾಗ ಇವರಿಬ್ಬರ ಮಧ್ಯೆ ಮನಸ್ತಾಪ ಶುರುವಾಗಿತ್ತು. ಆರವ್ ನನ್ನ ಕೇರ್ ಮಾಡೋದಿಲ್ಲ, ನಾನು ಟ್ಯಾಬ್ಲೆಟ್ ತಗೊಂಡೆನಾ? ಬಿಟ್ನಾ ಅಂತ ಕೇಳೋದಿಲ್ಲ, ನನ್ನ ಮೇಲೆ ಹಲ್ಲೆ ಮಾಡಿದ್ದಾನೆ ಅಂತ ದಿವ್ಯಾ ಅವರು ಪೊಲೀಸ್ ಠಾಣೆ ಮೆಟ್ಟಿಲೇರಿ ಆರವ್ ವಿರುದ್ಧ ದೂರು ನೀಡಿದ್ದರು. ಆರವ್ ಹಾಗೂ ದಿವ್ಯಾ ಅವರು ಪರಸ್ಪರ ಸಾಕಷ್ಟು ಆರೋಪ ಮಾಡಿಕೊಂಡಿದ್ದರು. ಈಗ ಎರಡನೇ ಪತಿಯಿಂದ ದೂರ ಆಗಿರುವ ದಿವ್ಯಾ ಅವರು ಇಬ್ಬರು ಹೆಣ್ಣು ಮಕ್ಕಳನ್ನು ನೋಡಿಕೊಳ್ಳುತ್ತಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್