ಡ್ರಗ್ಸ್ ಪ್ರಕರಣ: ಕೇಸ್ ಇತ್ಯರ್ಥ ಆಗೋತನಕ ತೆಲುಗು ಕಲಾವಿದರ ಸಂಘದಿಂದ ಹೇಮಾ ಅಮಾನತು

Public TV
1 Min Read

ತೆಲುಗು ನಟಿ ಹೇಮಾ ಬೆಂಗಳೂರಿನ ರೇವ್ ಪಾರ್ಟಿ (Bengaluru Rave Party) ವಿಚಾರವಾಗಿ ಇದೀಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಬೆನ್ನಲ್ಲೇ ಮತ್ತೊಂದು ಸಂಕಷ್ಟ ನಟಿಗೆ ಎದುರಾಗಿದೆ. ಕೇಸ್ ಇತ್ಯರ್ಥ ಆಗೋತನಕ ತೆಲುಗು ಕಲಾವಿದರ ಸಂಘದಿಂದ ಹೇಮಾರನ್ನು (Actress Hema) ಅಮಾನತು ಮಾಡಲಾಗಿದೆ.

ಬೆಂಗಳೂರಿನ ರೇವ್ ಪಾರ್ಟಿ ವಿಚಾರ ಬೆಳಕಿಗೆ ಬಂದ ದಿನದಿಂದ ತಾವು ಹೈದರಾಬಾದ್‌ನಲ್ಲಿರೋದಾಗಿ ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದರು. ಈ ವೇಳೆ ತೆಲುಗು ಕಲಾವಿದರ ಸಂಘದ ಅಧ್ಯಕ್ಷ ನಟ ಕಮ್ ನಿರ್ಮಾಪಕ ಮಂಚು ವಿಷ್ಣು (Manchu Vishnu) ಅವರು ಹೇಮಾ ಪರ ಮಾತನಾಡಿದ್ದರು. ಇದೀಗ ಜೂನ್ 14ರವರೆಗೆ ನಟಿಯನ್ನು ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯವು ಒಪ್ಪಿಸಿದ ಬೆನ್ನಲ್ಲೇ ಇದೀಗ ರೇವ್ ಪಾರ್ಟಿ ಪ್ರಕರಣ ಇತ್ಯರ್ಥ ಆಗೋತನಕ ತೆಲುಗು ಕಲಾವಿದರ ಸಂಘದಿಂದ ಹೇಮಾರನ್ನು ಅಮಾನತು (Suspended) ಮಾಡಲಾಗಿದೆ. ಈ ನಿರ್ಧಾರವನ್ನು ತೆಲುಗು ಕಲಾವಿದರ ಸಂಘದ ಅಧ್ಯಕ್ಷ ಮಂಚು ವಿಷ್ಣು ಕೈಗೊಂಡಿದ್ದಾರೆ.

ಇತ್ತೀಚೆಗೆ ಮಂಚು ವಿಷ್ಣು ಅವರು, ಹೇಮಾ ಅವರು ತಪ್ಪು ಮಾಡಿದ್ದನ್ನು ಪೊಲೀಸರು ಸಾಬೀತುಪಡಿಸಿದರೆ ಖಂಡಿತಾ ಕಲಾವಿದರ ಸಂಘದಿಂದ ಹೇಮಾ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು. ಇದನ್ನೂ ಓದಿ:ಕರ್ನಾಟಕದಲ್ಲಿ ʻಹಮಾರೆ ಬಾರಾಹ್ʼ ಸಿನಿಮಾ ಬಿಡುಗಡೆಗೆ ನಿಷೇಧ


ಅಂದಹಾಗೆ, ಹೇಮಾ ಸುಮಾರು 250 ಚಿತ್ರಗಳಲ್ಲಿ ನಟಿಸಿದ್ದಾರೆ. ಸ್ಟಾರ್ ನಟರ ಚಿತ್ರಗಳಲ್ಲಿ ಖಾಯಂ ಪೋಷಕ ನಟಿಯಾಗಿ ಹೇಮಾ ಕೆಲಸ ಮಾಡಿದ್ದಾರೆ. ಕನ್ನಡದಲ್ಲೂ ನಟಿಸಿದ್ದ ಹೇಮಾ 2014ರಲ್ಲಿ ಪುನೀತ್ ರಾಜ್‌ಕುಮಾರ್ ನಟನೆಯ ಪವರ್ ಚಿತ್ರದಲ್ಲೂ ಕಾಣಿಸಿಕೊಂಡಿದ್ದರು. ವಿನಯ ವಿಧೇಯ ರಾಮ, ಸನ್ ಆಫ್ ಸತ್ಯಮೂರ್ತಿ, ಡಿಕ್ಟೇಟರ್, ಅತ್ತಾರಿಂಟಿಕಿ ದಾರೇದಿ, ಮಿರ್ಚಿ, ರಭಸ, ಬೃಂದಾವನಂ, ರೆಬೆಲ್, ಜುಲಾಯ್, ಮಗಧೀರ ಸೇರಿ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ.

Share This Article