Breaking- ಆಗಸ್ಟ್ 24ಕ್ಕೆ ನಟಿ ಹರ್ಷಿಕಾ-ನಟ ಭುವನ್ ಮ್ಯಾರೇಜ್

Public TV
1 Min Read

ಸ್ಯಾಂಡಲ್ ವುಡ್ (Sandalwood) ಜೋಡಿ ಹರ್ಷಿಕಾ ಪೂಣಚ್ಚ (Harshika Poonacha) ಮತ್ತು ಭುವನ್ ಪೊನ್ನಣ್ಣ (Bhuvan Ponnanna) ಕೊನೆಗೂ ಹಸೆಮಣೆ ಏರುತ್ತಿದ್ದಾರೆ. ತುಂಬಾ ವರ್ಷಗಳಿಂದ ಈ ಜೋಡಿ ಪ್ರೀತಿ ಪ್ರೇಮದ ಗೀತೆಗಳನ್ನು ಹಾಡಿಕೊಂಡಿದ್ದರು. ಮದುವೆ (Marriage) ವಿಚಾರವಾಗಿ ಇಬ್ಬರೂ ತಪ್ಪಿಸಿಕೊಳ್ಳುತ್ತಿದ್ದರು. ಇದೀಗ ಮದುವೆ ಆಮಂತ್ರಣ ನೀಡುವ ಮೂಲಕ ಸತಿಪತಿಯಾಗುತ್ತಿದ್ದಾರೆ.

ಮೊನ್ನೆಯಷ್ಟೇ ಕೊಡಗಿನ (Kodagu) ಇಗ್ಗುತ್ತಪ್ಪ ದೇವಾಲಯದಲ್ಲಿ ಲಗ್ನಪತ್ರಿಕೆ ಕಾರ್ಯ ಸರಳವಾಗಿ ನಡೆದಿದೆ. ಎರಡೂ ಕುಟುಂಬದ ಸದಸ್ಯರು ಮತ್ತು ಆತ್ಮೀಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮದುವೆಯಲ್ಲಿ ಈ ಜೋಡಿಯ ಆತ್ಮೀಯರು, ಸಿನಿಮಾ ರಂಗದ ಗಣ್ಯರು ಭಾಗಿಯಾಗಲಿದ್ದಾರೆ.  ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ 30 ಸೆಕೆಂಡ್ ಲಿಪ್ ಲಾಕ್: ಕಣ್ಮುಚ್ಚಿಕೊಂಡ ಪೂಜಾ ಭಟ್

 

ಮದುವೆ ಆಮಂತ್ರಣ ಪತ್ರಿಕೆ ಕೂಡ ಸಿದ್ಧವಾಗಿದ್ದು, ಕೊಡಗು ಭಾಷೆಯಲ್ಲೇ ಆಮಂತ್ರಣ ಪತ್ರಿಕೆಯನ್ನು ಮುದ್ರಿಸಲಾಗಿದೆ. ಕೊಡಗು ಸಂಪ್ರದಾಯದಂತೆಯೇ ಇಬ್ಬರೂ ಮದುವೆ ಆಗುತ್ತಿದ್ದು, ಮುಹೂರ್ತ ಕಾರ್ಯಗಳು ಬಹುತೇಕವಾಗಿ ಕೊಡಗಿನಲ್ಲೇ ನಡೆಯಲಿವೆ. ಭುವನ್ ಮತ್ತು ಹರ್ಷಿಕಾ ಇಬ್ಬರೂ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರೂ ಒಟ್ಟಿಗೆ ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ಭಾಗಿಯಾಗಿದ್ದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್