ಗಂಡು ಮಗುವಿಗೆ ಜನ್ಮ ನೀಡಿದ ನಟಿ ಇಲಿಯಾನಾ

By
2 Min Read

ಬಾಲಿವುಡ್ ಬ್ಯೂಟಿ ಇಲಿಯಾನಾ (Ileana D’cruz) ಅವರು ಕೆಲವು ತಿಂಗಳು ಹಿಂದೆ ತಾವು ತಾಯಿಯಾಗುತ್ತಿರುವ ವಿಚಾರವನ್ನ ತಿಳಿಸಿದ್ದರು. ಈಗ ಗಂಡು ಮಗುವಿಗೆ (Baby Boy) ನಟಿ ಜನ್ಮ ನೀಡಿದ್ದಾರೆ. ಮುದ್ದಾದ ಮಗುವಿಗೆ ಹೆಸರನ್ನ ಕೂಡ ನಾಮಕರಣ ಮಾಡಿದ್ದಾರೆ.

ಕನ್ನಡದ ‘ಹುಡುಗ ಹುಡುಗಿ’ ನಟಿ ಇಲಿಯಾನಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಆಗಸ್ಟ್ 1ರಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ವಿಚಾರವನ್ನ ತಡವಾಗಿ ರಿವೀಲ್ ಮಾಡಿದ್ದಾರೆ. ಕೋವಾ ಫೀನಕ್ಸ್ ಡೋಲನ್ (K0a phoenix Dolan) ಎಂದು ಮಗುವಿಗೆ ಹೆಸರಿಟ್ಟಿದ್ದಾರೆ. ಮಗುವಿನ ಜನನದ ವಿಚಾರ ಹೇಳ್ತಿದ್ದಂತೆ, ಮಗುವಿನ ತಂದೆ ಯಾರು ರಿವೀಲ್ ಮಾಡಿ ಎಂದು ಫ್ಯಾನ್ಸ್ ಬೇಡಿಕೆ ಇಟ್ಟಿದ್ದಾರೆ. ಪದಗಳಲ್ಲಿ ನಮ್ಮ ಸಂತಸವನ್ನು ಹೇಳಿಕೊಳ್ಳಲು ಆಗುತ್ತಿಲ್ಲ. ಈ ಪ್ರಪಂಚಕ್ಕೆ ನಮ್ಮ ಮಗುವಿನ ಆಗಮನವಾಗಿದೆ. ಅವನಿಗೆ ಸ್ವಾಗತ ಎಂದು ಸಂಭ್ರಮದಿಂದ ನಟಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಧ್ಯಾನ್ ಜೊತೆ ಕನ್ನಡದ ಹುಡುಗ-ಹುಡುಗಿ (Huduga Hudugi) ಸಿನಿಮಾದಲ್ಲಿ ಇಲಿಯಾನಾ ಸೊಂಟ ಬಳುಕಿಸಿದ್ದರು. ಸೌತ್- ಹಿಂದಿ ಸಿನಿಮಾಗಳ ಮೂಲಕ ಗಮನ ಸೆಳೆದಿರೋ ಈ ಸುಂದರಿ ಏಪ್ರಿಲ್‌ನಲ್ಲಿ ತಾವು ಪ್ರೆಗ್ನೆಂಟ್ ಎನ್ನುವ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇಲಿಯಾನಾಗೆ ಇನ್ನೂ ಮದುವೆ ಆಗಿಲ್ಲ. ಹೀಗಾಗಿ, ಈ ಮಗುವಿಗೆ ತಂದೆ ಯಾರು ಎನ್ನುವ ಪ್ರಶ್ನೆ ಸಹಜವಾಗಿ ಅಭಿಮಾನಿಗಳಿಗೆ ಕುತೂಹಲ ಮೂಡಿತ್ತು. ಇಷ್ಟು ದಿನ ಮಗುವಿನ ತಂದೆ ಬಗ್ಗೆ ನಟಿ ಗುಟ್ಟಾಗಿ ಇಟ್ಟಿದ್ದರು. ಇತ್ತೀಚಿಗೆ ಬಾಯ್‌ಫ್ರೆಂಡ್ ಮುಖವನ್ನು ಇಲಿಯಾನಾ ರಿವೀಲ್ ಮಾಡಿದ್ದರು. ಅಚ್ಚರಿ ಎಂದರೆ ಆ ವ್ಯಕ್ತಿಯ ಹೆಸರನ್ನು ಅವರು ಗುಟ್ಟಾಗಿಯೇ ಇಟ್ಟಿದ್ದಾರೆ. ಇದನ್ನೂ ಓದಿ:ಬೇರೆ ಸಿನಿಮಾ ರಂಗದಿಂದ ಆಫರ್ ಬಂದಿದ್ದು ನಿಜ, ನನ್ನ ಮೊದಲ ಆದ್ಯತೆ ಕಾಂತಾರ 2 : ರಿಷಬ್

ಸೆಲೆಬ್ರಿಟಿಗಳ ಲೈಫಿನಲ್ಲಿ ಲವ್, ಡೇಟಿಂಗ್, ಬ್ರೇಕಪ್ ಎಲ್ಲವೂ ಸರ್ವೇ ಸಾಮಾನ್ಯ. ಇದರ ಜೊತೆಗೆ ಮದುವೆ ಆಗದೆ ಮಗು ಪಡೆಯೋದು, ಮದುವೆ ಆದ ಕೆಲವೇ ತಿಂಗಳಿಗೆ ತಂದೆ- ತಾಯಿ ಆಗೋದು ಕಾಮನ್. ಇಲಿಯಾನಾ ಕೂಡ ಇದೇ ಸಾಲಿಗೆ ಸೇರುತ್ತಾರೆ. ಈಗ ನಟಿ ಶೇರ್ ಮಾಡಿರುವ ಫೋಟೋದಲ್ಲಿ ಅವರ ಪಕ್ಕ ಓರ್ವ ವ್ಯಕ್ತಿಯೊಬ್ಬರಿದ್ದರು. ಈ ಸ್ಟೇಟಸ್‌ಗೆ ಡೇಟ್ ನೈಟ್ ಎನ್ನುವ ಅಡಿಬರಹ ನೀಡಿದ್ದರು. ಈ ಮೂಲಕ ಇಷ್ಟು ದಿನ ಗುಟ್ಟಾಗಿ ಇಟ್ಟ ವಿಚಾರ ರಿವೀಲ್ ಮಾಡಿದ್ದರು. ಅವರ ಹೆಸರನ್ನು ನಟಿ ತಿಳಿಸಿಲ್ಲ.

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್